ಹೊನ್ನಾದೇವಿಪುರ-ಗೂಳ್ಯ ರಸ್ತೆ ಡಾಂಬರೀಕರಣ ಕಾಮಗಾರಿ ಕಳಪೆ ಆರೋಪ: ಬಿಜೆಪಿ ಮುಖಂಡರ ಆರೋಪ ತಳ್ಳಿ ಹಾಕಿದ ಕಾಂಗ್ರೆಸ್ ಮುಖಂಡರು

ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ 1.5 ಕೋಟಿ ಅನುದಾನದಲ್ಲಿ ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ 1.5 ಕಿ.ಮೀ ಡಾಂಬರ್ ಹಾಕಲಾಗಿದೆ. ಬೇಕಂತಲೇ ಬಿಜೆಪಿ ಕೆಲ ಮುಖಂಡರು ಹಾರೇಕೋಲಿನಿಂದ ಡಾಂಬರ್ ನ್ನು ಅಗೆದು ಈ ಕಾಮಗಾರಿ ಕಳಪೆ ಎಂದು ಹೇಳಲಾಗಿದೆ, ಇನ್ನೂ ಒಂದು ಪದರ ಡಾಂಬರ್ ಹಾಕುವುದು ಬಾಕಿ ಇದೆ, ಅಷ್ಟರಲ್ಲಿ ಈ ಆರೋಪವನ್ನು ಮಾಡಲಾಗಿದೆ. ಈ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಬಿಜೆಪಿ ಮುಖಂಡರ ಆರೋಪವನ್ನ ಜಿ.ಪಂ ಮಾಜಿ ಸದಸ್ಯ ಚುಂಚೇಗೌಡ ತಳ್ಳಿಹಾಕಿದರು.

ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ ಡಾಂಬರು ಹಾಕಿದ 15 ದಿನಗಳಲ್ಲೇ ಗುಂಡಿಗಳು ಬಿದ್ದಿವೆ. ಈ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಎಂದು ಬಿಜೆಪಿ ಮುಖಂಡರು ಆರೋಪ ಮಾಡಿ ರಸ್ತೆಯಲ್ಲಿ ಕುಳಿತು ಧರಣಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಗುರುವಾರ ಸ್ಥಳಕ್ಕೆ ಆಗಮಿಸಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, 20 ವರ್ಷಗಳಿಂದ ಈ ಗ್ರಾಮಕ್ಕೆ ರಸ್ತೆ ಇರಲಿಲ್ಲ. ರಾತ್ರಿ ಹೊತ್ತು ಓಡಾಡಲೂ ಗ್ರಾಮಸ್ಥರು ಪರದಾಡಬೇಕಾಗಿತ್ತು. ಕೊನೆಗೂ ಹೊನ್ನಾದೇವಿಪುರ ರಸ್ತೆಗೆ ಡಾಂಬರು ಭಾಗ್ಯ ಸಿಕ್ಕಿದೆ, ಇದರಲ್ಲಿ ರಾಜಕೀಯ ಮಾಡಬಾರದು, ಗ್ರಾಮದ ಅಭಿವೃದ್ಧಿಗೆ ಪಕ್ಷ ಬೇಧ ಮರೆತು ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

ಡಾಂಬರೀಕರಣ ಕಾಮಗಾರಿ ಕಳಪೆಯೋ ಅಥವಾ ಗುಣಮಟ್ಟದಿಂದ ಕೂಡಿದಿಯೋ ಎಂಬುದು ಸಂಬಂಧಿಸಿದ ಇಲಾಖೆಯ ಇಂಜಿನಿಯರ್ ಗಳು ಕಾಮಗಾರಿಯನ್ನ ಪರಿಶೀಲನೆ ಮಾಡಿ ವರದಿ ಬಿಡುಗಡೆ ಮಾಡುತ್ತಾರೆ‌. ಆಗ ಈ ಕುರಿತು ಸತ್ಯ ಗೊತ್ತಾಗುತ್ತದೆ. ಈ ಕುರಿತು ಇಂಜಿನಿಯರ್ ವರದಿ ಬಂದೇ ಇಲ್ಲ, ಇನ್ನೂ ಕಾಮಗಾರಿ ಬಾಕಿ ಇದೆ. ಅಷ್ಟರಲ್ಲಿ ಈ ಆರೋಪ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು.

ವಿಧಾನಸಭೆ ಚುನಾವಣೆ ಮುನ್ನವೇ ತಾಲೂಕಿನಲ್ಲಿ 40 ಕೋಟಿ ಅನುದಾನದಲ್ಲಿ 40 ಕಿ.ಮೀ ಡಾಂಬರೀಕರಣ ಕಾಮಗಾರಿ ಆರಂಭವಾಗಿತ್ತು, ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಕಾಮಗಾರಿ ನಿಲ್ಲಿಸಲಾಗಿತ್ತು. ಈಗ ಮತ್ತೆ ಪ್ರಾರಂಭ ಮಾಡಲಾಗಿದೆ. ಎಲ್ಲಾ ಕಾಮಗಾರಿ ಅಂತಿಮ ಹಂತದಲ್ಲಿ ಇವೆ. ಕೆಲವೊಂದು ಕಡೆ ಬಿಜೆಪಿ ಮುಖಂಡರು ಡಾಂಬರೀಕರಣ‌ ಕಾಮಗಾರಿ ಬಗ್ಗೆ‌ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಈ ರೀತಿಯ ಸುಳ್ಳು ಆರೋಪಗಳನ್ನು ಮಾಡುತ್ತಿರುವ ಪುಡಾರಿಗಳನ್ನ ಹಾಲಿ ಶಾಸಕರು ದೂರವಿಡಬೇಕು. ಇಲ್ಲದಿದ್ದರೆ ಶಾಸಕರಿಗೂ ಕೆಟ್ಟ ಹೆಸರು ಬರುತ್ತದೆ ಎಂದು ಸಲಹೆ ನೀಡಿದರು.

ಈ ವೇಳೆ ಚಂದ್ರಶೇಖರ್, ಶಶಿಕುಮಾರ್, ಅಶ್ವತ್ ನಾರಾಯಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

3 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

4 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

4 hours ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

11 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

22 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

1 day ago