ಸೆ.19ರಂದು ತಾಲೂಕಿನ ಗುಂಜೂರು ನಿವಾಸಿ ಶೈಲಜಾ ಅವರು ಒಂಟಿಯಾಗಿ ಹಿಂದೂಪುರ ಹಾಗೂ ಯಲಹಂಕ ಹೈವೆ ರಸ್ತೆಯಲ್ಲಿ ತನ್ನ ಪಾಡಿಗೆ ತಾನು ವಾಕಿಂಗ್ ಮಾಡುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ವೃದ್ಧ ಮಹಿಳೆಯ ಕೊರಳಲ್ಲಿದ್ದ 80 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಸಿದು ಪರಾರಿಯಾಗಿದ್ದರು.
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶೈಲಜಾ ಅವರು ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಕಳ್ಳರ ಬೆನ್ನತ್ತಿದ ಪೊಲೀಸರು, ಖತರ್ನಾಕ್ ಕಳ್ಳರನ್ನು ಬಂಧಿಸಿ, ಖದೀಮರಿಂದ ಚಿನ್ನದ ಮಾಂಗಲ್ಯ ಸರವನ್ನು ವಶಕ್ಕೆ ಪಡೆದು ವೃದ್ಧೆ ಶೈಲಜಾ ಅವರಿಗೆ ವಾಪಸ್ ನೀಡಿದ್ದಾರೆ.
ಮರಳಿ ಮಾಂಗಲ್ಯ ಸರ ಪಡೆದ ಶೈಲಜಾ ಅವರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.
ಘಟನೆ ವಿವರ
2024 ಸೆಪ್ಟೆಂಬರ್ 19 ರಂದು ಗುಂಜೂರು ಬಳಿ ಶೈಲಜಾ ಅವರು ಎಂದಿನಂತೆ ಬೆಳಿಗ್ಗೆ ಹೈವೆ ರಸ್ತೆ ಪಕ್ಕದಲ್ಲಿ ವಾಕಿಂಗ್ ಮಾಡುವಾಗ ಕೆಂಪು ಬಣ್ಣದ ಶಿಫ್ಟ್ ಕಾರ್ ನಲ್ಲಿ ನಾಲ್ಕು ಜನ ಬಂದು ಅದರಲ್ಲಿ ಒಬ್ಬ ಕಾರಿನಿಂದ ಕೆಳಗೆ ಇಳಿದು ಶೈಲಜಾ ರವರ ಕೊರಳಿನಲ್ಲಿದ್ದ ಚಿನ್ನದ ಚೈನನ್ನು ಕಿತ್ತುಕೊಂಡು ಹೋಗಿರುತ್ತಾರೆ.
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸೆಕ್ಟರ್ ಸಾಧಿಕ್ ಪಾಷಾ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಿದ ಪೊಲೀಸರ ತಂಡ ಒಟ್ಟು 34 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈ ಪ್ರಕರಣದಲ್ಲಿ ಸಹ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.
ಬಂಧಿತರನ್ನು ಸಯ್ಯದ್ರಿಹ್ವಾನ್ (19), ಶಿವಕುಮಾರ್ (34), ಚಂದ್ರಶೇಖರ್ (44), ಅಪ್ಪು (23) ಹಾಗೂ 17 ವರ್ಷದ ಅಪ್ರಾಪ್ತ ಬಾಲಕ ಎನ್ನಲಾಗಿದೆ.
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…