ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಹಾಗೂ ಪತ್ತೆಹಚ್ಚುವ ಸಲುವಾಗಿ ಕೆಲವು ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರು ಅತ್ಯಾಧುನಿಕ ಸುಮಾರು 23 ಸೋಲಾರ್ ಆಧಾರಿತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದರು.
ಠಾಣಾ ವ್ಯಾಪ್ತಿಯ ವಿವಿಧ ಕೂಡು ರಸ್ತೆ, ಪ್ರಮುಖ ವೃತ್ತಗಳು, ಶಾಲಾ ಆವರಣ, ಕವಲು ರಸ್ತೆ ಮತ್ತು ಅರಣ್ಯ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಯಿತು.
ಹೊಸಹಳ್ಳಿ ಗ್ರಾಮ ಪಂಚಾಯಿತಿ, ಅರೂಢಿ ಗ್ರಾಮ ಪಂಚಾಯಿತಿ, ದಾನಿಗಳು ಮತ್ತು ಸ್ಥಳೀಯ ಮುಖಂಡರುಗಳು ಸಿಸಿಟಿವಿ ಕ್ಯಾಮೆರಾಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
ಈ ಸೋಲಾರ್ ಸಿಸಿಟಿವಿಗಳು 180 ಡಿಗ್ರಿ ಧ್ವನಿಸಹಿತ ಗ್ರಹಿಸುವ ವ್ಯವಸ್ಥೆ ಹಾಗೂ ಸ್ಪೀಕರ್ ಹೊಂದಿದ್ದು, ಎಲ್ಲಾ ಸಿಸಿ ಕ್ಯಾಮೆರಾಗಳನ್ನು ಠಾಣೆಯ ಮಾನಿಟರ್ ಗೆ ನೇರ ಸಂಪರ್ಕ ಮಾಡಲಾಗಿದ್ದು, 24/7 ಮಾನಿಟರ್ ಮಾಡಲಾಗುತ್ತದೆ. ಇದರ ಜೊತೆಗೆ ಠಾಣಾ ಸಿಬ್ಬಂದಿಯ ಮೊಬೈಲ್ ಗೆ ಲಿಂಕ್ ಮಾಡಲಾಗಿದ್ದು, ತುರ್ತು ಸಂಧರ್ಭಗಳಲ್ಲಿ ಮೊಬೈಲ್ ಮುಖಾಂತರ ಎಚ್ಚರಿಕೆಗಳನ್ನು ನೀಡುವ ವ್ಯವಸ್ಥೆ ಹೊಂದಿವೆ ಎಂದು ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ತಿಳಿಸಿದ್ದಾರೆ.
ಅಪರಾಧ ತಡೆಯುವ ಮತ್ತು ಪತ್ತೆ ಹಚ್ಚುವಲ್ಲಿ ಅತ್ಯಂತ ಅಗತ್ಯವಿದ್ದ ಸಿಸಿಟಿವಿಗಳ ಅಳವಡಿಕೆಯಿಂದ ಸಾರ್ವಜನಿಕರಿಗೆ ಅನುಕೂಲಕರವಾಗಿರುತ್ತದೆ. ಇದಕ್ಕೆ ಸ್ಪಂದಿಸಿದ ಎಲ್ಲಾ ದಾನಿಗಳಿಗೂ ಧನ್ಯವಾದಗಳು ಎಂದರು.
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…