ಹೊನ್ನಘಟ್ಟದಲ್ಲಿ ಮೂರೂವರೆ ಎಕರೆ ಸರ್ಕಾರಿ ಜಮೀನು ಒತ್ತುವರಿ ಆರೋಪ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹೊನ್ನಘಟ್ಟ ಗ್ರಾಮದಲ್ಲಿ ಸುಮಾರು ಮೂರೂವರೆ ಎಕರೆ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡು, ಅದನ್ನು ಬೇರೆಯವರಿಗೆ ಬಾಡಿಗೆಗೆ ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಗ್ರಾಮದ ಚೆಲುವ ಹನುಮಯ್ಯ ಎಂಬುವವರು ತಮ್ಮ ಸ್ವಂತ ಜಮೀನಿಗೆ ಹೊಂದಿಕೊಂಡಿರುವ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡು ವಶಕ್ಕೆ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಗ್ರಾಮದ ನಿವಾಸಿ ನರಸಿಂಹಮೂರ್ತಿ ಆರೋಪಿಸಿದ್ದಾರೆ.

ಗ್ರಾಮದ ಸರ್ವೆ ನಂಬರ್ 53, 54, 55 ಮತ್ತು 56ರಲ್ಲಿ ಸರ್ಕಾರಿ ಜಮೀನು ಇದ್ದು, ಅದರ ಪಕ್ಕದಲ್ಲೇ ಚೆಲುವ ಹನುಮಯ್ಯ ಅವರಿಗೆ ಸೇರಿದ ಜಮೀನು ಇದೆ ಎನ್ನಲಾಗಿದೆ. ಸರ್ಕಾರಿ ಜಮೀನಿನ ಒತ್ತುವರಿ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ನರಸಿಂಹಮೂರ್ತಿ ಅವರು, ಕಳೆದ ಮಾರ್ಚ್ ತಿಂಗಳಲ್ಲೇ ನಿಯಮಾನುಸಾರ ಸರ್ವೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.

ಮನವಿಯ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸರ್ವೆ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲು ಮುಂದಾಗಿದ್ದರು. ಈ ವೇಳೆ ಚೆಲುವ ಹನುಮಯ್ಯ ಅವರು ಅಧಿಕಾರಿಗಳು ಮತ್ತು ಸರ್ವೆ ಸಿಬ್ಬಂದಿಗೆ ನೋಟಿಸ್ ನೀಡಿ ಸರ್ವೆ ಕಾರ್ಯ ಮುಂದುವರಿಸುವಂತೆ ನರಸಿಂಹಮೂರ್ತಿ ತಿಳಿಸಿದ್ದಾರೆ..

ಇದಲ್ಲದೆ, ಸರ್ಕಾರಿ ಜಮೀನನ್ನು ಈಗಾಗಲೇ ಬೇರೆಯವರಿಗೆ ಬಾಡಿಗೆಗೆ ನೀಡಲಾಗಿದೆ. ಅಲ್ಲಿದ್ದ ಕಾಲುವೆಯನ್ನು ಮುಚ್ಚಿ, ಜಮೀನನ್ನು ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಂಡು ಖಾತೆಯನ್ನೂ ಮಾಡಿಸಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ತಮ್ಮ ಜಮೀನು ಕೂಡ ಚೆಲುವ ಹನುಮಯ್ಯ ಅವರ ಜಮೀನಿನ ಪಕ್ಕದಲ್ಲೇ ಇದ್ದು, ಪ್ರತಿನಿತ್ಯ ತೊಂದರೆ ನೀಡುತ್ತಿದ್ದಾರೆ ಎಂದು ನರಸಿಂಹಮೂರ್ತಿ ಅಳಲು ತೋಡಿಕೊಂಡಿದ್ದಾರೆ.

ಸರ್ಕಾರಿ ಆಸ್ತಿ ರಕ್ಷಣೆಗೆ ಕ್ರಮ ಅಗತ್ಯ

ಸಾರ್ವಜನಿಕರ ಹಾಗೂ ಸರ್ಕಾರದ ಉದ್ದೇಶಗಳಿಗಾಗಿ ಮೀಸಲಿಟ್ಟಿರುವ ಸರ್ಕಾರಿ ಜಮೀನು ಒತ್ತುವರಿಯಾಗಿರುವ ಆರೋಪ ಗಂಭೀರ ಚರ್ಚೆಗೆ ಕಾರಣವಾಗಿದೆ. ಸರ್ವೆ ನಂಬರ್ 53, 54, 55 ಮತ್ತು 56ರ ಜಮೀನಿನ ಮೂಲ ದಾಖಲೆಗಳು, ಪಹಣಿ, ಖಾತೆ ಹಾಗೂ ನೋಂದಣಿ ಪತ್ರಗಳನ್ನು ಕಂದಾಯ ಇಲಾಖೆ ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸಬೇಕಿದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನಿಖರವಾಗಿ ಸರ್ವೆ ನಡೆಸಿ, ಸರ್ಕಾರಿ ಜಮೀನು ಒತ್ತುವರಿಯಾಗಿರುವುದು ದೃಢಪಟ್ಟಲ್ಲಿ ಕಾನೂನುಬದ್ಧ ಕ್ರಮ ಕೈಗೊಂಡು ಸರ್ಕಾರದ ಆಸ್ತಿಯನ್ನು ರಕ್ಷಿಸಬೇಕು ಎಂಬುದು ನರಸಿಂಹ ಮೂರ್ತಿ ಅವರ ಒತ್ತಾಯವಾಗಿದೆ.

