ಹೊಸಕೋಟೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಮತ್ತು ಸೃಜನಶೀಲತೆಯನ್ನು ಬೆಳೆಸಲು ‘ವಿಜ್ಞಾನ ವಸ್ತು ಪ್ರದರ್ಶನ’ ಕಾರ್ಯಕ್ರಮ ಅತ್ಯುತ್ತಮ ವೇದಿಕೆ ಎಂದು
ಬೆಂಗಳೂರಿನ ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಡಾ. ಅಜಯ್ ಕುಮಾರ್ ಅಳಗೇಶನ್ ಅವರು ಹೇಳಿದರು.

ಹೊಸಕೋಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ವತಿಯಿಂದ ಆಯೋಜಿಸಿದ್ದ ”ವಿಜ್ಞಾನ ವಸ್ತು ಪ್ರದರ್ಶನ” ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

‘ನ್ಯಾನೋ ತಂತ್ರಜ್ಞಾನ’ ಕ್ಷೇತ್ರದಲ್ಲಿ ಕೆಲಸದ ಅನುಭವ ಹಂಚಿಕೊಂಡು, ನ್ಯಾನೋ ಎಂದರೆ ಎಷ್ಟು ಚಿಕ್ಕದು ಗೊತ್ತೇ? ನಮ್ಮ ತಲೆಯ ಕೂದಲಿನ ಎಳೆಯನ್ನು ಲಕ್ಷ ಪಟ್ಟು ಸೀಳಿದರೆ ಸಿಗುವಷ್ಟು ಸೂಕ್ಷ್ಮವಾದ ವಸ್ತುಗಳ ಬಗ್ಗೆ ಇವರು ಸಂಶೋಧನೆಯನ್ನು ವಿವರಿಸಿದರು.

“ವಿಜ್ಞಾನವು ಕೇವಲ ಪ್ರಯೋಗಾಲಯಕ್ಕೆ ಸೀಮಿತವಾಗಬಾರದು, ಅದು ಸಮಾಜದ ಕಟ್ಟಕಡೆಯ ವ್ಯಕ್ತಿಯ ಜೀವನವನ್ನು ಸುಲಭಗೊಳಿಸಬೇಕು” ಎಂದರು.

ತಮ್ಮ ಸಂಶೋಧನಾ ಕ್ಷೇತ್ರವಾದ ನ್ಯಾನೋ ತಂತ್ರಜ್ಞಾನ ಮತ್ತು ಶಕ್ತಿ ಸಂರಕ್ಷಣೆ (Energy Harvesting) ಕುರಿತು ವಿದ್ಯಾರ್ಥಿಗಳಿಗೆ ಸರಳವಾಗಿ ವಿವರಿಸಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಂಶೋಧನಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಇರುವ ಅವಕಾಶಗಳನ್ನು ಪರಿಚಯಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮಚಂದ್ರಪ್ಪ ಬೇಗೂರು ಅವರು ವಹಿಸಿದ್ದರು.

ಕಾಲೇಜಿನ ಬಿಎಸ್‌ಸಿ ವಿದ್ಯಾರ್ಥಿಗಳಿಂದ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದರು. ಅವುಗಳಲ್ಲಿನ ಪ್ರಮುಖ ಆಕರ್ಷಣೆಗಳೆಂದರೆ ನ್ಯಾನೋ ಸೆನ್ಸರ್‌ಗಳು ಧರಿಸಬಹುದಾದ ಆರೋಗ್ಯ ಸಂವೇದಕಗಳ ಮಾದರಿಗಳು. ಮತ್ತು ಸ್ಮಾರ್ಟ್ ಕೃಷಿ: ಮಣ್ಣಿನ ತೇವಾಂಶ ಮತ್ತು ಸ್ವಯಂಚಾಲಿತ ನೀರಾವರಿ ಪದ್ಧತಿ. ಹಾಗೂ ಪರಿಸರ ಸ್ನೇಹಿ ಇಂಧನ: ಹೈಡ್ರೋಜನ್ ಕಾರುಗಳು ಮತ್ತು ಸೌರಶಕ್ತಿ ಚಾಲಿತ ಗೃಹೋಪಯೋಗಿ ಉಪಕರಣಗಳು. ಮತ್ತು ತ್ಯಾಜ್ಯ ನಿರ್ವಹಣೆ, ಪ್ಲಾಸ್ಟಿಕ್ ಮುಕ್ತ ಪರಿಸರ ಮತ್ತು ಕಸದಿಂದ ರಸ ಮಾಡುವ ತಂತ್ರಜ್ಞಾನದ ಮಾದರಿಗಳನ್ನು ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಡಾ. ದಿನೇಶ್, ಮಂಜುನಾಥ್, ಉಮೇಶ್ ರೆಡ್ಡಿ, ವಿಶ್ವೇಶ್ವರಯ್ಯ ಸೇರಿದಂತೆ ಕಾಲೇಜಿನ ಎಲ್ಲಾ ವಿಭಾಗಗಳ ಮುಖ್ಯಸ್ಥರು ಹಾಗೂ ಬೋಧಕೇತರ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದರು.

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

52 minutes ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

5 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

8 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

19 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago