ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ ಸರಣಿ ಅಪಘಾತ ಸಂಭವಿಸಿದೆ.

ದೊಡ್ಡಬಳ್ಳಾಪುರದಿಂದ ದೇವನಹಳ್ಳಿ ಕಡೆಗೆ ಸಾಗುತ್ತಿದ್ದ ಲಾರಿಯ ಚಾಲಕನ ನಿಯಂತ್ರಣ ತಪ್ಪಿದ್ದು, ಮೊದಲು ತನ್ನ ಮುಂದೆ ಸಂಚರಿಸುತ್ತಿದ್ದ ಟ್ರಾಕ್ಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ತೀವ್ರತೆಗೆ ಲಾರಿ ರಸ್ತೆ ವಿಭಜಕ ದಾಟಿ ಎದುರುಗಡೆಯ ರಸ್ತೆಗೆ ನುಗ್ಗಿ, ಎದುರಿನಿಂದ ಬರುತ್ತಿದ್ದ ಬೊಲೆರೋ ವಾಹನಕ್ಕೂ ಡಿಕ್ಕಿ ಹೊಡೆದಿದೆ.

ಅಪಘಾತದ ವೇಳೆ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನ ಸವಾರರು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸ್ಥಳದಲ್ಲಿದ್ದ ಹೆದ್ದಾರಿ ಸಿಸಿಟಿವಿ ಕ್ಯಾಮೆರಾದಲ್ಲಿ ಅಪಘಾತದ ಭೀಕರ ದೃಶ್ಯಗಳು ಸೆರೆಯಾಗಿವೆ.

ಅದೃಷ್ಟವಶಾತ್ ಲಾರಿ, ಟ್ರಾಕ್ಟರ್ ಹಾಗೂ ಬೊಲೆರೋ ವಾಹನಗಳ ಚಾಲಕರು ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು, ಹೆಚ್ಚಿನ ಅನಾಹುತ ತಪ್ಪಿದೆ.

ಘಟನೆಯ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ramesh Babu

Journalist

Recent Posts

3.75 ಲಕ್ಷ ಪಡಿತರ ಚೀಟಿದಾರರ ಇ-ಕೆವೈಸಿ ಬಾಕಿ: ಇ-ಕೆವೈಸಿಗೆ ಅ.20ರ ಗಡುವು: ಗಡುವು ವಿಸ್ತರಣೆಯಿಂದ ಫಲಾನುಭವಿಗಳಿಗೆ ಕೊಂಚ ನಿರಾಳ

ಬೆಂಗಳೂರು ಗ್ರಾಮಾಂತರ: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಗೆ ಸರ್ಕಾರ ಅ.20ರವರೆಗೆ ಗಡುವು ವಿಸ್ತರಿಸಿದ್ದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೆ ಶೇ.26.65ರಷ್ಟು…

9 hours ago

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

19 hours ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

20 hours ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

1 day ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

1 day ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

1 day ago