
ಹೆದ್ದಾರಿಯಲ್ಲಿ ಬೈಕ್ ಮತ್ತು ಕಾರಿನ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರರು ಪವಾಡ ರೀತಿಯಲ್ಲಿ ಪಾರಾಗಿದ್ದಾರೆ. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಘಟನೆ ದೇವನಹಳ್ಳಿ ತಾಲೂಕಿನ ಇರಿಗೇನಹಳ್ಳಿ ಗೇಟ್ ಬಳಿ ನಡೆದಿದೆ. ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿರುವಾಗಲೇ ಬೈಕ್ ಸವಾರ ಅಡ್ಡ ನುಗ್ಗಿದೆ. ಹೆದ್ದಾರಿ ದಾಟುವ ಭರದಲ್ಲಿ ಅಡ್ಡ ನುಗ್ಗಿ ನಡು ರಸ್ತೆಯಲ್ಲಿ ಬೈಕ್ ನಿಲ್ಲಿಸಲಾಗಿತ್ತು. ಈ ವೇಳೆ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ.

ಕಾರು ಬೈಕ್ ಗೆ ಡಿಕ್ಕಿ ಹೊಡೆದಿದ್ದು ಅಲ್ಲದೇ ಒಂದಷ್ಟು ದೂರು ಬೈಕ್ ಎಳೆದೋಯ್ದಿದೆ.
ಬೈಕ್ ಸವಾರನ ನಿರ್ಲಕ್ಷ್ಯದಿಂದ ಪದೇ ಪದೇ ಹೆದ್ದಾರಿಯಲ್ಲಿ ಇಂತಹ ಅಪಘಾತಗಳು ಸಂಭವಿಸುತ್ತಿವೆ. ಸದ್ಯ ಬೈಕ್ ಸವಾರರ ಆತುರದಿಂದ ಕಾರು ಚಾಲಕ ಸಂಕಷ್ಟಕ್ಕೀಡಾಗಿದ್ದಾನೆ.

ಅಪಘಾತದಿಂದ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.