ಕೋಲಾರ: ಅಕ್ರಮವಾಗಿ ಲೂಟಿಯಲ್ಲಿ ತೊಡಗಿರುವ ಹೊನ್ನೇನಹಳ್ಳಿ ಗ್ರಾಪಂ ಪಿಡಿಒ ಹರೀಶ್ ಹಾಗೂ ವಡಗೂರು ಗ್ರಾಪಂ ಪಿಡಿಒ ರಮೇಶ್ ಬಾಬು ವಿರುದ್ದ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಿಪಬ್ಲಿಕನ್ ಸಂಘಟನೆಯ ನೇತೃತ್ವದಲ್ಲಿ ಗುರುವಾರ ಜಿಲ್ಲಾ ಪಂಚಾಯತಿ ಮುಂಭಾಗ ಪ್ರತಿಭಟನೆ ನಡೆಸಿ ಜಿಪಂ ಉಪ ಕಾರ್ಯದರ್ಶಿ ರಮೇಶ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು
ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಅಧ್ಯಕ್ಷ ಚಿಕ್ಕನಾರಾಯಣ ಮಾತನಾಡಿ ಹೊನ್ನೇನಹಳ್ಳಿ ಮತ್ತು ವಡಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಕ್ರಮವಾಗಿ ರಾಜಕಾಲುವೆ ಒತ್ತುವರಿ, ಇ ಖಾತೆಗಳ ಹೆಸರಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ, ಭೂಪರಿವರ್ತನೆ, ನರೇಗಾದಲ್ಲಿ ಭ್ರಷ್ಟಾಚಾರ, ಸರ್ಕಾರಿ ಗುಂಡು ತೋಪುಗಳನ್ನು ಬಲಾಢ್ಯರಿಗೆ ಮಾಡಿಕೊಟ್ಟಿದ್ದಾರೆ ದಲಿತರ ಭೂಮಿ ವಂಚನೆ ಮಾಡಿರುವ ಪಿಡಿಒಗಳ ವಿರುದ್ದ ಲೋಕಾಯುಕ್ತ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು
ಹೊನ್ನೇನಹಳ್ಳಿ ಮತ್ತು ವಡಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿರುವ ಅಕ್ರಮ ಇ ಸ್ವತ್ತುಗಳನ್ನು ಪರಿಶೀಲನೆ ಮಾಡಬೇಕು ಇವರುಗಳ ಅಕ್ರಮಗಳ ಬಗ್ಗೆ ದೂರು ನೀಡಿದರು ಯಾವುದೇ ಕ್ರಮ ವಹಿಸಿಲ್ಲ ಕೂಡಲೇ ಇವರ ವಿರುದ್ದ ಕ್ರಮ ಕೈಗೊಂಡು ಇವರನ್ನು ಬೇರೆ ಕಡೆ ವರ್ಗಾವಣೆ ಮಾಡಬೇಕು ಜಮೀನುಗಳ ಬಗ್ಗೆ ಸರ್ವೆ ಮಾಡಿಸಿ ಸರ್ಕಾರಿ ಜಮೀನು ಉಳಿಸಿ ಜಾನುವಾರುಗಳಿಗೆ ಮೀಸಲಿಟ್ಟು ದಲಿತರಿಗೆ ಹಾಗೂ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಕ್ರಮವಹಿಸುವಂತೆ ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಜಿಪಂ ಉಪ ಕಾರ್ಯದರ್ಶಿ ರಮೇಶ್ ಮನವಿಯನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಮಿಕ ಘಟಕದ ಅಧ್ಯಕ್ಷ ಜಿ ರಾಮಚಂದ್ರ, ಪ್ರಧಾನ ಕಾರ್ಯದರ್ಶಿ ಪಿ.ನಾರಾಯಣ್, ರಾಜ್ಯ ಸಂಚಾಲಕ ವಿ.ಮಂಜುನಾಥ್, ಜಿಲ್ಲಾ ಅಧ್ಯಕ್ಷ ವಿ.ಅಮರೇಶ್ ಬಂಗಾರಪೇಟೆ ತಾ ಅಧ್ಯಕ್ಷ ತಿಪ್ಪಣ್ಣ, ಸಂಘಟನಾ ಕಾರ್ಯದರ್ಶಿ ಕೃಷ್ಣಮೂರ್ತಿ, ಉಮಾರಾಣಿ ಮುಂತಾದವರು ಇದ್ದರು
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…
ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…