ಹೈಕಮಾಂಡ್ ಜೊತೆ ಮಹತ್ವದ ಚರ್ಚೆಗೆ ಡಿಕೆ ಶಿವಕುಮಾರ್ ದೆಹಲಿಗೆ

ಬೆಂಗಳೂರು ಗ್ರಾಮಾಂತರ:- ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ರಾಜಕೀಯ ಬೆಳವಣಿಗೆಗಳು ತೀವ್ರಗೊಂಡಿರುವ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಹೈಕಮಾಂಡ್ ಜೊತೆ ಮಹತ್ವದ ಚರ್ಚೆ ನಡೆಸಲು ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.

ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು ಸಂಜೆ 7.40ರ ಸುಮಾರಿಗೆ ಏರ್ ಇಂಡಿಯಾದ AI2665 ವಿಮಾನದಲ್ಲಿ ಅವರು ದೆಹಲಿಗೆ ಪ್ರಯಾಣ ಬೆಳೆಸಿದರು.

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸುವ ಜೊತೆಗೆ ರಾಜ್ಯದ ರಾಜಕೀಯ ಪರಿಸ್ಥಿತಿಗಳ ಕುರಿತು ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿರುವ ಈ ಸಂದರ್ಭದಲ್ಲಿ ಡಿಕೆಶಿ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ. ಹೈಕಮಾಂಡ್ ಮಟ್ಟದಲ್ಲಿ ನಡೆಯುವ ಸಭೆಗಳ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ತೀರ್ಮಾನ ಹೊರಬೀಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!