ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2023-2024ನೇ ಸಾಲಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ 1)ನಾವೀನ್ಯತೆ(Innovation), 2)ತಾರ್ಕಿಕ ಸಾಧನೆ(sholostic) (ಉದಾ:ಎರಡು ಅನುಕ್ರಮ ವರ್ಷಗಳಲ್ಲಿ ಗಣಿತ ಶಾಸ್ತ್ರದಲ್ಲಿ ಮೊದಲನೆ ಸ್ಥಾನ) 3) ಕ್ರೀಡೆ,(Sports), 4) ಕಲೆ,ಸಾಂಸ್ಕೃತಿಕ,ಮತ್ತು ಸಂಗೀತ (Art, cultural,music) ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆ ಮಾಡಿದ ಮಕ್ಕಳಿಗೆ ಒಂದು ಕೇತ್ರದಿಂದ 2 ಮಕ್ಕಳನ್ನು ಜಿಲ್ಲಾ ಸಮಿತಿಯಿಂದ ಆಯ್ಕೆ ಮಾಡಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪತ್ರ ಹಾಗೂ ರೂ.10,000/-ಗಳ ನಗದು ಬಹುಮಾನ ನೀಡಲಾಗುವುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
5 ರಿಂದ 18 ವರ್ಷ ಒಳಗಿನ ವಯೋಮಿತಿ ಮಕ್ಕಳು (ಜುಲೈ 31ರಂತೆ) ವಯಸ್ಸಿನ ಬಗ್ಗೆ ಜನನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿದ ಪ್ರತಿ ಲಗತ್ತಿಸಬೇಕು. ಪ್ರಭೆಯನ್ನು ಹೊಂದಿರುವ ಬಗ್ಗೆ ಪ್ರಮುಖ ದಿನ ಪತ್ರಿಕೆಯಲ್ಲಿ ಪ್ರಕಟಗೊಂಡಿರುವ ಪತ್ರಿಕೆ ತುಣುಕು/ಪ್ರಮಾಣ ಪತ್ರಗಳನ್ನು ಲಗತ್ತಿಸಬೇಕು. ಅಂತರ ರಾಷ್ಟ್ರೀಯ/ರಾಷ್ಟ್ರೀಯ/ರಾಜ್ಯ ಮಟ್ಟದಲ್ಲಿ ಭಾಗವಹಿಸಿರುವ ಪ್ರಶಸ್ತಿ ಪಡೆದಿರುವ ಬಗ್ಗೆ ಮಾಹಿತಿ ಲಗತ್ತಿಸಬೇಕು.
ಅರ್ಜಿದಾರರು, ಕರ್ನಾಟಕ ರಾಜ್ಯದಲ್ಲಿ ನೆಲಸಿರತಕ್ಕದ್ದು. ಸಾಧಿಸಿರುವ ಪ್ರತಿಭೆಯನ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಸಲ್ಲಿಸತಕ್ಕದ್ದು.
ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ಮಕ್ಕಳಿಗೆ ಪುನಃ ಪ್ರಶಸ್ತಿ ನೀಡಲು ಅವಕಾಶವಿರುವುದಿಲ್ಲ.
ಮೇಲಿನ ಮಾನದಂಡದನ್ವಯ ಆಸಕ್ತಿಯುಳ್ಳ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಮಕ್ಕಳು ಅರ್ಜಿಯನ್ನು ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿ,ಕೊಠಡಿ ಸಂಖ್ಯೆ:206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ: 080-29787445, ತಾಲ್ಲೂಕುಗಳಲ್ಲಿ ಶಿಶು ಅಭಿವೃಧ್ಧಿ ಯೋಜನಾಧಿಕಾರಿ ಕಚೇರಿ,ದೊಡ್ಡಬಳ್ಳಾಪುರ-080-27625228, ಹೊಸಕೋಟೆ-080-27931493, ನೆಲಮಂಗಲ-080-27722177 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲಾತಿಗಳೊಂದಿಗೆ ದಿನಾಂಕ: 05.10.2023 ರ ಒಳಗೆ ಕಚೇರಿಗೆ ಸಲ್ಲಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…