ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ 1.5 ಕೋಟಿ ಅನುದಾನದಲ್ಲಿ ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ 1.5 ಕಿ.ಮೀ ಡಾಂಬರ್ ಹಾಕಲಾಗಿದೆ. ಬೇಕಂತಲೇ ಬಿಜೆಪಿ ಕೆಲ ಮುಖಂಡರು ಹಾರೇಕೋಲಿನಿಂದ ಡಾಂಬರ್ ನ್ನು ಅಗೆದು ಈ ಕಾಮಗಾರಿ ಕಳಪೆ ಎಂದು ಹೇಳಲಾಗಿದೆ, ಇನ್ನೂ ಒಂದು ಪದರ ಡಾಂಬರ್ ಹಾಕುವುದು ಬಾಕಿ ಇದೆ, ಅಷ್ಟರಲ್ಲಿ ಈ ಆರೋಪವನ್ನು ಮಾಡಲಾಗಿದೆ. ಈ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಬಿಜೆಪಿ ಮುಖಂಡರ ಆರೋಪವನ್ನ ಜಿ.ಪಂ ಮಾಜಿ ಸದಸ್ಯ ಚುಂಚೇಗೌಡ ತಳ್ಳಿಹಾಕಿದರು.
ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ ಡಾಂಬರು ಹಾಕಿದ 15 ದಿನಗಳಲ್ಲೇ ಗುಂಡಿಗಳು ಬಿದ್ದಿವೆ. ಈ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಎಂದು ಬಿಜೆಪಿ ಮುಖಂಡರು ಆರೋಪ ಮಾಡಿ ರಸ್ತೆಯಲ್ಲಿ ಕುಳಿತು ಧರಣಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಗುರುವಾರ ಸ್ಥಳಕ್ಕೆ ಆಗಮಿಸಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, 20 ವರ್ಷಗಳಿಂದ ಈ ಗ್ರಾಮಕ್ಕೆ ರಸ್ತೆ ಇರಲಿಲ್ಲ. ರಾತ್ರಿ ಹೊತ್ತು ಓಡಾಡಲೂ ಗ್ರಾಮಸ್ಥರು ಪರದಾಡಬೇಕಾಗಿತ್ತು. ಕೊನೆಗೂ ಹೊನ್ನಾದೇವಿಪುರ ರಸ್ತೆಗೆ ಡಾಂಬರು ಭಾಗ್ಯ ಸಿಕ್ಕಿದೆ, ಇದರಲ್ಲಿ ರಾಜಕೀಯ ಮಾಡಬಾರದು, ಗ್ರಾಮದ ಅಭಿವೃದ್ಧಿಗೆ ಪಕ್ಷ ಬೇಧ ಮರೆತು ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.
ವಿಧಾನಸಭೆ ಚುನಾವಣೆ ಮುನ್ನವೇ ತಾಲೂಕಿನಲ್ಲಿ 40 ಕೋಟಿ ಅನುದಾನದಲ್ಲಿ 40 ಕಿ.ಮೀ ಡಾಂಬರೀಕರಣ ಕಾಮಗಾರಿ ಆರಂಭವಾಗಿತ್ತು, ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಕಾಮಗಾರಿ ನಿಲ್ಲಿಸಲಾಗಿತ್ತು. ಈಗ ಮತ್ತೆ ಪ್ರಾರಂಭ ಮಾಡಲಾಗಿದೆ. ಎಲ್ಲಾ ಕಾಮಗಾರಿ ಅಂತಿಮ ಹಂತದಲ್ಲಿ ಇವೆ. ಕೆಲವೊಂದು ಕಡೆ ಬಿಜೆಪಿ ಮುಖಂಡರು ಡಾಂಬರೀಕರಣ ಕಾಮಗಾರಿ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಈ ವೇಳೆ ಚಂದ್ರಶೇಖರ್, ಶಶಿಕುಮಾರ್, ಅಶ್ವತ್ ನಾರಾಯಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…