ಹಡೆದ ತಾಯಿಯಿಂದಲೇ ಮಗಳ ಕೊಲೆಯಾಗಿರುವ ಘಟನೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಿನ್ನೆ ಸಂಜೆ 7.30 ರ ಸುಮಾರಿಗೆ ನಡೆದಿದೆ.
ಸಾಹಿತಿ(18), ತಾಯಿಯಿಂದಲೇ ಕೊಲೆಯಾದ ಮಗಳು.
ಮನೆಯಲ್ಲಿ ತಾಯಿ ಮತ್ತು ಮಗಳು ಇಬ್ಬರೇ ವಾಸವಾಗಿದ್ದರು. ನಿನ್ನೆ ಸಂಜೆ ತಾಯಿ ಮತ್ತು ಮಗಳು ಇಬ್ಬರು ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಇಬ್ಬರೂ ಪರಸ್ಪರ ಚಾಕುವಿನಿಂದ ಇರಿದುಕೊಂಡಿದ್ದಾರೆ, ತಾಯಿ ಬಲವಾಗಿ ಚಾಕುವಿನಿಂದ ಮಗಳಿಗೆ ಇರಿದ ಕಾರಣ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ, ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಗಳಿಗೆ ತಾಯಿ ನಾಲ್ಕೈದು ಬಾರಿ ಚಾಕು ಇರಿದಿದ್ದಾರೆ ಎನ್ನಲಾಗಿದೆ. ತಾಯಿಗೆ ಮಗಳು ಮೂರು ಬಾರಿ ಚಾಕು ಇರಿದಿದ್ದಾರೆ. ಸೆಕೆಂಡ್ ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ ಮಗಳ ನಡುವೆ ಜಗಳವಾಗಿರುವ ಶಂಕೆ ವ್ಯಕ್ತವಾಗಿದೆ.
ಈ ಕುರಿತು ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…