ಹೆಸರಘಟ್ಟದ ಐಐಎಚ್‌ಆರ್ ಆವರಣದಲ್ಲಿ ಫೆ. 27ರಿಂದ ರಾಷ್ಟ್ರೀಯ ತೋಟಗಾರಿಕೆ ಮೇಳ

ಹೆಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ(ಐಐಎಚ್‌ಆರ್) ಆವರಣದಲ್ಲಿ ಫೆ.27ರಿಂದ ಮಾರ್ಚ್ 1ರವರೆಗೆ ‘ರಾಷ್ಟ್ರೀಯ ತೋಟಗಾರಿಕೆ ಮೇಳ 2025’ ಆಯೋಜಿಸಲಾಗಿದೆ‌ ಎಂದು‌ ಐಐಎಚ್‌ಆರ್ ನಿರ್ದೇಶಕ ತುಷಾರ್ ಕಾಂತಿ ಬೆಹೆರಾ ಮಾಹಿತಿ ನೀಡಿದರು.

ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ (ICAR-IIHR) ಸಭಾಂಗಣದಲ್ಲಿ ನಡೆದ‌ ಮಾಧ್ಯಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಕಸಿತ ತೋಟಗಾರಿಕೆ ಭಾರತಕ್ಕಾಗಿ ಪೋಷಣೆ, ಸಬಲೀಕರಣ ಮತ್ತು ಜೀವನೋಪಾಯ’ ಶೀರ್ಷಿಕೆ ಅಡಿಯಲ್ಲಿ ಉತ್ತಮ ಪೌಷ್ಟಿಕಾಂಶಯುತ್ತ ಬೆಳೆ ಬೆಳೆಯುವ ತಂತ್ರಜ್ಞಾನ, ಹೊಸ ತಳಿಗಳು, ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಸೇರಿದಂತೆ ತೋಟಗಾರಿಕೆ ಕ್ಷೇತ್ರದ ಹಲವು ಸಂಶೋಧನೆಗಳು ಮೇಳದಲ್ಲಿ ಅನಾವರಣಗೊಳ್ಳಲಿವೆ ಎಂದರು.

ಮೇಳದಲ್ಲಿ 250ಕ್ಕೂ ಹೆಚ್ಚು ಸಂಸ್ಥೆಗಳು ಪಾಲ್ಗೊಳ್ಳಲಿವೆ. 190ಕ್ಕೂ ಹೆಚ್ಚು ವೈವಿಧ್ಯಮಯ ಮಳಿಗೆಗಳಿರುತ್ತವೆ. 75,000ಕ್ಕೂ ಹೆಚ್ಚಿನ ರೈತರು ಮತ್ತು ತೋಟಗಾರಿಕಾ ಕ್ಷೇತ್ರದ ಇತರೆ ಭಾಗಿದಾರರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಮೇಳದ ಪ್ರಚಾರ ಸಮಿತಿ ಅಧ್ಯಕ್ಷ ನಂದೀಶ್.ಪಿ ತಿಳಿಸಿದರು.

20 ರಾಜ್ಯಗಳಿಂದ ರೈತರು ಪಾಲ್ಗೊಳ್ಳಲಿದ್ದಾರೆ. ನಮ್ಮ ರಾಜ್ಯದ 30 ಜಿಲ್ಲೆಗಳಿಂದಲೂ ರೈತರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಹೊರ ರಾಜ್ಯದ ರೈತರಿಗೆ ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಮಳಿಗೆಗಳಲ್ಲಿ ಸಸಿಗಳು ಮತ್ತು ಬೀಜಗಳ ಮಾರಾಟ ವ್ಯವಸ್ಥೆ ಮಾಡಲಾಗಿದೆ’ ಎಂದರು.

ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅನುಕೂಲಕರ ತಂತ್ರಜ್ಞಾನಗಳನ್ನು ಪರಿಚಯಿಸುವ, ಮತ್ತು ಸಾಮಾಜಿಕವಾಗಿ ಹೊಂದಿಕೊಳ್ಳುವ, ಆರ್ಥಿಕವಾಗಿ ಲಾಭದಾಯಕ ಹಾಗೂ ಪರಿಸರಕ್ಕೆ ಅನುಕೂಲಕರ ತೋಟಗಾರಿಕಾ ಬೆಳೆಗಳ ಮೂಲಕ ಉತ್ಪಾದನೆ, ಆದಾಯ ಮತ್ತು ಜೀವನೋಪಾಯವನ್ನು ಸುಧಾರಿಸುವ ಗುರಿಯನ್ನು ಈ ಮೇಳ ಹೊಂದಿದೆ ಎಂದು ವಿವರಿಸಿದರು.

ಟಿ. ಬಿ. ಕ್ರಾಸ್ ನಿಂದ, ರಾಷ್ಟ್ರೀಯ ತೋಟಗಾರಿಕೆ ಮೇಳಕ್ಕೆ ಭೇಟಿ ನೀಡುವವರ ಅನುಕೂಲಕ್ಕಾಗಿ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಮೇಳದ ಒಳಾಂಗಣದಲ್ಲಿ ಹಿರಿಯ ನಾಗರಿಕರ ಸಹಾಯಕ್ಕಾಗಿ ಎಲೆಕ್ಟ್ರಿಕ್ ವಾಹನಗಳನ್ನು ವ್ಯವಸ್ಥೆ ಮಾಡಲಾಗುತ್ತದೆ. ಹೊರ ಜಿಲ್ಲೆಗಳಿಂದ ಬರುವ ರೈತರಿಗೆ, ಮುಂಚಿತ ಮಾಹಿತಿ ನೀಡಿದರೆ ವಸತಿ ವ್ಯವಸ್ಥೆ ಮಾಡಲಾಗುವುದು. ಮೇಳದ ವೇಳೆ IIHR ತಂತ್ರಜ್ಞಾನಗಳ ರಾಯಭಾರಿಗಳಾಗಿರುವ ಪ್ರಗತಿಪರ ರೈತರನ್ನು ಗೌರವಿಸಲಾಗುವುದು ರಾಷ್ಟ್ರೀಯ ತೋಟಗಾರಿಕಾ ಮೇಳ 2025ರ ಆಯೋಜನಾ ಕಾರ್ಯದರ್ಶಿ ಡಾ. ಶಂಕರ ಹೆಬ್ಬಾರ ತಿಳಿಸಿದರು.

ಮೇಳದಲ್ಲಿ ಬಿಡುಗಡೆಯಾಗುವ ಹೊಸ ತಳಿಗಳು

• ಸಮೃದ್ಧಿ ಕಲ್ಲಂಗಡಿ ಸೆಲೆಕ್ಷನ್-4

• ಅಂಟುಕಾಂಡ ಕೊಳೆರೋಗ ನಿರೋಧಕ ಸೋರೆಕಾಯಿ

• ಎಲೆ ಸುರುಳಿ ನಂಜಾಣು ರೋಗ ನಿರೋಧಕ ಮೆಣಸಿನಕಾಯಿ

• ಅವಕಾಡೊ (ಬೆಣ್ಣೆ ಹಣ್ಣು)

• ಜಾವಾ ರೋಸ್ ಆಪಲ್

• ಅರ್ಕ ಹಲಸಿನಕಾಯಿ

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

13 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

17 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

17 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

22 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago