ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ ಪೌಷ್ಟಿಕ ಪೂರಕ ಮೇವು ಒದಗಿಸುವ ಉದ್ದೇಶದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ 200 ಅಜೋಲಾ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆ ಮುಂದಾಗಿದೆ.

ಬಯಲುಸೀಮೆ ಪ್ರದೇಶವಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಳೆಯಾಶ್ರಿತ ಕೃಷಿ ಚಟುವಟಿಕೆ ಪ್ರಮುಖವಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ಹೈನುಗಾರಿಕೆಯೂ ವಿಸ್ತರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕಡಿಮೆ ಸ್ಥಳ, ಕಡಿಮೆ ವೆಚ್ಚ ಹಾಗೂ ಕಡಿಮೆ ನೀರಿನ ಬಳಕೆಯಲ್ಲಿ ಉತ್ಪಾದಿಸಬಹುದಾದ ಅಜೋಲಾವನ್ನು ಜಾನುವಾರುಗಳ ಪೌಷ್ಟಿಕ ಪೂರಕ ಆಹಾರವಾಗಿ ಬಳಸುವ ಯೋಜನೆಗೆ ಇಲಾಖೆ ಒತ್ತು ನೀಡಿದೆ.

ಹಸಿರು ಮೇವು ಕೊರತೆಗೆ ಪೂರಕ ಆಹಾರ

ಅಜೋಲಾದಲ್ಲಿ ಪ್ರೋಟೀನ್, ಖನಿಜಾಂಶ ಸೇರಿದಂತೆ ವಿವಿಧ ಪೌಷ್ಟಿಕಾಂಶಗಳಿರುವುದರಿಂದ ಮಳೆಯ ಅಭಾವ ಅಥವಾ ಹಸಿರು ಮೇವಿನ ಕೊರತೆಯ ಸಂದರ್ಭಗಳಲ್ಲಿ ಜಾನುವಾರುಗಳಿಗೆ ಪೂರಕ ಆಹಾರವಾಗಿ ನೀಡಬಹುದಾಗಿದೆ. ವಿಶೇಷವಾಗಿ ಹಾಲು ನೀಡುವ ಹಸುಗಳಿಗೆ ಸ್ಥಳೀಯವಾಗಿ ಲಭ್ಯವಾಗುವ ಪೌಷ್ಟಿಕ ಆಹಾರದ ಮೂಲವನ್ನಾಗಿ ಅಜೋಲಾ ಘಟಕಗಳನ್ನು ಅಭಿವೃದ್ಧಿಪಡಿಸುವ ಉದ್ದೇಶ ಹೊಂದಲಾಗಿದೆ.

ಯೋಜನೆಯಡಿ ಜಿಲ್ಲೆಗೆ ಭೌತಿಕ ಹಾಗೂ ಆರ್ಥಿಕ ಗುರಿ ನಿಗದಿಪಡಿಸಲಾಗಿದ್ದು, ಒಟ್ಟು 200 ಅಜೋಲಾ ಘಟಕಗಳ ಸ್ಥಾಪನೆಗೆ ಪ್ರಸ್ತಾವಿಸಲಾಗಿದೆ. ಘಟಕಗಳ ಸ್ಥಾಪನೆಗೆ ಅಗತ್ಯ ಅನುದಾನ ಮತ್ತು ಸಾಮಗ್ರಿಗಳನ್ನು ಯೋಜನೆಯ ಮಾರ್ಗಸೂಚಿಯಂತೆ ಒದಗಿಸಲಾಗುತ್ತದೆ.

