ಹೆದ್ದಾರಿ ರಸ್ತೆ ದಾಟುವಾಗ ವೇಗವಾಗಿ ಬಂದು ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ಸುಮಾರು 10:30ರಲ್ಲಿ ತಾಲೂಕಿನ ಬಚ್ಚಹಳ್ಳಿ ಗೇಟ್ ಸಮೀಪದಲ್ಲಿ ನಡೆದಿದೆ.
ಮೃತ ದುರ್ದೈವಿ ಕೋಲಾರ ಮೂಲದ ವೆಂಕಟರಮಣ (40), ಎಂದು ಗುರುತಿಸಲಾಗಿದೆ.
ಮೃತ ವ್ಯಕ್ತಿ ಕೋಲಾರದಿಂದ ದೊಡ್ಡಬಳ್ಳಾಪುರದಲ್ಲಿರುವ ತೋಟವೊಂದರಲ್ಲಿ ಕೂಲಿ ಕೆಲಸಕ್ಕಾಗಿ ಬಂದಿದ್ದನು ಎಂದು ಮೂಲಗಳಿಂದ ತಿಳಿದುಬಂದಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….