ದೊಡ್ಡಬಳ್ಳಾಪುರ: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯ ಕೆಸ್ತೂರು ಗೇಟ್ ಬಳಿ ಕಾರು ಡಿಕ್ಕಿ ಹೊಡೆದ ಪರಿಣಾಮ 70 ವರ್ಷದ ವೃದ್ಧೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಕೆಸ್ತೂರು ಗ್ರಾಮದ ನಿವಾಸಿ ಲಕ್ಷ್ಮಮ್ಮ (70) ಮೃತಪಟ್ಟ ದುರ್ದೈವಿ.
ಮುಂಜಾನೆ ಹೊಲದ ಕಡೆಗೆ ತೆರಳಿದ್ದ ಲಕ್ಷ್ಮಮ್ಮ ಅವರು ಕೆಲಸ ಮುಗಿಸಿಕೊಂಡು ಮರಳಿ ಮನೆಗೆ ಬರುವ ವೇಳೆ ಹೆದ್ದಾರಿಯನ್ನು ದಾಟುತ್ತಿದ್ದರು. ಈ ಸಂದರ್ಭದಲ್ಲಿ ದಾಬಸ್‌ಪೇಟೆ ಕಡೆಯಿಂದ ವೇಗವಾಗಿ ಬಂದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೋಲಾರ ಮೂಲದ ಕಾರು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಎತ್ತಿನಹೊಳೆ ಯೋಜನೆ ಸಾಧ್ಯವೇ ಇಲ್ಲ ಎನ್ನುತ್ತಿದ್ದವರಿಗೆ ಈಗ ಉತ್ತರ ನೀಡುವ ಸಮಯ ಬಂದಿದೆ. ತುಮಕೂರಿಗೆ ವಾರದೊಳಗೆ ನೀರು ಹರಿಸಿ, ವರ್ಷಕ್ಕೂ…
ದೊಡ್ಡಬಳ್ಳಾಪುರ: ಮೆಣಸಿನಕಾಯಿ ಬೆಳೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಪ್ಪು ಥ್ರಿಪ್ಸ್ ಕೀಟದ ಬಾಧೆ ಹೆಚ್ಚಾಗುತ್ತಿದ್ದು, ಇದರಿಂದ ಶೇ.60ರಷ್ಟು ಇಳುವರಿ ನಷ್ಟ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಗರೀಕರಿಂದ ಕುಂದುಕೊರತೆಗಳ ಮನವಿ ಸ್ವೀಕರಿಸಿ, ಸ್ಥಳದಲ್ಲೇ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಪ್ರಜಾ…
ತುಮಕೂರು: ಜಮೀನಿನ ದಾಖಲೆ ಪಡೆಯಲು ದಿನವಿಡೀ ತಹಶೀಲ್ದಾರ್ ಕಚೇರಿಗೆ ಅಲೆದಾಡಿದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಬೇಸತ್ತ ವೃದ್ಧ ರೈತರೊಬ್ಬರು ಕಚೇರಿ ಎದುರೇ…
ದೊಡ್ಡಬಳ್ಳಾಪುರ: ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಅಂಶಗಳನ್ನು ಒಳಗೊಂಡಿದೆ ಎನ್ನಲಾದ ‘ಬಸವ ಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ರಾಜ್ಯ ಸಚಿವ…
ಆಶಾ ಕಾರ್ಯಕರ್ತೆಯರೆಂಬ ಆರೋಗ್ಯ ರಕ್ಷಕರು ಬೀದಿಯಲ್ಲಿ........ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಕಣ್ಣು ಮುಚ್ಚಿ ಕುಳಿತ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು.......…