ಮನೆಯಲ್ಲೇ 10×4 ಅಡಿ ಘಟಕ

ರೈತರ ಮನೆ ಅಥವಾ ಜಾನುವಾರು ಕೊಟ್ಟಿಗೆಯ ಸಮೀಪವೇ ಅಜೋಲಾ ಘಟಕ ನಿರ್ಮಿಸಬಹುದಾಗಿದೆ. ಸುಮಾರು 10 ಅಡಿ ಉದ್ದ, 4 ಅಡಿ ಅಗಲ ಹಾಗೂ 1 ಅಡಿ ಆಳದ ಘಟಕವನ್ನು ನಿರ್ಮಿಸಲಾಗುತ್ತದೆ. ಪ್ರತಿ ಘಟಕಕ್ಕೆ ಸುಮಾರು ₹3,150 ವೆಚ್ಚ ಅಂದಾಜಿಸಲಾಗಿದೆ. ಇದರಲ್ಲಿ ಅಗತ್ಯ ಸಾಮಗ್ರಿ ಹಾಗೂ ಕೂಲಿ ವೆಚ್ಚವೂ ಸೇರಿದೆ.

ಘಟಕದಲ್ಲಿ ಶೇ.80ರಷ್ಟು ನೆರಳು ಒದಗಿಸುವ ಬಲೆ ಹಾಗೂ ಬಿದಿರು ಬಳಕೆಯಾಗಲಿದ್ದು, ಫಲವತ್ತಾದ ಮಣ್ಣು, ಸಗಣಿ ಮತ್ತು ಸೂಪರ್ ಫಾಸ್ಫೇಟ್ ಮಿಶ್ರಣದ ಮೂಲಕ ಅಜೋಲಾ ಬೆಳೆಯಲು ವ್ಯವಸ್ಥೆ ಮಾಡಲಾಗುತ್ತದೆ. ಸ್ಥಳ ಸಿದ್ಧತೆ, ತೊಟ್ಟಿ ಅಳವಡಿಕೆ, ಸಂರಕ್ಷಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ಕೆ ಎರಡು ಮಾನವ ದಿನಗಳ ಕೂಲಿ ವೆಚ್ಚವಾಗಿ ದಿನಕ್ಕೆ ₹350ರಂತೆ ₹700 ಒದಗಿಸಲಾಗುತ್ತದೆ.

ಸೂಕ್ತ ಫಲಾನುಭವಿಗಳ ಆಯ್ಕೆ

ಜಿಲ್ಲೆಗೆ ನಿಗದಿಪಡಿಸಿರುವ ಗುರಿಯನ್ನು ತಾಲೂಕು ಹಾಗೂ ಗ್ರಾಮ ಪಂಚಾಯಿತಿವಾರು ಹಂಚಿಕೆ ಮಾಡಲಾಗುತ್ತದೆ. ಅಜೋಲಾ ಘಟಕ ಸ್ಥಾಪನೆಗೆ ಸೂಕ್ತ ಸ್ಥಳ ಹಾಗೂ ಸ್ವಚ್ಛ ನೀರಿನ ಲಭ್ಯತೆ ಹೊಂದಿರುವ ಜಾನುವಾರು ಸಾಕಾಣಿಕೆದಾರರನ್ನು ಆದ್ಯತೆಯ ಮೇರೆಗೆ ಆಯ್ಕೆ ಮಾಡಲಾಗುತ್ತದೆ.

ಕಲುಷಿತ ನೀರಿನಲ್ಲಿ ಅಜೋಲಾ ಬೆಳೆಯುವುದರಿಂದ ಮಾಲಿನ್ಯಕಾರಕಗಳ ಅಪಾಯ ಇರುವ ಹಿನ್ನೆಲೆಯಲ್ಲಿ, ಸ್ವಚ್ಛ ನೀರು ಲಭ್ಯವಿರುವ ಸ್ಥಳಗಳನ್ನೇ ಘಟಕಗಳ ಸ್ಥಾಪನೆಗೆ ಆಯ್ಕೆ ಮಾಡುವಂತೆ ಇಲಾಖೆ ಸೂಚಿಸಿದೆ.

