Categories: Accident

ಹೊಸಕೋಟೆ ಸರಣಿ ಅಪಘಾತ ಪ್ರಕರಣ ಮಾಸುವ ಮುನ್ನವೇ, ನೆಲಮಂಗಲದ ಜಿಂದಾಲ್‌ ಸಮೀಪ ಮತ್ತೊಂದು ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರ ಮೂಲದ ಎನ್ನಲಾದ ಐವರ ಸಾವು

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ತುಮಕೂರು ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಕಾ ಕಾರು, ಬೆಂಗಳೂರಿನಿಂದ ಹೊರಟಿದ್ದ KSRTC ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ, ಕಾರಿನಲ್ಲಿದ್ದ ಎಲ್ಲಾ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವೇಗವಾಗಿ ಬರುತ್ತಿದ್ದ ಕಾರು ಹೆದ್ದಾರಿಯ ಡಿವೈಡರ್‌ ಹಾರಿ ಬಸ್‌ಗೆ ಡಿಕ್ಕಿ ಹೊಡೆದಿದ್ದೇ ಈ ದುರಂತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಸೇರಿ ಇತರರು ಮೃತ ದುರ್ದೈವಿಗಳಾಗಿದ್ದಾರೆ. ಸಾವಿಗೀಡಾದವರಲ್ಲಿ ಮೂವರ ಗುರುತು ಇನ್ನೂ ಪತ್ತೆಯಾಗಿಲ್ಲ ಎನ್ನಲಾಗಿದೆ.

ಮೃತ ಹರ್ಷಿತ್​​ ರಾಜನಕುಂಟೆ ಸಾಯಿ ವಿದ್ಯಾ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ದ್ವಿತೀಯ ವರ್ಷದ ಡಿಗ್ರಿ ಓದುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದರೆ, ಗಂಭೀರ ಗಾಯಗೊಂಡಿದ್ದ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತನೂ ಪ್ರಾಣ ಬಿಟ್ಟಿದ್ದಾನೆ.

ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಐವರ ಮೃತದೇಹ ರವಾನೆ ಮಾಡಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

4 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

5 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

5 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

12 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

13 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

16 hours ago