ಹೊಸಕೋಟೆಯಲ್ಲಿ ಡಿಸೆಂಬರ್ 1ರಂದು ವಿಶ್ವ ಏಡ್ಸ್ ದಿನಾಚರಣೆ: ತಾಲ್ಲೂಕುವಾರು ಸೋಂಕಿತರ ಅಂಕಿಅಂಶ ಇಲ್ಲಿದೆ

ವಿಶ್ವದಾದ್ಯಂತ ಹರಡಿರುವ ಹೆಚ್.ಐ.ವಿ/ಏಡ್ಸ್ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಡಿಸೆಂಬರ್ 01  ರಂದು ವಿಶ್ವ ಏಡ್ಸ್ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಅದರಂತೆಯೇ ಜಿಲ್ಲೆಯಲ್ಲಿ ಡಿಸೆಂಬರ್ 01 ರಂದು ಹೊಸಕೋಟೆ ತಾಲ್ಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಲ್ಲಿ ವಿಶ್ವ ಏಡ್ಸ್ ದಿನವನ್ನು ಆಚರಿಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

2023ರ ವಿಶ್ವ ಏಡ್ಸ್ ದಿನವನ್ನು “ಸಮುದಾಯಗಳು ಮುನ್ನಡೆಸಲಿ ” (let communities lead) ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುವುದು. ಕಾರ್ಯಕ್ರಮ ದಿನದಂದು ಹೊಸಕೋಟೆ ಟೌನ್ ನಲ್ಲಿ ಜಾಥಾ ಹಮ್ಮಿಕೊಂಡಿದ್ದು ಜನರಿಗೆ ಏಡ್ಸ್ ಕುರಿತು ಜಾಗೃತಿ ಮೂಡಿಸಲಾಗುವುದು. ಕಾಲೇಜುಗಳು, ಜನಸಂದಣಿ ಸ್ಥಳಗಳು, ಹೆಚ್ಚು ಸೋಂಕಿತರಿರುವ ಪ್ರದೇಶಗಳಲ್ಲಿ  ಬೀದಿ ನಾಟಕಗಳ ಮೂಲಕ, ವಿವಿಧ  ಜಾಗೃತಿ  ಕಾರ್ಯಕ್ರಮ ಗಳನ್ನು ಏರ್ಪಡಿಸುವ ಮೂಲಕ ಏಡ್ಸ್  ಕುರಿತು ಪ್ರತಿ ವರ್ಷ ಜನಜಾಗೃತಿ ಮೂಡಿಸುತ್ತಿದ್ದೇವೆ ಎಂದು ಹೇಳಿದರು.

ಜಿಲ್ಲೆಯಲ್ಲಿ 2007 ರಿಂದ 2023 ರ ಅಕ್ಟೋಬರ್ ಮಾಹೆಯವರೆಗೆ 2336 ಪುರುಷರು, 1876 ಮಹಿಳೆಯರು ಹಾಗೂ 39 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 4251 ಹೆಚ್.ಐ.ವಿ ಸೋಂಕಿತರಿದ್ದಾರೆ.

ತಾಲ್ಲೂಕುವಾರು ಸೋಂಕಿತರ ಸಂಖ್ಯೆ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 581 ಪುರುಷರು, 444 ಸ್ತ್ರೀಯರು, 02 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 1027 ಸೋಂಕಿತರಿದ್ದಾರೆ.

ದೇವನಹಳ್ಳಿ ತಾಲ್ಲೂಕಿನಲ್ಲಿ 497 ಪುರುಷರು, 385 ಸ್ತ್ರೀಯರು, 02 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 884 ಸೋಂಕಿತರಿದ್ದಾರೆ.

ಹೋಸಕೋಟೆ ತಾಲ್ಲೂಕಿನಲ್ಲಿ 733 ಪುರುಷರು, 600 ಸ್ತ್ರೀಯರು, 04 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 1337 ಸೋಂಕಿತರಿದ್ದಾರೆ‌.

ನೆಲಮಂಗಲ ತಾಲ್ಲೂಕಿನಲ್ಲಿ 525 ಪುರುಷರು , 447 ಸ್ತ್ರೀಯರು, 31 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 1003 ಸೋಂಕಿತರಿದ್ದಾರೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ನಾಗೇಶ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

3 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

7 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

8 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

9 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

11 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

14 hours ago