ಹೈನುಗಾರರಿಗೆ ತಾಂತ್ರಿಕ ತರಬೇತಿ

ಫಲಾನುಭವಿಗಳಿಗೆ ಅಜೋಲಾ ಉತ್ಪಾದನೆ, ಕೊಯ್ಲು, ಸ್ವಚ್ಛತೆ, ಸಂಸ್ಕರಣೆ ಹಾಗೂ ಜಾನುವಾರುಗಳಿಗೆ ನೀಡುವ ವಿಧಾನ ಕುರಿತು ಅಗತ್ಯ ತಾಂತ್ರಿಕ ತರಬೇತಿ ನೀಡಲಾಗುತ್ತದೆ. ಅಜೋಲಾ ಉತ್ಪಾದನೆ ಹಾಗೂ ನಿರ್ವಹಣೆಯಲ್ಲಿ ಹೈನುಗಾರರಿಗೆ ಅಗತ್ಯ ಮಾರ್ಗದರ್ಶನ ಮತ್ತು ಪರಿಕರಗಳ ಕುರಿತು ಇಲಾಖೆಯಿಂದ ಮಾಹಿತಿ ನೀಡಲಾಗುತ್ತದೆ.

ಜಿಪಿಎಸ್, ಛಾಯಾಚಿತ್ರದೊಂದಿಗೆ ದಾಖಲೀಕರಣ

ಯೋಜನೆಯ ಅನುಷ್ಠಾನದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಪ್ರತಿ ಘಟಕದ ಫಲಾನುಭವಿಯ ವಿವರ, ಆಧಾರ್ ಮಾಹಿತಿ, ಜಿಪಿಎಸ್ ಸ್ಥಳ ಹಾಗೂ ಘಟಕದ ಕಾರ್ಯಾರಂಭಕ್ಕೂ ಮುನ್ನ ಮತ್ತು ನಂತರದ ಛಾಯಾಚಿತ್ರಗಳನ್ನು ಕಡ್ಡಾಯವಾಗಿ ದಾಖಲಿಸಲಾಗುತ್ತದೆ.

ವಿಬಿ ಜೀ ರಾಮ್‌ಜಿ ಯೋಜನೆಯ ಮಾರ್ಗಸೂಚಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಯೋಜನೆಯೊಂದಿಗೆ ಸಮನ್ವಯಗೊಳಿಸಿ ಯೋಜನೆ ಅನುಷ್ಠಾನಗೊಳ್ಳಲಿದೆ. ಜಿಲ್ಲಾ ಉಪನಿರ್ದೇಶಕರು ಮಾಸಿಕ ವೇಳಾಪಟ್ಟಿ ಸಿದ್ಧಪಡಿಸಿ ಯೋಜನೆಯ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲಿದ್ದು, ಪ್ರತಿ ತಿಂಗಳ 5ರೊಳಗೆ ಪ್ರಗತಿ ವರದಿಯನ್ನು ರಾಜ್ಯ ಕಚೇರಿಗೆ ಸಲ್ಲಿಸಬೇಕೆಂದು ಇಲಾಖೆಯ ಆಯುಕ್ತರು ಸೂಚಿಸಿದ್ದಾರೆ.

‘200ಕ್ಕೆ ಸೀಮಿತವಲ್ಲ, ಇನ್ನಷ್ಟು ಘಟಕಗಳ ಗುರಿ’

ಜಾನುವಾರುಗಳಿಗೆ, ಅದರಲ್ಲೂ ವಿಶೇಷವಾಗಿ ಹಾಲು ನೀಡುವ ರಾಸುಗಳಿಗೆ ಸ್ಥಳೀಯವಾಗಿಯೇ ಪೌಷ್ಟಿಕ ಪೂರಕ ಮೇವು ಒದಗಿಸುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸ್ತುತ 200 ಅಜೋಲಾ ಘಟಕಗಳ ಸ್ಥಾಪನೆಗೆ ಪ್ರಸ್ತಾವನೆ ಇದ್ದು, ಮುಂದಿನ ಹಂತದಲ್ಲಿ ಇನ್ನಷ್ಟು ಘಟಕಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ. ಹೈನುಗಾರರಿಗೆ ಅಗತ್ಯ ಪರಿಕರಗಳೊಂದಿಗೆ ಉತ್ಪಾದನೆ ಹಾಗೂ ನಿರ್ವಹಣೆ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ವಿಬಿ ಜೀ ರಾಮ್‌ಜಿ ಯೋಜನೆಯಡಿ ಇದನ್ನು ಕಾರ್ಯಗತಗೊಳಿಸಲಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ರವಿಕುಮಾರ್ ಹೇಳಿದ್ದಾರೆ.

