ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗಾಗಿ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲು ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳು/ಸೇವಾದಾರ ಸಂಸ್ಥೆಗಳು/ವೈಯಕ್ತಿಕ ಫಲಾನುಭವಿಗಳು (Individual) ಹಾಗೂ ನೊಂದಾಯಿತ ಸಂಘ-ಸಂಸ್ಥೆಗಳಿಂದ (FPO) ಅರ್ಜಿ ಆಹ್ವಾನಿಸಲಾಗಿದೆ.

ಸ್ಥಳೀಯವಾಗಿ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಯಂತ್ರಧಾರೆ ಕೇಂದ್ರಗಳ/ಕೃಷಿ ಯಂತ್ರೋಪಕರಣಗಳ ಬ್ಯಾಂಕ್ (farm machinery Bank FMB) ಗಳ ಸಂಸ್ಥೆಗಳಿಗೆ ಆದ್ಯತೆ ನೀಡಲಾಗುವುದು. ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50 ರಂತೆ ಪ.ಜಾ/ಪ.ಪಂ ವರ್ಗದ ರೈತರಿಗೆ ಗರಿಷ್ಠ ಶೇ.70 ರಂತೆ ಹಾಗೂ ಸಂಘ-ಸಂಸ್ಥೆಗಳಿಗೆ (ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆ/ FPO ಗಳನ್ನೊಳಗೊಂಡಂತೆ) ಗರಿಷ್ಠ ಶೇ.70 ರಂತೆ ಸಹಾಯಧನವನ್ನು ನೀಡಲಾಗುವುದು.

ವಿವಿಧ ಹಾರ್ವೆಸ್ಟರ್ ಹಬ್‌ಗಳಿಗೆ ನಿಗಧಿಪಡಿಸಿದ ಗರಿಷ್ಠ ಸಹಾಯಧನದ ಮೊತ್ತಕ್ಕೆ ಸೀಮಿತಗೊಳಿಸಿ ಸ್ಥಳೀಯವಾಗಿ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳನ್ನು ದಾಸ್ತಾನೀಕರಿಸಲು ಪ್ರತಿ ಒಂದು ಹೈಟೆಕ್ ಹಾರ್ವೆಸ್ಟರ್ ಹಬ್ ಘಟಕಕ್ಕೆ ಗರಿಷ್ಠ ಮೊತ್ತ ರೂ.100.00 ಲಕ್ಷಗಳು ಮೀರದಂತೆ (ರೂ.5.00 ಲಕ್ಷಗಳ ಆಡಳಿತಾತ್ಮಕ ವೆಚ್ಚ ಒಳಗೊಂಡಂತೆ) ಸಹಾಯಧನವನ್ನು ಒದಗಿಸಲಾಗುವುದು.

ಆಡಳಿತಾತ್ಮಕ ವೆಚ್ಚವನ್ನು ಒಂದು ಬಾರಿ ಮಾತ್ರ ನೀಡಲಾಗುವುದು. (ವೈಯಕ್ತಿಕ ಫಲಾನುಭವಿಗಳನ್ನು ಹೊರತುಪಡಿಸಿ) ಕೃಷಿ ಯಂತ್ರೋಪಕರಣಗಳ ನೈಜ ಬೆಲೆ ಆಧರಿಸಿ ಫಲಾನುಭವಿ ವರ್ಗವಾರು/ಸಂಘ-ಸಂಸ್ಥೆವಾರು(FPO ಗಳನ್ನೊಳಗೊಂಡಂತೆ) ನಿಗದಿಪಡಿಸಿದ ಗರಿಷ್ಠ ಸಹಾಯಧನವನ್ನು ಒದಗಿಸಲಾಗುವುದು. ಸಹಾಯಧನವನ್ನು Credit linked Back Ended Subsidy ಮುಖಾಂತರವೇ ನೀಡಲಾಗುವುದು.

ವಿವಿಧ ರೀತಿಯ ಹಾರ್ವೆಸ್ಟರ್ ಹಬ್‌ಗಳಿಗೆ ನಿಗದಿಪಡಿಸಿದ ಗರಿಷ್ಠ ಸಹಾಯಧನದ ಮೊತ್ತಕ್ಕೆ ಮಿತಿಗೊಳಿಸಿ ಸ್ಥಳೀಯವಾಗಿ ಬೆಳೆಗಳ ವಿಸ್ತೀರ್ಣದ ಆಧಾರದ ಮೇಲೆ ಅಗತ್ಯವಿರುವ ಯಂತ್ರೋಪಕರಣಗಳನ್ನು ದಾಸ್ತಾನೀಕರಿಸಬೇಕಾಗಿರುತ್ತದೆ.

ಕಂಬೈನ್ಡ್ ಹಾರ್ವೆಸ್ಟರ್ ಹಬ್ ನಲ್ಲಿ ಕಂಬೈನ್ಡ್ ಹಾರ್ವೆಸ್ಟರ್ ರೊಂದಿಗೆ Baler ದಾಸ್ತಾನೀಕರಿಸುವುದು ಕಡ್ಡಾಯವಾಗಿರುತ್ತದೆ. ಆಯ್ಕೆಯಾದ ಫಲಾನುಭವಿಗಳು/ ಸಂಘ-ಸಂಸ್ಥೆಗಳು ಕೃಷಿ ಮೂಲಭೂತ ಸೌಕರ್ಯ ನಿಧಿ(AIF-Agricultural Infrastructure Fund) ಸಾಲದ ನೆರವನ್ನು ಪಡೆಯಲು ಸಹ ಅವಕಾಶವಿರುತ್ತದೆ.

ಹೈಟೆಕ್ ಹಾರ್ವೆಸ್ಟರ್ ಹಬ್‌ಗಳಲ್ಲಿ ದಾಸ್ತಾನೀಕರಿಸುವ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದ ಮೇಲೆ Corridor ನಲ್ಲಿ ಬರುವ ರೈತರಿಗೆ ಒದಗಿಸಲಾಗುವುದು.

ಆಸಕ್ತ ರೈತರು, ಕೃಷಿ ಯಂತ್ರಧಾರೆ ಕೇಂದ್ರಗಳು/ಸೇವಾದಾರ ಸಂಸ್ಥೆಗಳು ಹಾಗೂ ನೊಂದಾಯಿತ ಸಂಘ-ಸಂಸ್ಥೆಗಳು (FPO ಗಳನ್ನೊಳಗೊಂಡಂತೆ) ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಉಪ ಕೃಷಿ ನಿರ್ದೇಶಕರ ಕಛೇರಿ, ಬೆಂಗಳೂರು ಹಾಗೂ ಜಂಟಿ ಕೃಷಿ ನಿರ್ದೇಶಕರ ಕಛೇರಿ ಬೆಂಗಳೂರು ಜಿಲ್ಲೆ ಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

59 minutes ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

5 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

5 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

7 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

12 hours ago