ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ

ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ಹೊಸಕೋಟೆ ಡಿವೈಎಸ್ಪಿ ಮಲ್ಲೇಶಯ್ಯ ಹಾಗೂ  ಪೊಲೀಸರಿಂದ ಹೆದ್ದಾರಿಯಲ್ಲಿ ಕಾರ್ಯಾಚರಣೆ ನಡೆಸಿ ಎಂಟಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಈ ಮೂಲಕ ಸ್ಟಂಟ್ ಮಾಡುತ್ತಿದ್ದ ಯುವಕರಿಗೆ ತಕ್ಕ ಪಾಠ ಕಲಿಸಿದ್ದಾರೆ.

ಅಪಾಯಕಾರಿ ಸಾಹಸಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾದ ಡಿವೈಎಸ್ಪಿ ಮಲ್ಲೇಶಯ್ಯ, ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟಕ್ಕೆ ಪೊಲೀಸರು ಡ್ರಿಲ್. ಸಾರ್ವಜನಿಕರಿಗೆ ಹಾಗೂ ಸಂಚಾರಕ್ಕೆ ಅಡಚಣೆ ಉಂಟುಮಾಡುತ್ತಿದ್ದ ಯುವಕರಿಗೆ ಶಾಕ್ ಕೊಟ್ಟ ಖಾಕಿ.

Leave a Reply

Your email address will not be published. Required fields are marked *

error: Content is protected !!