ಹೆದ್ದಾರಿಯಲ್ಲಿ ಹಿಟ್&ರನ್: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ: ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಹೆದ್ದಾರಿಯಲ್ಲಿ ಕಾರು ಚಾಲಕನಿಂದ ಹಾಡಹಗಲೇ ಹಿಟ್ ಅಂಡ್ ರನ್ ಆಗಿದೆ. ಹಿಟ್ ಅಂಡ್ ರನ್ ಗೆ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಭೀಕರ ದೃಶ್ಯ ಹೆದ್ದಾರಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮದ ಬಳಿ ನಡೆದ ಘಟನೆ ನಡೆದಿದೆ.

ಹೊಸಕೋಟೆ ಯಿಂದ ದಾಬಸ್ ಪೇಟೆಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 648 ರಲ್ಲಿ ಘಟನೆ ನಡೆದಿದೆ.

ದೇವನಹಳ್ಳಿ ಕಡೆಯಿಂದ ದೊಡ್ಡಬಳ್ಳಾಪುರ ಕಡೆಗೆ ಬುಲೆಟ್ ಬೈಕ್ ನಲ್ಲಿ ಇಬ್ಬರು ಯುವಕರು ಹೋಗುತ್ತಿದ್ದರು. ಈ‌ ವೇಳೆ ಹಿಂದಿನಿಂದ ಬಂದ ಕಾರು ನೋಡ ನೋಡ್ತಿದ್ದಂತೆ ಬುಲೆಟ್ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ನಂತರ ಕಾರು ನಿಲ್ಲಿಸದೇ 100 ಮೀಟರ್ ಗೂ ಅಧಿಕ ದೂರ ಬೈಕ್ ಸಮೇತ ತಳ್ಳಿಕೊಂಡು ಕಾರು ಚಾಲಕ ಹೋಗಿದ್ದಾನೆ.

ಈ ವೇಳೆ ಬೈಕ್ ಸೈಡಿಗೆ ಹೋಗ್ತಿದ್ದಂತೆ ಕಾರು ನಿಲ್ಲಿಸದೆ ವಾಹನ ಸಮೇತ ಚಾಲಕ ಎಸ್ಕೇಪ್ ಆಗಿದ್ದಾನೆ.

ಹೆಲ್ಮೆಟ್ ಹಾಕಿದ್ರು ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ಆಂಧ್ರ ಮೂಲದ ಇಬ್ಬರು‌ ಯುವಕರು ಸಾವನ್ನಪ್ಪಿದ್ದಾರೆ. ಅಪಘಾತದ ವೇಳೆ ಒನ್‌ ವೇ ನಲ್ಲಿ ಬರ್ತಿದ್ದ ಬೈಕ್ ಸವಾರ ಜಸ್ಟ್ ಮಿಸ್ ಆಗಿದ್ದಾನೆ‌.

 

ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

9 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

10 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

10 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

10 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

13 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

17 hours ago