ಹೈಕಮಾಂಡ್ ಜೊತೆ ಮಹತ್ವದ ಚರ್ಚೆಗೆ ಡಿಕೆ ಶಿವಕುಮಾರ್ ದೆಹಲಿಗೆ

ಬೆಂಗಳೂರು ಗ್ರಾಮಾಂತರ:- ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ರಾಜಕೀಯ ಬೆಳವಣಿಗೆಗಳು ತೀವ್ರಗೊಂಡಿರುವ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಹೈಕಮಾಂಡ್ ಜೊತೆ ಮಹತ್ವದ ಚರ್ಚೆ ನಡೆಸಲು ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.

ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು ಸಂಜೆ 7.40ರ ಸುಮಾರಿಗೆ ಏರ್ ಇಂಡಿಯಾದ AI2665 ವಿಮಾನದಲ್ಲಿ ಅವರು ದೆಹಲಿಗೆ ಪ್ರಯಾಣ ಬೆಳೆಸಿದರು.

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸುವ ಜೊತೆಗೆ ರಾಜ್ಯದ ರಾಜಕೀಯ ಪರಿಸ್ಥಿತಿಗಳ ಕುರಿತು ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿರುವ ಈ ಸಂದರ್ಭದಲ್ಲಿ ಡಿಕೆಶಿ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ. ಹೈಕಮಾಂಡ್ ಮಟ್ಟದಲ್ಲಿ ನಡೆಯುವ ಸಭೆಗಳ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ತೀರ್ಮಾನ ಹೊರಬೀಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

Ramesh Babu

Journalist

Recent Posts

‘ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ಉತ್ತರಿಸಲಿ’- ಡಿಸಿಎಂ ಡಾ.ಜಿ ಪರಮೇಶ್ವರ್

ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ಉತ್ತರಿಸಲಿ. ಕರ್ನಾಟಕದ ಜನರನ್ನು ದಿಕ್ಕುತಪ್ಪಿಸುವ ರಾಜಕೀಯವನ್ನು ನಿಲ್ಲಿಸಲಿ ಎಂದು…

48 minutes ago

ರಸಗೊಬ್ಬರ ಮುಂಗಡ ಕಾಯ್ದಿರಿಸಿ ಖರೀದಿಸಲು ಆ್ಯಪ್‌ ಬಿಡುಗಡೆ: ಡಿ.01 ರಿಂದ ಜಾರಿ

ಕೇಂದ್ರ ಸರ್ಕಾರವು ಮೊಬೈಲ್ ಮೂಲಕ ರೈತರು ಎಲ್ಲಾ ರಸಗೊಬ್ಬರಗಳನ್ನು ಮುಂಗಡವಾಗಿ ಕಾಯ್ದಿರಿಸಿ ಖರೀದಿಸುವ ನೂತನ " ಫರ್ಟಿಲೈಸರ್ ಸೇಲ್ ಅಪಿಕೇಶನ್…

4 hours ago

ಆನೆಗಳ ಸ್ಥಳಾಂತರಕ್ಕೆ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಯನಾ ಮೋಟಮ್ಮ ನಿರ್ಧಾರ!

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಸೆರೆಹಿಡಿದ ಆನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಭಾಗಕ್ಕೆ ಸ್ಥಳಾಂತರಿಸುವ ಅರಣ್ಯ ಇಲಾಖೆಯ ನಿರ್ಧಾರಕ್ಕೆ ತೀವ್ರ ವಿರೋಧ…

5 hours ago

ರಾಜ್ಯದ ನೀರಾವರಿ ಜಾಲಕ್ಕೆ ಆಸ್ಟ್ರೇಲಿಯಾ ತಂತ್ರಜ್ಞಾನ ಬಲ; ‘ವಾಟರ್ ಟ್ರೇಡಿಂಗ್’ ಅಧ್ಯಯನಕ್ಕೆ ಸಚಿವ ಚಲುವರಾಯಸ್ವಾಮಿ ಸಮ್ಮತಿ

ರಾಜ್ಯದ ಹಳೆಯ ಕಾಲುವೆಗಳ ಆಧುನೀಕರಣ, ನೀರಿನ ಸೋರಿಕೆ ತಡೆಗಟ್ಟುವಿಕೆ ಹಾಗೂ ಕೃಷಿ ನೀರಾವರಿ ದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ…

7 hours ago

ಕಾಣೆಯಾಗುವ ಬಾಲ್ಯದ ಆದರ್ಶಗಳು……

ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಗುಣಮಟ್ಟದ ಪರೀಕ್ಷೆ ಮಾಡುವ ತನಿಖಾಧಿಕಾರಿಗಳು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡುತ್ತಾರೆ........ ನೀವು ದೊಡ್ಡವರಾದ ಮೇಲೆ ಏನಾಗಲು ಇಷ್ಟ…

14 hours ago

ಹಿಂಬದಿಯಿಂದ ಬೈಕ್ ಡಿಕ್ಕಿ: ಪಾದಚಾರಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ಕಾಡನೂರು ಕೈಮರ ಸಮೀಪದ ಆಂಜನಮೂರ್ತಿ ನಗರ ಬಳಿ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ…

2 days ago