ಹೊಸಹಳ್ಳಿ ಠಾಣಾ ವ್ಯಾಪ್ತಿಯ ಸೂಕ್ಷ್ಮ‌, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಸೋಲಾರ್ ಆಧಾರಿತ ಸಿಸಿಟಿವಿ ಕ್ಯಾಮೆರಾ ಅಳವಡಿಕೆ

ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಹಾಗೂ ಪತ್ತೆಹಚ್ಚುವ ಸಲುವಾಗಿ ಕೆಲವು ಸೂಕ್ಷ್ಮ‌, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರು ಅತ್ಯಾಧುನಿಕ ಸುಮಾರು 23 ಸೋಲಾರ್ ಆಧಾರಿತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದರು.

ಠಾಣಾ ವ್ಯಾಪ್ತಿಯ ವಿವಿಧ ಕೂಡು ರಸ್ತೆ, ಪ್ರಮುಖ ವೃತ್ತಗಳು, ಶಾಲಾ ಆವರಣ, ಕವಲು ರಸ್ತೆ ಮತ್ತು ಅರಣ್ಯ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಯಿತು.

ಹೊಸಹಳ್ಳಿ ಗ್ರಾಮ ಪಂಚಾಯಿತಿ, ಅರೂಢಿ ಗ್ರಾಮ ಪಂಚಾಯಿತಿ, ದಾನಿಗಳು ಮತ್ತು ಸ್ಥಳೀಯ ಮುಖಂಡರುಗಳು ಸಿಸಿಟಿವಿ ಕ್ಯಾಮೆರಾಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

ಈ ಸೋಲಾರ್ ಸಿಸಿಟಿವಿಗಳು 180 ಡಿಗ್ರಿ ಧ್ವನಿಸಹಿತ ಗ್ರಹಿಸುವ ವ್ಯವಸ್ಥೆ ಹಾಗೂ ಸ್ಪೀಕರ್ ಹೊಂದಿದ್ದು, ಎಲ್ಲಾ ಸಿಸಿ ಕ್ಯಾಮೆರಾಗಳನ್ನು ಠಾಣೆಯ ಮಾನಿಟರ್ ಗೆ ನೇರ ಸಂಪರ್ಕ ಮಾಡಲಾಗಿದ್ದು, 24/7 ಮಾನಿಟರ್ ಮಾಡಲಾಗುತ್ತದೆ. ಇದರ ಜೊತೆಗೆ ಠಾಣಾ ಸಿಬ್ಬಂದಿಯ ಮೊಬೈಲ್ ಗೆ ಲಿಂಕ್ ಮಾಡಲಾಗಿದ್ದು, ತುರ್ತು ಸಂಧರ್ಭಗಳಲ್ಲಿ ಮೊಬೈಲ್ ಮುಖಾಂತರ ಎಚ್ಚರಿಕೆಗಳನ್ನು ನೀಡುವ ವ್ಯವಸ್ಥೆ ಹೊಂದಿವೆ ಎಂದು ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ತಿಳಿಸಿದ್ದಾರೆ.

ಅಪರಾಧ ತಡೆಯುವ ಮತ್ತು ಪತ್ತೆ ಹಚ್ಚುವಲ್ಲಿ ಅತ್ಯಂತ ಅಗತ್ಯವಿದ್ದ ಸಿಸಿಟಿವಿಗಳ ಅಳವಡಿಕೆಯಿಂದ ಸಾರ್ವಜನಿಕರಿಗೆ ಅನುಕೂಲಕರವಾಗಿರುತ್ತದೆ. ಇದಕ್ಕೆ ಸ್ಪಂದಿಸಿದ ಎಲ್ಲಾ ದಾನಿಗಳಿಗೂ ಧನ್ಯವಾದಗಳು‌ ಎಂದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

5 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

6 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

8 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

9 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

10 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

16 hours ago