2022ರಲ್ಲಿ ಮುಖವಾಡ ಧರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಕರ್ನಾಟಕ ಗ್ರಾಮೀಣ ಬ್ಯಾಂಕ್ನೊಳಗೆ ನುಗ್ಗಿದ ಕಳ್ಳರು ಗ್ಯಾಸ್ ಕಟರ್ನಿಂದ ಲಾಕರ್ ಮುರಿದು ಬರೋಬ್ಬರಿ 3 ಕೋಟಿ 50 ಲಕ್ಷ ರೂ. ಮೌಲ್ಯದ 5 ಕೆ.ಜಿ ಚಿನ್ನ, 15 ಲಕ್ಷ ನಗದು ದೋಚಿ ಪರಾರಿಯಾಗಿದ್ದ ಸುಮಾರು 12 ಮಂದಿ ಕಳ್ಳರ ಪೈಕಿ 7 ಮಂದಿ ಆರೋಪಿಗಳನ್ನು ಹೊಸಹಳ್ಳಿ ಪೊಲೀಸ್ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ರಾವ್ ಗಣೇಶ್ ನೇತೃತ್ವದ ತಂಡ ಬಂಧಿಸಲಾಗಿದೆ.
ತಾಲೂಕಿನ ಹೊಸಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಲೂಟಿ ಪ್ರಕರಣವನ್ನು ಭೇದಿಸಿರುವ ಪೊಲೀಸರು ಅಂದಿನ ಸರ್ಕಲ್ ಇನ್ಸ್ ಪೆಕ್ಟರ್ ಹರೀಶ್ ನೇತೃತ್ವದ ತಂಡ ಮೂವರು ಖದೀಮರನ್ನು ಉತ್ತರ ಪ್ರದೇಶದ ಬದಾಯೂನ್ ಜಿಲ್ಲೆಯ ಅಲಾಪುರ್ ನಲ್ಲಿ ಬಂಧಿಸಿದ್ದರು.
ಇದೀಗ ಈ ಪ್ರಕರಣದ ಮತ್ತೆ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಹೊಸಹಳ್ಳಿಯಲ್ಲಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಸ್ಥಳ ಮಹಜರು ಮಾಡಿಸಿ, ನಗರದ ಸರ್ಕಾರಿ ಆರೋಗ್ಯ ತಪಾಸಣೆ ಮಾಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಉತ್ತರಪ್ರದೇಶ ಮೂಲದ ಅಲಾಪುರ ನಿವಾಸಿ ಟ್ರಕ್ ಚಾಲಕ ಸರ್ತಾಜ್ ಹಾಗೂ ಉಜಾನಿಯ ನಿವಾಸಿ ಕಾಳಿಚರಣ್, ಗುಡ್ಡು ಅಲಿಯಾಸ್ ಕಾಲಿಯಾ, ಅಸ್ಲಾಂ ಅಲಿಯಾಸ್ ಟನ್ ಟನ್, ಹಸ್ರತ್ ಅಲಿ, ಕಮ್ರುದ್ದೀನ್ ಅಲಿಯಾಸ್ ಬಾಬು ಸರೇಲಿ ಬಂಧಿತ ಆರೋಪಿಗಳು. 12 ಮಂದಿ ಆರೋಪಿಗಳಲ್ಲಿ 7 ಮಂದಿಯನ್ನು ಬಂಧಿಸಲಾಗಿದ್ದು, ಮಿಕ್ಕುಳಿದ 5 ಮಂದಿ ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಟ್ರಕ್ ನಲ್ಲಿ ಬಂದು ಲೂಟಿ:
2022ರ ನ.25 ರಂದು ಸಿನಿಮೀಯ ಶೈಲಿಯಲ್ಲಿ ಬ್ಯಾಂಕ್ ಲೂಟಿ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದಿಂದ ಪೂರ್ವನಿಯೋಜಿತವಾಗಿ ಕಳ್ಳತನ, ಬ್ಯಾಂಕ್, ಮನೆಗಳ ಲೂಟಿ ಮಾಡಲೆಂದೆ ಕಳ್ಳರು ಬೃಹತ್ ಟ್ರಕ್ ರೆಡಿ ಮಾಡಿಕೊಂಡಿದ್ದರು.
ಈ ಟ್ರಕ್ ನಲ್ಲಿ ಕಳ್ಳತನಕ್ಕೆ ಬಳಸುವ ಉಪಕರಣಗಳು ಎಲ್ಲವೂ ಸಿದ್ಧವಿದ್ದವು. ಗ್ಯಾಸ್ ಕಟರ್, ಸಿಲಿಂಡರ್ ಸೇರಿದಂತೆ ಹಲವು ಉಪಕರಣಗಳನ್ನು ಇಟ್ಟುಕೊಂಡು ತಾಲೂಕಿನ ಸಾಸಲು ಹೋಬಳಿಯ ಹೊಸಹಳ್ಳಿ ಗ್ರಾಮದಲ್ಲಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಗೆ ಕನ್ನ ಹಾಕಿದ್ದರು.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…