ಹೈನುಗಾರಿಕೆ & ಎರೆಹುಳುಗೊಬ್ಬರ ತಯಾರಿಕೆ ಉಚಿತ ತರಬೇತಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಹಸು ಸಾಕಾಣಿಕೆ(ಹೈನುಗಾರಿಕೆ) & ಎರೆಹುಳುಗೊಬ್ಬರ ಕುರಿತ 10 ದಿನಗಳ ಉಚಿತ ತರಬೇತಿಯು ಸೆಪ್ಟೆಂಬರ್‌ 24 ರಿಂದ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್‌ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್‌ ಕಾರ್ಡ್‌ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್‌ 18 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬೆಳಗಾವಿ: 4.21 ಲಕ್ಷ ರೂ.ಮೌಲ್ಯದ ಅನಧಿಕೃತ ಜೈವಿಕ ಉತ್ತೇಜಕಗಳ ಜಪ್ತಿ

ನೋಂದಣಿ ಪರವಾನಗಿಯಿಲ್ಲದ ಹಾಗೂ ಅನಧಿಕೃತ ಜೈವಿಕ ಉತ್ತೇಜಕಗಳನ್ನು (Biostimulation products) ದಾಸ್ತಾನು ಇರಿಸಿಕೊಂಡಿದ್ದ ಮಳಿಗೆಯ ಮೇಲೆ ಕೃಷಿ ಇಲಾಖೆಯ ಜಾಗೃತ…

31 minutes ago

ವಿಷಮುಕ್ತ ಕೃಷಿಯಿಂದ ರೈತರ ಆರ್ಥಿಕ ಪ್ರಗತಿ ಸಾಧ್ಯ: ನಟರಾಜ್ ವಿ

ದೊಡ್ಡಬಳ್ಳಾಪುರ: ಅತಿಯಾದ ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಸಿಯುವುದರ ಜೊತೆಗೆ ಮನುಷ್ಯನ ಆರೋಗ್ಯದ ಮೇಲೂ ಗಂಭೀರ…

1 hour ago

ಇತಿಹಾಸದ ಸತ್ಯ ಮಾರುಕಟ್ಟೆಯಲ್ಲಿ ಮಾರಾಟಕ್ಕಿದೆ……

ಗಾಂಧಿ ಹತ್ಯೆ ಹಿಂದಿನ ಸತ್ಯ, ಲಾಲ್ ಬಹದ್ದೂರ್ ಶಾಸ್ತ್ರಿ ಸಾವಿನ ಸತ್ಯ, ಬಸವಣ್ಣನವರ ಮರಣದ ಹಿಂದಿನ ಸತ್ಯ, ಟಿಪ್ಪು ಸುಲ್ತಾನ್…

2 hours ago

ಇರುವುದೊಂದೇ ಬದುಕು. ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳೋಣ….

ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ ನನ್ನೋರು........... ಒಂದು ಚಿತ್ರ ಗೀತೆಯ ಹಾಡಿನ ಸಾಲುಗಳಿವು.…

1 day ago

2,411 ದಿನಗಳಿಂದ ನಿರಂತರ ಅನ್ನದಾಸೋಹ: ದಾನಿಗಳ ಸೇವೆಗೆ ಗಣ್ಯರ ಮೆಚ್ಚುಗೆ

  ದೊಡ್ಡಬಳ್ಳಾಪುರ: ಹಸಿದವರಿಗೆ ಅನ್ನ ನೀಡುವ ಮಹತ್ಕಾರ್ಯವನ್ನು ಕಳೆದ 2,411 ದಿನಗಳಿಂದ ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಅನ್ನದಾಸೋಹಿ ಮಲ್ಲೇಶ್ ಮತ್ತು…

2 days ago

ಮಾನವೀಯ ಸಂಬಂಧಗಳ ಹುಡುಕುತ್ತಾ………

ಅಕ್ಕ, ತಮ್ಮನ ಕೈ ಹಿಡಿದುಕೊಂಡು ರಸ್ತೆ ದಾಟುತ್ತಾ ಇರುವಾಗ ತಮ್ಮ ಕೈ ಹಿಡಿದೇ ಅಕ್ಕನ ಹಿಂದೆ ಪುಟ್ಟ ಪುಟ್ಟ ಹೆಜ್ಜೆ…

2 days ago