ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2 (ಎ) ಯಿಂದ 2(ಎಫ್) ವರೆಗೆ ಬರುವ ಸಮುದಾಯಕ್ಕೆ ಸೇರಿದ ಮಹಿಳೆ ಆಗಿರಬೇಕು, ನಮೂನೆ -3 ಬಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪಡೆದಿರಬೇಕು.
ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅವಕಾಶವಿದ್ದು, ಗ್ರಾಮೀಣ ಕುಟುಂಬದ ವಾರ್ಷಿಕ ಆದಾಯ ರೂ.98 ಸಾವಿರ ಹಾಗೂ ನಗರ ಪ್ರದೇಶದವರಿಗೆ ರೂ.1,20 ಲಕ್ಷ ಮೀರಿರಬಾರದು.

ಅರ್ಜಿದಾರರ ವಯಸ್ಸು 18 ರಿಂದ 55 ವರ್ಷದೊಳಗೆ ಇರಬೇಕು. ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ ನ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಡಿಸೆಂಬರ್ 06 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಇದರ ಬಗ್ಗೆ ಹೆಚ್ಚಿನ ವಿವರಗಳನ್ನು https://kmcdc.karnataka.gov.in ನಲ್ಲಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮರಾಠ ಸಮುದಾಯಾಗಳ ಅಭಿವೃದ್ಧಿ ನಿಗಮದ ಸಹಾಯವಾಣಿ ಸಂಖ್ಯೆ:8867537799/ ದೂ.ಸಂಖ್ಯೆ:080-29903994, ಜಿಲ್ಲಾ ಸಹಾಯವಾಣಿ ಸಂಖ್ಯೆ:080-29605761 ಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!