ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ


ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರಿಗೆ ನಿರಾಸೆಯಾಗಿದೆ. ಎರಡನೇ ಪಟ್ಟಿಯಲ್ಲಿ ಅವರ ಹೆಸರು ಕಾಣಿಸದ ಹಿನ್ನೆಲೆಯಲ್ಲಿ ಬೆಂಬಲಿಗರಲ್ಲಿ ಬೇಸರ ವ್ಯಕ್ತವಾಗಿದೆ.

ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ ಭಾಗವಾಗಿ ಎರಡನೇ ಪಟ್ಟಿಯಲ್ಲಿ 20 ಮಂದಿ ನಾಯಕರಿಗೆ ಸಚಿವ ಸ್ಥಾನ ನೀಡಲಾಗಿದೆ. ವಿವಿಧ ಪ್ರಾದೇಶಿಕ ಹಾಗೂ ಸಾಮಾಜಿಕ ಸಮತೋಲನವನ್ನು ಗಮನದಲ್ಲಿಟ್ಟುಕೊಂಡು ಈ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಎರಡನೇ ಪಟ್ಟಿಯಲ್ಲಿರುವ ಸಚಿವರ ಹೆಸರುಗಳು:

1 ಪಿ.ಎಂ ನರೇಂದ್ರಸ್ವಾಮಿ ಮಳವಳ್ಳಿ (2ನೇ ಬಾರಿ ಸಚಿವ ಸ್ಥಾನ )

2 ಶಿವರಾಜ ತಂಗಡಗಿ ಕನಕಗಿರಿ (4ನೇ ಬಾರಿ ಸಚಿವ ಸ್ಥಾನ

3 ರುದ್ರಪ್ಪ ಲಮಾಣಿ ಹಾವೇರಿ (ಮೊದಲ ಬಾರಿ ಸಚಿವ ಸ್ಥಾನ)

4 ಕೆ.ಎಸ್ ಬಸವಂತಪ್ಪ ಮಾಯಕೊಂಡ (ಮೊದಲ ಬಾರಿ ಸಚಿವ ಸ್ಥಾನ

5 ಬಿ.ನಾಗೇಂದ್ರ ಬಳ್ಳಾರಿ (2ನೇ ಬಾರಿ ಸಚಿವ ಸ್ಥಾನ)

6 ಟಿ ರಘುಮೂರ್ತಿ ಚಳ್ಳಕೆರೆ (ಮೊದಲ ಬಾರಿ ಸಚಿವ ಸ್ಥಾನ)

7 ಜಮೀರ್ ಅಹಮದ್ ಖಾನ್ ಚಾಮರಾಜಪೇಟೆ (4 ಬಾರಿ ಸಚಿವ ಸ್ಥಾನ)

8 ರಿಜ್ವಾನ್ ಅರ್ಷದ್ ಶಿವಾಜಿನಗರ (ಮೊದಲ ಬಾರಿ ಸಚಿವ ಸ್ಥಾನ)

9 ಸಂತೋಷ್ ಲಾಡ್‌ ಕಲಘಟಗಿ (3ನೇ ಬಾರಿ ಸಚಿವ ಸ್ಥಾನ)

10 ಮಧು ಬಂಗಾರಪ್ಪ ಸೊರಬ (2ನೇ ಬಾರಿ ಸಚಿವ ಸ್ಥಾನ)

11 ಸಿ ಪುಟ್ಟರಂಗಶೆಟ್ಟಿ ಚಾಮರಾಜನಗರ (2ನೇ ಬಾರಿ ಸಚಿವ ಸ್ಥಾನ)

12 ಎಸ್ ಎಸ್ ಮಲ್ಲಿಕಾರ್ಜುನ

13 ಅಜಯ್ ಸಿಂಗ್ ಜೇವರ್ಗಿ (ಮೊದಲ ಬಾರಿ ಸಚಿವ ಸ್ಥಾನ

14 ಎನ್.ಚಲುವರಾಯಸ್ವಾಮಿ ನಾಗಮಂಗಲ (3ನೇ ಬಾರಿ ಸಚಿವ ಸ್ಥಾನ)

15 ಕೆ.ಎಂ ಶಿವಲಿಂಗೇಗೌಡ ಅರಸೀಕೆರೆ ( ಮೊದಲ ಬಾರಿ ಸಚಿವ ಸ್ಥಾನ)

16 ಎಚ್.ಸಿ ಬಾಲಕೃಷ್ಣ ಮಾಗಡಿ (ಮೊದಲ ಬಾರಿ ಸಚಿವ ಸ್ಥಾನ)

17 ಎನ್ ಎಸ್ ಬೋಸರಾಜು

18 ಬಸವರಾಜ್ ರಾಯರೆಡ್ಡಿ ಯಲಬುರ್ಗಾ (4ನೇ ಬಾರಿ ಸಚಿವ ಸ್ಥಾನ)

19 ವಿಜಯಾನಂದ ಕಾಶಪ್ಪನವರ್ ಹುನಗುಂದ (ಮೊದಲ ಬಾರಿ ಸಚಿವ ಸ್ಥಾನ)

20 ಲಕ್ಷ್ಮಣ ಸವದಿ ಅಥಣಿ (3ನೇ ಬಾರಿ ಸಚಿವ ಸ್ಥಾನ)

ಹೊಸಕೋಟೆ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಅವರಿಗೆ ಸಚಿವ ಸ್ಥಾನ ದೊರೆಯಬಹುದು ಎಂಬ ನಿರೀಕ್ಷೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರಲ್ಲಿ ಇತ್ತು. ಆದರೆ ಎರಡನೇ ಪಟ್ಟಿಯಲ್ಲೂ ಅವರ ಹೆಸರು ಸೇರ್ಪಡೆಯಾಗದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

5 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

7 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

10 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

12 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

14 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

1 day ago