ಹೆತ್ತ ಮಗನಿಂದಲೆ ತಾಯಿಯ ಕತ್ತು ಕೊಯ್ದು ಕೊಲೆಯಾಗಿರುವ ಘಟನೆ ತಾಲೂಕಿನ ಮುದ್ದನಾಯಕನಪಾಳ್ಯ ಸಮೀಪದ ರಾಗರಾಳ್ಳಗುಟ್ಟ ಬಳಿ ಇಂದು ಮುಂಜಾನೆ ನಡೆದಿದೆ.
ರತ್ನಮ್ಮ (56) ಕೊಲೆಯಾದ ತಾಯಿ. ಮಗ ಗಂಗರಾಜು(35) ಎಂಬುವವನಿಂದ ತಾಯಿ ಕೊಲೆಯಾಗಿದ್ದಾರೆ ಎನ್ನಲಾಗಿದೆ. ಚಾಕುವಿನಿಂದ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಕ್ಷುಲ್ಲಕ ಕಾರಣಕ್ಕೆ ತಾಯಿ ಮಗನ ನಡುವೆ ಶುರುವಾಗಿದ್ದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. ಮಾತಿನ ಜಗಳ ವಿಕೋಪಕ್ಕೆ ತಿರುಗಿ ಕುಡುಕ ಮಗನಿಂದ ತಾಯಿಯ ಕೊಲೆಯಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸದ್ಯ ಕೊಲೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಶಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಡಿವೈಎಸ್ ರವಿ.ಪಿ ಸೇರಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳು ಇದ್ದರು.
ಸ್ಥಳಕ್ಕೆ ಎಫ್ ಎಸ್ ಎಲ್ ತಂಡ ಭೇಟಿ ನೀಡಿದ್ದಾರೆ.