ಕೋಲಾರ: ಹೈನುಗಾರಿಕೆಯು ಗ್ರಾಮೀಣ ಜನರ ಆರ್ಥಿಕತೆಯ ಬದುಕಿಗೆ ಆಸರೆಯಾಗಿದೆ. ಇತ್ತಿಚಿನ ದಿನಗಳಲ್ಲಿ ರೈತರು ಕೃಷಿಯ ಜೊತೆಗೆ ಹೈನುಗಾರಿಕೆ ಮಾಡಿಕೊಂಡು ಸುಖಿ ಜೀವನ ನಡೆಸುತ್ತಿದ್ದಾರೆ ಎಂದು ಕೋಮುಲ್ ನಿರ್ದೇಶಕ ಚೆಲುವನಹಳ್ಳಿ ಡಿ.ನಾಗರಾಜ್ ತಿಳಿಸಿದರು.
ತಾಲೂಕಿನ ಕೊಂಡರಾಜನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು ಹೈನುಗಾರಿಕೆಯಲ್ಲಿ ತೊಡಗಿರುವ ಹಾಲು ಉತ್ಪಾದಕರಿಗೆ ಒಕ್ಕೂಟವು ಸೂಕ್ತ ಬೆಲೆ ನೀಡಿ ಹಾಲು ಖರೀದಿ ಮಾಡುತ್ತಿದೆ ಗುಣಮಟ್ಟದ ಹಾಲು ಡೇರಿಗೆ ನೀಡುವ ಮೂಲಕ ಸಂಘಗಳು ಸಹ ಉತ್ತಮ ಲಾಭಾಂಶವನ್ನು ಪಡೆದುಕೊಳ್ಳಬೇಕು ಎಂದರು.
ರೈತರು ಹೈನುಗಾರಿಕೆ ನಡೆಸಲು ಒಕ್ಕೂಟದಿಂದ ಹಾಗೂ ಸಹಕಾರಿ ಬ್ಯಾಂಕುಗಳು ಮೂಲಕ ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ ನಿಮ್ಮ ಸಂಘದಲ್ಲಿ ಜಾಗ ಇದ್ದರೆ ಕಟ್ಟಡ ಕಟ್ಟಲು ಕೋಮುಲ್ ಒಕ್ಕೂಟ, ಕೆಎಂಎಫ್ ಹಾಗೂ ಧರ್ಮಸ್ಥಳ ಸಂಘದ ಮೂಲಕ ಸುಮಾರು 11 ಲಕ್ಷ ಅನುದಾನವನ್ನು ನೀಡಲಾಗುತ್ತದೆ ಸದುಪಯೋಗ ಪಡಿಸಿಕೊಳ್ಳಬೇಕು ಉತ್ಪಾದಕರನ್ನು ಪೋತ್ಸಾಹಿಸುವ ಕೆಲಸವನ್ನು ಸಂಘಗಳು ಮಾಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಕೋಮುಲ್ ಉಪ ವ್ಯವಸ್ಥಾಪಕ ಡಾ.ಮಹೇಶ್ ಮಾತನಾಡಿ, ಕೋಮುಲ್ ವತಿಯಿಂದ ನೀಡುವ ಸವಲತ್ತುಗಳನ್ನು ಹಾಲು ಉತ್ಪಾದಕರು ಸಮರ್ಪಕವಾಗಿ ಬಳಸಿಕೊಂಡು ಡೇರಿಗೆ ಗುಣಮಟ್ಟದ ಹಾಲನ್ನು ಪೂರೈಸಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು. ರೈತರು ತಮ್ಮ ಹಸುಗಳಿಗೆ ವಿಮೆ ಮಾಡಿಸಿಕೊಂಡು ಅವುಗಳ ಆರೋಗ್ಯವು ಕಾಪಾಡಿಕೊಳ್ಳಬೇಕು ಹಿಂದೆ ಸಂಘದಲ್ಲಿ ನಷ್ಟದಲ್ಲಿ ಇದ್ದ ಡೇರಿ ಈ ಬಾರಿ 46 ಸಾವಿರ ಲಾಭ ಗಳಿಸಿದೆ ಇದು ಸಾಲದು ಮುಂದೆ ಆಡಳಿತ ಮಂಡಳಿಯ ಒಗ್ಗಟ್ಟಿನಿಂದ ಡೇರಿ ಅಭಿವೃದ್ಧಿಗೆ ಮುಂದಾಗಬೇಕು ಎಂದರು.
ಸಂಘದ ಅಧ್ಯಕ್ಷ ಹೆಚ್ ನಾಗರಾಜ್ ಮಾತನಾಡಿ ಕೊಂಡರಾಜನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಪ್ರಸಕ್ತ ಸಾಲಿನಲ್ಲಿ 2.61 ಲಕ್ಷ ರೂ ವ್ಯಾಪಾರ ಲಾಭ ಗಳಿಸಿ 46 ಸಾವಿರ ನಿವ್ವಳ ಲಾಭಗಳಿಸಿದೆ ಮುಂದೆ ಹೆಚ್ಚಿನ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೋಮುಲ್ ವಿಸ್ತರಣಾಧಿಕಾರಿ ನಾಗಪ್ಪ, ಗ್ರಾಪಂ ಸದಸ್ಯರಾದ ಶ್ರೀನಿವಾಸ್ ಯಾದವ್, ಸುಬ್ಬರಾಮಪ್ಪ, ಮುಖಂಡ ಕೋರ್ಟ್ ನಾಗರಾಜ್, ಸಂಘದ ಉಪಾಧ್ಯಕ್ಷ ಕೆ.ವಿ ಮಂಜುನಾಥ್, ನಿರ್ದೇಶಕರಾದ ಶಂಕರಪ್ಪ, ಲಕ್ಷ್ಮೀಪತಿ, ನಾರಾಯಣಸ್ವಾಮಿ, ಮುರಳಿಬಾಬು, ಸಿ.ನಾರಾಯಣಸ್ವಾಮಿ, ನಂದಕುಮಾರ್, ವೆಂಕಟಲಕ್ಷ್ಮಮ್ಮ, ಕಾರ್ಯದರ್ಶಿ ಗಂಗಾಧರ್ ನಿರೂಪಕಿ ಕೊಂಡರಾಜನಹಳ್ಳಿ ಮಂಜುಳ ಸೇರಿದಂತೆ ಹಾಲು ಉತ್ಪಾದಕರು ಗ್ರಾಮಸ್ಥರು ಇದ್ದರು.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…