ಒಟ್ಟಾರೆ, ಸರ್ಕಾರಿ ಜಮೀನು ಒತ್ತುವರಿಯಾಗಿದೆಯೇ, ಅದನ್ನು ಬೇರೆಯವರಿಗೆ ಬಾಡಿಗೆಗೆ ನೀಡಲಾಗಿದೆಯೇ ಹಾಗೂ ಕಾಲುವೆ ಮುಚ್ಚಿ ಖಾತೆ ಮಾಡಿಸಿಕೊಂಡಿರುವ ಆರೋಪದಲ್ಲಿ ಎಷ್ಟು ಸತ್ಯಾಂಶವಿದೆ ಎಂಬುದು ಕಂದಾಯ ಇಲಾಖೆಯ ಅಧಿಕೃತ ದಾಖಲೆಗಳ ಪರಿಶೀಲನೆ ಮತ್ತು ಸ್ಥಳ ಸಮೀಕ್ಷೆಯಿಂದಷ್ಟೇ ಸ್ಪಷ್ಟವಾಗಬೇಕಿದೆ.

Ramesh Babu

Journalist

Recent Posts

ರಾಜ್ಯದ ನೀರಾವರಿ ಜಾಲಕ್ಕೆ ಆಸ್ಟ್ರೇಲಿಯಾ ತಂತ್ರಜ್ಞಾನ ಬಲ; ‘ವಾಟರ್ ಟ್ರೇಡಿಂಗ್’ ಅಧ್ಯಯನಕ್ಕೆ ಸಚಿವ ಚಲುವರಾಯಸ್ವಾಮಿ ಸಮ್ಮತಿ

ರಾಜ್ಯದ ಹಳೆಯ ಕಾಲುವೆಗಳ ಆಧುನೀಕರಣ, ನೀರಿನ ಸೋರಿಕೆ ತಡೆಗಟ್ಟುವಿಕೆ ಹಾಗೂ ಕೃಷಿ ನೀರಾವರಿ ದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ…

2 hours ago

ಕಾಣೆಯಾಗುವ ಬಾಲ್ಯದ ಆದರ್ಶಗಳು……

ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಗುಣಮಟ್ಟದ ಪರೀಕ್ಷೆ ಮಾಡುವ ತನಿಖಾಧಿಕಾರಿಗಳು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡುತ್ತಾರೆ........ ನೀವು ದೊಡ್ಡವರಾದ ಮೇಲೆ ಏನಾಗಲು ಇಷ್ಟ…

9 hours ago

ಹಿಂಬದಿಯಿಂದ ಬೈಕ್ ಡಿಕ್ಕಿ: ಪಾದಚಾರಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ಕಾಡನೂರು ಕೈಮರ ಸಮೀಪದ ಆಂಜನಮೂರ್ತಿ ನಗರ ಬಳಿ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ…

1 day ago

ಕುಮಾರಸ್ವಾಮಿ ಕೇಂದ್ರ ಸಚಿವರಲ್ಲ; ಕೇಂದ್ರದ ವಕ್ತಾರ, ಟೀಕಾ ಸಚಿವ – ಕೃಷಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ‌ ವ್ಯಂಗ್ಯ

ವಿರಾಜಪೇಟೆ(ಕೊಡಗು): ಎಚ್.ಡಿ.ಕುಮಾರಸ್ವಾಮಿ ಅವರು ಒಬ್ಬ ಜವಾಬ್ದಾರಿಯುತ ಕೇಂದ್ರ ಸಚಿವರಂತೆ ವರ್ತಿಸುತ್ತಿಲ್ಲ, ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ವಕ್ತಾರರಾಗಿ ಕೆಲಸ ಮಾಡುತ್ತಿದ್ದಾರೆ‌ ಎಂದು…

2 days ago

ಕೆಮ್ಮಣ್ಣುಗುಂಡಿ ಸ್ಮಶಾನ ರಸ್ತೆ ಒತ್ತುವರಿ ತೆರವಿಗೆ ಆಗ್ರಹಿಸಿ ನ.25ರಿಂದ ಅನಿರ್ದಿಷ್ಟಾವಧಿ ಧರಣಿ

  ದೊಡ್ಡಬಳ್ಳಾಪುರ: ನಗರದ ವಿವಾದಿತ ಕೆಮ್ಮಣ್ಣುಗುಂಡಿ ಸಾರ್ವಜನಿಕ ಸ್ಮಶಾನದ ರಸ್ತೆಯನ್ನು ಪ್ರಭಾವಿಯೊಬ್ಬರು ಅತಿಕ್ರಮಿಸಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸುವಂತೆ ಹಲವು ವರ್ಷಗಳಿಂದ…

2 days ago

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಲು ನ.30 ಕೊನೆ ದಿನ

ನವೆಂಬರ್ 30 ರೊಳಗೆ ಪಡಿತರ ಚೀಟಿದಾರರು ತಮ್ಮ ಹತ್ತಿರದ ಯಾವುದೇ ನ್ಯಾಯಬೆಲೆ ಅಂಗಡಿ ಅಥವಾ "ಅನ್ನ ಸೇವೆ" ಮೊಬೈಲ್ ಅಪ್ಲಿಕೇಶನ್…

2 days ago