ಹೆಲ್ಮೆಟ್ ಹಾಕದ ಬೈಕ್ ಸವಾರರಿಗೆ ದಂಡದ ಬಿಸಿ ಮುಟ್ಟಿಸಿದ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು

ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ ಪಾಲನೆ ಮಾಡದಿರುವುದರಿಂದ ಅಪಘಾತ ಹಾಗೂ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆಯ ನಿರಂತರವಾಗಿ ನಡೆಯಲಿದೆ. ಬೈಕ್‌ ಸೇರಿದಂತೆ ಇತರೆ ವಾಹನಗಳವರು ಅಗತ್ಯ ದಾಖಲೆ, ಚಾಲನ ಪರವಾನಗಿಯನ್ನು ಕಡ್ಡಾಯವಾಗಿ ಹೊಂದರಬೇಕು. ಜೊತೆಗೆ 2026 ಜ.1 ರಿಂದ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವುದು ಕಂಡುಬಂದಲ್ಲಿ, ಯಾವುದೇ ಮುಲಾಜಿಲ್ಲದೆ ಮೋಟಾರು ವಾಹನ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು ಹಾಗೂ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿವೈಎಸ್‌ಪಿ ಪಾಂಡುರಂಗ ತಿಳಿಸಿದ್ದರು.

ಈ ಹಿನ್ನೆಲೆ ಹೆಲ್ಮೆಟ್‌ ಧರಿಸದವರಿಗೆ ಮೊದಲ ದಿನ(ಜ.1) ದಂಡ ವಿಧಿಸದೆ ಎಚ್ಚರಿಕೆ ನೀಡಿ ಹೆಲ್ಮೆಟ್‌ ಖರೀದಿಸುವಂತೆ ಹೇಳಿ ಕಳಿಸುತ್ತಿದ್ದರು. ಇಂದು (ಜ.2) ದಂಡ ವಿಧಿಸಲು ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಆರಂಭಿಸಿದ್ದಾರೆ.

ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಟಿಬಿ ಸರ್ಕಲ್, ಹಳೇ ಬಸ್ ನಿಲ್ದಾಣದಲ್ಲಿ ಹೆಲ್ಮೆಟ್ ತಪಾಸಣೆ ನಡೆಸಿದ ಪೊಲೀಸರು, ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ಮಾಡುತ್ತಿದ್ದವರಿಗೆ ದಂಡ ವಿಧಿಸಿದರು…

ಹೆಲ್ಮೆಟ್‌ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸುಮಾರು 65 ಮಂದಿ ಬೈಕ್ ಸವಾರರಿಂದ ಅಂದಾಜು ₹ 32 ಸಾವಿರಕ್ಕೂ ಅಧಿಕ ದಂಡ ವಸೂಲಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ…

ಯಾವುದೇ ಒತ್ತಡಕ್ಕೂ ಮಣಿಯದೆ ದಂಡ ಹಾಕುತ್ತಿರುವುದು ಕೆಲವರಿಗೆ ತೊಂದರೆಯಾಗುತ್ತಿದ್ದರೂ ಸಹ ಸಾರ್ವಜನಿಕ ವಲಯದಲ್ಲಿ ಪೊಲೀಸರ ಕಾರ್ಯದ ಕುರಿತು ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿತ್ತು.

ದ್ವಿಚಕ್ರ ವಾಹನ ಸವಾರರ ಹಿತದೃಷ್ಟಿಯಿಂದ ಪೊಲೀಸರು ಹೆಲ್ಮೆಟ್‌ ಕಡ್ಡಾಯಗೊಳಿಸಲಾಗಿದೆ. ದಯವಿಟ್ಟು ಪೊಲೀಸರಿಗೆ ಅಥವಾ ದಂಡಕ್ಕೆ ಹೆದರಿ ಹೆಲ್ಮೆಟ್ ಧರಿಸಬೇಡಿ. ನಿಮ್ಮ ಮನೆಯಲ್ಲಿ ನಿಮಗಾಗಿ ಕಾಯುವ ತಂದೆ-ತಾಯಿ, ಪತ್ನಿ-ಮಕ್ಕಳಿದ್ದಾರೆ ಎಂಬುದನ್ನು ನೆನಪಿನಲ್ಲಿಡಿ. ತಲೆಗೆ ಪೆಟ್ಟು ಬಿದ್ದು ಪ್ರಾಣ ಕಳೆದುಕೊಳ್ಳುವುದನ್ನು ತಪ್ಪಿಸಲು ಉತ್ತಮ ಗುಣಮಟ್ಟದ ಪೂರ್ಣ ಪ್ರಮಾಣದ ಹೆಲ್ಮೆಟ್ ಧರಿಸಿ ಎಂದು ಡಿವೈಎಸ್ ಪಿ ಪಾಂಡುರಂಗ ತಿಳಿಸಿದ್ದಾರೆ.

ಎಲ್ಲಾ ದ್ವಿಚಕ್ರ ವಾಹನ ಸವಾರರು ಇಂದೇ ಎಚ್ಚೆತ್ತುಕೊಂಡು, ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಮೂಲಕ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕೋರಿದ್ದಾರೆ.

ಡಿವೈಎಸ್ಪಿ ಹೇಳಿಕೆ ಹಿನ್ನೆಲೆ ಹೆಲ್ಮೆಟ್ ಮಾರಾಟಗಾರರು ದೊಡ್ಡಬಳ್ಳಾಪುರಕ್ಕೆ ಲಗ್ಗೆ ಇಟ್ಟಿದ್ದಾರೆ. ಹೆಲ್ಮೆಟ್ ಕಡ್ಡಾಯ ಹಿನ್ನೆಲೆ ಬೈಕ್ ಸವಾರರು ಹೆಲ್ಮೆಟ್ ಖರೀದಿಯಲ್ಲಿ ನಿರತರಾಗಿದ್ದಾರೆ…..

Ramesh Babu

Journalist

Recent Posts

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

9 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

16 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

19 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

21 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

1 day ago