ಕೃಷಿ ಇಲಾಖೆ ವತಿಯಿಂದ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲು ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳು/ಸೇವಾದಾರ ಸಂಸ್ಥೆಗಳು/ವೈಯಕ್ತಿಕ ಫಲಾನುಭವಿಗಳು (Individual) ಹಾಗೂ ನೊಂದಾಯಿತ ಸಂಘ-ಸಂಸ್ಥೆಗಳಿಂದ (FPO) ಅರ್ಜಿ ಆಹ್ವಾನಿಸಲಾಗಿದೆ.
ಸ್ಥಳೀಯವಾಗಿ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಯಂತ್ರಧಾರೆ ಕೇಂದ್ರಗಳ/ಕೃಷಿ ಯಂತ್ರೋಪಕರಣಗಳ ಬ್ಯಾಂಕ್ (farm machinery Bank FMB) ಗಳ ಸಂಸ್ಥೆಗಳಿಗೆ ಆದ್ಯತೆ ನೀಡಲಾಗುವುದು. ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50 ರಂತೆ ಪ.ಜಾ/ಪ.ಪಂ ವರ್ಗದ ರೈತರಿಗೆ ಗರಿಷ್ಠ ಶೇ.70 ರಂತೆ ಹಾಗೂ ಸಂಘ-ಸಂಸ್ಥೆಗಳಿಗೆ (ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆ/ FPO ಗಳನ್ನೊಳಗೊಂಡಂತೆ) ಗರಿಷ್ಠ ಶೇ.70 ರಂತೆ ಸಹಾಯಧನವನ್ನು ನೀಡಲಾಗುವುದು.
ವಿವಿಧ ಹಾರ್ವೆಸ್ಟರ್ ಹಬ್‌ಗಳಿಗೆ ನಿಗಧಿಪಡಿಸಿದ ಗರಿಷ್ಠ ಸಹಾಯಧನದ ಮೊತ್ತಕ್ಕೆ ಸೀಮಿತಗೊಳಿಸಿ ಸ್ಥಳೀಯವಾಗಿ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳನ್ನು ದಾಸ್ತಾನೀಕರಿಸಲು ಪ್ರತಿ ಒಂದು ಹೈಟೆಕ್ ಹಾರ್ವೆಸ್ಟರ್ ಹಬ್ ಘಟಕಕ್ಕೆ ಗರಿಷ್ಠ ಮೊತ್ತ ರೂ.100.00 ಲಕ್ಷಗಳು ಮೀರದಂತೆ (ರೂ.5.00 ಲಕ್ಷಗಳ ಆಡಳಿತಾತ್ಮಕ ವೆಚ್ಚ ಒಳಗೊಂಡಂತೆ) ಸಹಾಯಧನವನ್ನು ಒದಗಿಸಲಾಗುವುದು.
ಆಡಳಿತಾತ್ಮಕ ವೆಚ್ಚವನ್ನು ಒಂದು ಬಾರಿ ಮಾತ್ರ ನೀಡಲಾಗುವುದು. (ವೈಯಕ್ತಿಕ ಫಲಾನುಭವಿಗಳನ್ನು ಹೊರತುಪಡಿಸಿ) ಕೃಷಿ ಯಂತ್ರೋಪಕರಣಗಳ ನೈಜ ಬೆಲೆ ಆಧರಿಸಿ ಫಲಾನುಭವಿ ವರ್ಗವಾರು/ಸಂಘ-ಸಂಸ್ಥೆವಾರು(FPO ಗಳನ್ನೊಳಗೊಂಡಂತೆ) ನಿಗದಿಪಡಿಸಿದ ಗರಿಷ್ಠ ಸಹಾಯಧನವನ್ನು ಒದಗಿಸಲಾಗುವುದು. ಸಹಾಯಧನವನ್ನು Credit linked Back Ended Subsidy ಮುಖಾಂತರವೇ ನೀಡಲಾಗುವುದು.
ವಿವಿಧ ರೀತಿಯ ಹಾರ್ವೆಸ್ಟರ್ ಹಬ್‌ಗಳಿಗೆ ನಿಗದಿಪಡಿಸಿದ ಗರಿಷ್ಠ ಸಹಾಯಧನದ ಮೊತ್ತಕ್ಕೆ ಮಿತಿಗೊಳಿಸಿ ಸ್ಥಳೀಯವಾಗಿ ಬೆಳೆಗಳ ವಿಸ್ತೀರ್ಣದ ಆಧಾರದ ಮೇಲೆ ಅಗತ್ಯವಿರುವ ಯಂತ್ರೋಪಕರಣಗಳನ್ನು ದಾಸ್ತಾನೀಕರಿಸಬೇಕಾಗಿರುತ್ತದೆ.
ಕಂಬೈನ್ಡ್ ಹಾರ್ವೆಸ್ಟರ್ ಹಬ್ ನಲ್ಲಿ ಕಂಬೈನ್ಡ್ ಹಾರ್ವೆಸ್ಟರ್ ರೊಂದಿಗೆ Baler ದಾಸ್ತಾನೀಕರಿಸುವುದು ಕಡ್ಡಾಯವಾಗಿರುತ್ತದೆ. ಆಯ್ಕೆಯಾದ ಫಲಾನುಭವಿಗಳು/ ಸಂಘ-ಸಂಸ್ಥೆಗಳು ಕೃಷಿ ಮೂಲಭೂತ ಸೌಕರ್ಯ ನಿಧಿ(AIF-Agricultural Infrastructure Fund) ಸಾಲದ ನೆರವನ್ನು ಪಡೆಯಲು ಸಹ ಅವಕಾಶವಿರುತ್ತದೆ.
ಹೈಟೆಕ್ ಹಾರ್ವೆಸ್ಟರ್ ಹಬ್‌ಗಳಲ್ಲಿ ದಾಸ್ತಾನೀಕರಿಸುವ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದ ಮೇಲೆ Corridor ನಲ್ಲಿ ಬರುವ ರೈತರಿಗೆ ಒದಗಿಸಲಾಗುವುದು.
ಆಸಕ್ತ ರೈತರು, ಕೃಷಿ ಯಂತ್ರಧಾರೆ ಕೇಂದ್ರಗಳು/ಸೇವಾದಾರ ಸಂಸ್ಥೆಗಳು ಹಾಗೂ ನೊಂದಾಯಿತ ಸಂಘ-ಸಂಸ್ಥೆಗಳು (FPO ಗಳನ್ನೊಳಗೊಂಡಂತೆ) ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಉಪ ಕೃಷಿ ನಿರ್ದೇಶಕರ ಕಛೇರಿ, ಬೆಂಗಳೂರು ಹಾಗೂ ಜಂಟಿ ಕೃಷಿ ನಿರ್ದೇಶಕರ ಕಛೇರಿ ಬೆಂಗಳೂರು ಜಿಲ್ಲೆ ಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…