Ramesh Babu

Journalist

Recent Posts

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

12 hours ago

ಮಾದಕ ವಸ್ತುಗಳ (ಡ್ರಗ್ಸ್) ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಒಟ್ಟಾಗಿ ಕರ್ತವ್ಯ ನಿರ್ವಹಿಸಿ – ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ

ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ…

13 hours ago

ನಿಷೇಧಿತ ಕ್ಯಾಟ್ ಫಿಶ್ ಸಾಕಾಣಿಕೆ ಸ್ಥಳಗಳಿಗೆ ಸಿಇಒ ದಿಢೀರ್ ಭೇಟಿ: ಸ್ಥಳದಲ್ಲೇ ಕ್ಯಾಟ್ ಫಿಶ್, ಹೊಂಡಗಳ ನಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಕ್ಯಾಟ್‌ ಫಿಶ್‌ ಸಾಕಣೆ ಮಾಡುತ್ತಿದ್ದ ಹೊಂಡಗಳ…

14 hours ago

ಗೋಮಾಳ ಭೂಮಿಯಲ್ಲಿನ ರೈತರನ್ನು ಒಕ್ಕಲೆಬ್ಬಿಸದಂತೆ ಜಿಲ್ಲಾಧಿಕಾರಿಗೆ ಮನವಿ

ಕೋಲಾರ: ಮೈಸೂರು ಮಹಾರಾಜರ ಕಾಲದಿಂದಲೂ ಸಕ್ಷಮ ಪ್ರಾಧಿಕಾರದಿಂದ ಕಾನೂನುಬದ್ಧವಾಗಿ ರೈತರಿಗೆ ಹಂಚಿಕೆಯಾಗಿರುವ ಸರ್ಕಾರಿ ಗೋಮಾಳ ಹಾಗೂ ಕಂದಾಯ ಭೂಮಿಯಲ್ಲಿನ ರೈತರನ್ನು…

17 hours ago

ವೈಯಕ್ತಿಕ ವಿಚಾರಕ್ಕೆ ಸಿಎಂ ಭೇಟಿ; ತಾಲೂಕಿನ ಹಿತರಕ್ಷಣೆಗಲ್ಲ? ವೆಂಕಟರಮಣಯ್ಯ ವಿರುದ್ಧ ಕಾಡನೂರು ಗ್ರಾ.ಪಂ ಮಾಜಿ ಅಧ್ಯಕ್ಷ ಮನು ಎನ್ ಆರ್ ಆರೋಪ

ದೊಡ್ಡಬಳ್ಳಾಪುರ: ಅಳಿಯನ ವರ್ಗಾವಣೆ ಸೇರಿದಂತೆ ವೈಯಕ್ತಿಕ ವಿಚಾರಗಳಿಗಾಗಿ ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು…

19 hours ago

ಬರ ಘೋಷಣೆ ಬಳಿಕ ಸಿಎಂಗೆ ಮನವಿ: ಮಾಜಿ ಶಾಸಕ ಟಿ.ವೆಂಕಟರಮಣಯ್ಯ ನಡೆಗೆ ನಗರಸಭೆ ಉಪಾಧ್ಯಕ್ಷ ಬಂತಿ ವೆಂಕಟೇಶ್ ತರಾಟೆ

ದೊಡ್ಡಬಳ್ಳಾಪುರ: 2026ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ, ಮರು ಜಂಟಿ ಬೆಳೆ…

22 hours ago