ಹೊಸಹಳ್ಳಿಯಲ್ಲಿ ಹಿಟ್ & ರನ್: ಸ್ಥಳದಲ್ಲೇ ಅಂಗನವಾಡಿ ಕಾರ್ಯಕರ್ತೆ ಧಾರುಣ ಸಾವು

ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಟ್ & ರನ್ ಸಂಭವಿಸಿದ್ದು, ಸ್ಥಳದಲ್ಲೇ ಅಂಗನವಾಡಿ ಕಾರ್ಯಕರ್ತೆ ಧಾರುಣವಾಗಿ ಸಾವನ್ನಪ್ಪಿದ್ದಾರೆ.

ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಂಡಮಗೆರೆ-ಹೊಸಹಳ್ಳಿ ವೃತ್ತದ ಕೆಇಬಿ (ಗುಂಡಮಗೆರೆ ವಿದ್ಯುತ್ ಪೂರೈಕೆ ಘಟಕ) ಬಳಿ ಘಟನೆ ನಡೆದಿದೆ.

ಮೃತ ಅಂಗನವಾಡಿ ಕಾರ್ಯಕರ್ತೆಯನ್ನು ಶ್ಯಾಮಲಾ ದೇವಿ (30 ವರ್ಷ) ಎಂದು ಗುರುತಿಸಲಾಗಿದೆ.

ಉಜ್ಜನಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಸುತ್ತಿದ್ದ ಶ್ಯಾಮಲಾ ದೇವಿ ಅವರು ಕಂಟನಕುಂಟೆಯಲ್ಲಿ ವಾಸವಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಕರ್ತವ್ಯ ಮುಗಿಸಿಕೊಂಡು ಕಂಟನಕುಂಟೆಯ ಮನೆಗೆ ಹೆವಿಡ್ಯೂಟಿ ಎಕ್ಸ್ಎಲ್ ವಾಹನದಲ್ಲಿ ತೆರಳುವ ವೇಳೆ, ಗುಂಡಮಗೆರೆ ಹೊಸಹಳ್ಳಿ ನಡುವಿನ ಕೆಇಬಿ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಈ ವೇಳೆ ನೆಲಕ್ಕೆ ಬಿದ್ದ ಶ್ಯಾಮಲಾ ಅವರ ಮೇಲೆ ವಾಹನ ಮೇಲೆ ಹರಿದು ಪರಾರಿಯಾಗಿದೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಶ್ಯಾಮಲಾ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಹೊಸಹಳ್ಳಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

5 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

19 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

24 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago