ಹೆಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ(ಐಐಎಚ್‌ಆರ್) ಆವರಣದಲ್ಲಿ ಫೆ.27ರಿಂದ ಮಾರ್ಚ್ 1ರವರೆಗೆ ‘ರಾಷ್ಟ್ರೀಯ ತೋಟಗಾರಿಕೆ ಮೇಳ 2025’ ಆಯೋಜಿಸಲಾಗಿದೆ ಎಂದು ಐಐಎಚ್‌ಆರ್ ನಿರ್ದೇಶಕ ತುಷಾರ್ ಕಾಂತಿ ಬೆಹೆರಾ ಮಾಹಿತಿ ನೀಡಿದರು.
ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ (ICAR-IIHR) ಸಭಾಂಗಣದಲ್ಲಿ ನಡೆದ ಮಾಧ್ಯಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಕಸಿತ ತೋಟಗಾರಿಕೆ ಭಾರತಕ್ಕಾಗಿ ಪೋಷಣೆ, ಸಬಲೀಕರಣ ಮತ್ತು ಜೀವನೋಪಾಯ’ ಶೀರ್ಷಿಕೆ ಅಡಿಯಲ್ಲಿ ಉತ್ತಮ ಪೌಷ್ಟಿಕಾಂಶಯುತ್ತ ಬೆಳೆ ಬೆಳೆಯುವ ತಂತ್ರಜ್ಞಾನ, ಹೊಸ ತಳಿಗಳು, ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಸೇರಿದಂತೆ ತೋಟಗಾರಿಕೆ ಕ್ಷೇತ್ರದ ಹಲವು ಸಂಶೋಧನೆಗಳು ಮೇಳದಲ್ಲಿ ಅನಾವರಣಗೊಳ್ಳಲಿವೆ ಎಂದರು.
20 ರಾಜ್ಯಗಳಿಂದ ರೈತರು ಪಾಲ್ಗೊಳ್ಳಲಿದ್ದಾರೆ. ನಮ್ಮ ರಾಜ್ಯದ 30 ಜಿಲ್ಲೆಗಳಿಂದಲೂ ರೈತರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಹೊರ ರಾಜ್ಯದ ರೈತರಿಗೆ ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಮಳಿಗೆಗಳಲ್ಲಿ ಸಸಿಗಳು ಮತ್ತು ಬೀಜಗಳ ಮಾರಾಟ ವ್ಯವಸ್ಥೆ ಮಾಡಲಾಗಿದೆ’ ಎಂದರು.
ಟಿ. ಬಿ. ಕ್ರಾಸ್ ನಿಂದ, ರಾಷ್ಟ್ರೀಯ ತೋಟಗಾರಿಕೆ ಮೇಳಕ್ಕೆ ಭೇಟಿ ನೀಡುವವರ ಅನುಕೂಲಕ್ಕಾಗಿ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಮೇಳದ ಒಳಾಂಗಣದಲ್ಲಿ ಹಿರಿಯ ನಾಗರಿಕರ ಸಹಾಯಕ್ಕಾಗಿ ಎಲೆಕ್ಟ್ರಿಕ್ ವಾಹನಗಳನ್ನು ವ್ಯವಸ್ಥೆ ಮಾಡಲಾಗುತ್ತದೆ. ಹೊರ ಜಿಲ್ಲೆಗಳಿಂದ ಬರುವ ರೈತರಿಗೆ, ಮುಂಚಿತ ಮಾಹಿತಿ ನೀಡಿದರೆ ವಸತಿ ವ್ಯವಸ್ಥೆ ಮಾಡಲಾಗುವುದು. ಮೇಳದ ವೇಳೆ IIHR ತಂತ್ರಜ್ಞಾನಗಳ ರಾಯಭಾರಿಗಳಾಗಿರುವ ಪ್ರಗತಿಪರ ರೈತರನ್ನು ಗೌರವಿಸಲಾಗುವುದು ರಾಷ್ಟ್ರೀಯ ತೋಟಗಾರಿಕಾ ಮೇಳ 2025ರ ಆಯೋಜನಾ ಕಾರ್ಯದರ್ಶಿ ಡಾ. ಶಂಕರ ಹೆಬ್ಬಾರ ತಿಳಿಸಿದರು.
• ಸಮೃದ್ಧಿ ಕಲ್ಲಂಗಡಿ ಸೆಲೆಕ್ಷನ್-4
• ಅಂಟುಕಾಂಡ ಕೊಳೆರೋಗ ನಿರೋಧಕ ಸೋರೆಕಾಯಿ
• ಎಲೆ ಸುರುಳಿ ನಂಜಾಣು ರೋಗ ನಿರೋಧಕ ಮೆಣಸಿನಕಾಯಿ
• ಅವಕಾಡೊ (ಬೆಣ್ಣೆ ಹಣ್ಣು)
• ಜಾವಾ ರೋಸ್ ಆಪಲ್
• ಅರ್ಕ ಹಲಸಿನಕಾಯಿ
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…