ಹೈವೆಯಿಂದ ಸರ್ವಿಸ್ ರಸ್ತೆಗೆ ಹಸು ಸಾಗಾಟ ಬೊಲೆರೊ ಪಲ್ಟಿ: ಬೆಲೆಬಾಳುವ ಹಸುಗಳ ಸ್ಥಿತಿ ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಹಸುಗಳನ್ನು ತುಂಬಿಕೊಂಡು ಹೋಗುತ್ತಿದ್ದ ಬೊಲೆರೊ ವಾಹನ ಹೈವೆಯಿಂದ ಸರ್ವಿಸ್ ರಸ್ತೆಗೆ ಪಲ್ಟಿ ಹೊಡೆದಿರುವ ಘಟನೆ ದೊಡ್ಡಬಳ್ಳಾಪುರದ ಮಧುರನಹೊಸಹಳ್ಳಿ ಗೇಟ್ ಸಮೀಪ ಹಾದು ಹೋಗಿರುವ ದಾಬಸ್ ಪೇಟೆ-ಹೊಸಕೋಟೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

 

ಘಟನೆಯಲ್ಲಿ 1.5 ಲಕ್ಷ ಮೌಲ್ಯದ ಒಂದು ಹಸುವಿನ ಸ್ಥಿತಿ ಗಂಭೀರವಾಗಿದೆ. ಮತ್ತೊಂದು ಹಸು ಪ್ರಾಣಾಪಾಯದಿಂದ ಪಾರಾಗಿದೆ.

ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!