ಡಿಸೆಂಬರ್ ತಿಂಗಳು ಮುಗಿಯುತ್ತ ಬರುತ್ತಿದ್ದಂತೆ ಇತ್ತ ಹೊಸ ವರ್ಷದ ತಯಾರಿ ಕೂಡ ಸದ್ದಿಲ್ಲದೆ ನಡೆಯುತ್ತಿದೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಪೊಲೀಸ್ ಇಲಾಖೆ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದಾರೆ.
ಮುಂಜಾಗ್ರತ ಕ್ರಮಗಳನ್ನು ಈ ಕೆಳಕಂಡಂತಿವೆ
• ಹೊಸ ವರ್ಷದ ಆಚರಣೆಯ ದಿನದಂದು ರಾತ್ರಿ 1:00 ಗಂಟೆಯವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶವನ್ನು ನೀಡಲಾಗಿರುತ್ತದೆ.
• ಆಯೋಜಕರು ಯಾವುದೇ ರೀತಿಯ ಅನುಮತಿ ಪಡೆಯದೆ ಕಾರ್ಯಕ್ರಮ ಆಯೋಜಿಸಿದಲ್ಲಿ ಅಂಥವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ.
• ಹೊಸ ವರ್ಷದ ಆಚರಣೆ ವೇಳೆ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಅಥವಾ ಮಾದಕ ವಸ್ತುಗಳ ಸೇವನೆಯನ್ನು ಮಾಡುವಂತಿಲ್ಲ, ಮಾಡಿದ್ದಲ್ಲಿ ಅವರ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತದೆ.
• ಹೊಸ ವರ್ಷದ ಆಚರಣೆ ನೆಪದಲ್ಲಿ ಕುಡಿದು ವಾಹನ ಚಾಲನೆ ಮಾಡುವುದು ಅಥವಾ ವೀಲಿಂಗ್ ಮಾಡುವುದು ಏನಾದರೂ ಕಂಡು ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
• ಹೊಸ ವರ್ಷದ ಆಚರಣೆ ವೇಳೆ ಮಹಿಳೆಯರ ಜೊತೆ ಅಸಭ್ಯವಾಗಿ ನಡೆದುಕೊಳ್ಳುವುದು, ಚುಡಾಯಿಸುವುದು, ರ್ಯಾಗಿಂಗ್ ಮಾಡುವುದು ಕಂಡು ಬಂದರೆ ಅಂತವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು.
• ಹೊಸ ವರ್ಷದ ಮಧ್ಯರಾತ್ರಿ ರಸ್ತೆಯ ಬದಿಯಲ್ಲಿ ಮೋಜು-ಮಸ್ತಿ ಮಾಡುವುದು, ಮದ್ಯ ಸೇವನೆ ಮಾಡುವುದು ಅಥವಾ ಮಾದಕ ವಸ್ತುಗಳ ಸೇವನೆ ಮಾಡುವುದು ಕಂಡು ಬಂದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ.
• ನಿಮ್ಮ ಸಂಭ್ರಮಾಚರಣೆಯು ಯಾವುದೇ ಸಾರ್ವಜನಿಕರಿಗೆ ತೊಂದರೆಯನ್ನು ಉಂಟುಮಾಡದ ರೀತಿಯಲ್ಲಿ ಆಚರಿಸುವುದು.
• ಬೆಂಗಳೂರು ಜಿಲ್ಲಾ ಪೊಲೀಸರು ಇಡೀ ರಾತ್ರಿ ಗಸ್ತು ಕರ್ತವ್ಯದಲ್ಲಿ ಇರುತ್ತಾರೆ. ನೈತಿಕ ಪೊಲೀಸ್ ಗಿರಿ ಅಥವಾ ಅಸಭ್ಯ ವರ್ತನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
• ಯಾವುದೇ ರೀತಿಯ ತುರ್ತು ಸಹಾಯಕ್ಕಾಗಿ ನಮ್ಮ ತುರ್ತು ಸಹಾಯವಾಣಿ 112 ಗೆ ಕರೆ ಮಾಡಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ…