ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ ಪಾಲನೆ ಮಾಡದಿರುವುದರಿಂದ ಅಪಘಾತ ಹಾಗೂ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆಯ ನಿರಂತರವಾಗಿ ನಡೆಯಲಿದೆ. ಬೈಕ್ ಸೇರಿದಂತೆ ಇತರೆ ವಾಹನಗಳವರು ಅಗತ್ಯ ದಾಖಲೆ, ಚಾಲನ ಪರವಾನಗಿಯನ್ನು ಕಡ್ಡಾಯವಾಗಿ ಹೊಂದರಬೇಕು. ಜೊತೆಗೆ 2026 ಜ.1 ರಿಂದ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವುದು ಕಂಡುಬಂದಲ್ಲಿ, ಯಾವುದೇ ಮುಲಾಜಿಲ್ಲದೆ ಮೋಟಾರು ವಾಹನ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು ಹಾಗೂ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿವೈಎಸ್‌ಪಿ ಪಾಂಡುರಂಗ ತಿಳಿಸಿದ್ದರು.
ಈ ಹಿನ್ನೆಲೆ ಹೆಲ್ಮೆಟ್ ಧರಿಸದವರಿಗೆ ಮೊದಲ ದಿನ(ಜ.1) ದಂಡ ವಿಧಿಸದೆ ಎಚ್ಚರಿಕೆ ನೀಡಿ ಹೆಲ್ಮೆಟ್ ಖರೀದಿಸುವಂತೆ ಹೇಳಿ ಕಳಿಸುತ್ತಿದ್ದರು. ಇಂದು (ಜ.2) ದಂಡ ವಿಧಿಸಲು ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಆರಂಭಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಟಿಬಿ ಸರ್ಕಲ್, ಹಳೇ ಬಸ್ ನಿಲ್ದಾಣದಲ್ಲಿ ಹೆಲ್ಮೆಟ್ ತಪಾಸಣೆ ನಡೆಸಿದ ಪೊಲೀಸರು, ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ಮಾಡುತ್ತಿದ್ದವರಿಗೆ ದಂಡ ವಿಧಿಸಿದರು…
ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸುಮಾರು 65 ಮಂದಿ ಬೈಕ್ ಸವಾರರಿಂದ ಅಂದಾಜು ₹ 32 ಸಾವಿರಕ್ಕೂ ಅಧಿಕ ದಂಡ ವಸೂಲಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ…
ಯಾವುದೇ ಒತ್ತಡಕ್ಕೂ ಮಣಿಯದೆ ದಂಡ ಹಾಕುತ್ತಿರುವುದು ಕೆಲವರಿಗೆ ತೊಂದರೆಯಾಗುತ್ತಿದ್ದರೂ ಸಹ ಸಾರ್ವಜನಿಕ ವಲಯದಲ್ಲಿ ಪೊಲೀಸರ ಕಾರ್ಯದ ಕುರಿತು ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿತ್ತು.
ದ್ವಿಚಕ್ರ ವಾಹನ ಸವಾರರ ಹಿತದೃಷ್ಟಿಯಿಂದ ಪೊಲೀಸರು ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ದಯವಿಟ್ಟು ಪೊಲೀಸರಿಗೆ ಅಥವಾ ದಂಡಕ್ಕೆ ಹೆದರಿ ಹೆಲ್ಮೆಟ್ ಧರಿಸಬೇಡಿ. ನಿಮ್ಮ ಮನೆಯಲ್ಲಿ ನಿಮಗಾಗಿ ಕಾಯುವ ತಂದೆ-ತಾಯಿ, ಪತ್ನಿ-ಮಕ್ಕಳಿದ್ದಾರೆ ಎಂಬುದನ್ನು ನೆನಪಿನಲ್ಲಿಡಿ. ತಲೆಗೆ ಪೆಟ್ಟು ಬಿದ್ದು ಪ್ರಾಣ ಕಳೆದುಕೊಳ್ಳುವುದನ್ನು ತಪ್ಪಿಸಲು ಉತ್ತಮ ಗುಣಮಟ್ಟದ ಪೂರ್ಣ ಪ್ರಮಾಣದ ಹೆಲ್ಮೆಟ್ ಧರಿಸಿ ಎಂದು ಡಿವೈಎಸ್ ಪಿ ಪಾಂಡುರಂಗ ತಿಳಿಸಿದ್ದಾರೆ.
ಎಲ್ಲಾ ದ್ವಿಚಕ್ರ ವಾಹನ ಸವಾರರು ಇಂದೇ ಎಚ್ಚೆತ್ತುಕೊಂಡು, ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಮೂಲಕ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕೋರಿದ್ದಾರೆ.
ಡಿವೈಎಸ್ಪಿ ಹೇಳಿಕೆ ಹಿನ್ನೆಲೆ ಹೆಲ್ಮೆಟ್ ಮಾರಾಟಗಾರರು ದೊಡ್ಡಬಳ್ಳಾಪುರಕ್ಕೆ ಲಗ್ಗೆ ಇಟ್ಟಿದ್ದಾರೆ. ಹೆಲ್ಮೆಟ್ ಕಡ್ಡಾಯ ಹಿನ್ನೆಲೆ ಬೈಕ್ ಸವಾರರು ಹೆಲ್ಮೆಟ್ ಖರೀದಿಯಲ್ಲಿ ನಿರತರಾಗಿದ್ದಾರೆ…..
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…