ಹೊಸಹಳ್ಳಿ ಪೊಲೀಸ್ ಠಾಣೆಯನ್ನು ಮಾದರಿ‌‌ ಪೊಲೀಸ್ ಠಾಣೆಯನ್ನಾಗಿಸಿದ ಇನ್ಸ್ ಪೆಕ್ಟರ್ ರಾವ್ ಗಣೇಶ್ ಜನಾರ್ಧನ್

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆಯನ್ನು ಮಾದರಿ, ಜನಸ್ನೇಹಿ ಪೊಲೀಸ್ ಠಾಣೆಯನ್ನಾಗಿಸಲು ಇನ್ಸ್ ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರು ಅವಿರತವಾಗಿ ಪ್ರಯತ್ನ ಪಡೆಯುತ್ತಲೇ ಇದ್ದಾರೆ.

ರಾವ್ ಗಣೇಶ್ ಜನಾರ್ಧನ್ ಅವರು ಹೊಸಹಳ್ಳಿ ಪೊಲೀಸ್ ಠಾಣೆಗೆ ಇನ್ಸ್ ಪೆಕ್ಟರ್ ಆಗಿ ಬಂದಾಗಿನಿಂದಲೂ ಠಾಣೆಗೆ ಹೊಸ ರೂಪ ಕೊಡಲು ಮುಂದಾಗುತ್ತಿದ್ದಾರೆ. ಮೊದಲು ಠಾಣಾ ಆವರಣದಲ್ಲಿ ಗಿಡಗಂಟಿಗಳು ಬೆಳೆದು ಹುಳ-ಹುಪ್ಪಟೆ, ಹಾವುಗಳ ತಾಣವಾಗಿತ್ತು. ಇದೀಗ ಠಾಣಾ ಸುತ್ತಮುತ್ತ ಇರುವ ಗಿಡಗಂಟಿಗಳನ್ನು ತೆರವುಗೊಳಿಸಿ ಹೂ, ಹಣ್ಣು ನೆರಳು ಕೊಡುವ ಸಸಿಗಳನ್ನು ನೆಟ್ಟು, ಸಸಿಗಳಿಗೆ ನಿತ್ಯ ನೀರು ಸರಬರಾಜುಗಾಗಿ ಈಗಾಗಲೇ ಹನಿ ನೀರಾವರಿ ವ್ಯವಸ್ಥೆ ಮಾಡಿದ್ದು, ಜೊತೆಗೆ ಸ್ಪ್ರಿಂಕ್ಲರ್ ಕೂಡ ಅಳವಡಿಸುವ ಮೂಲಕ ಪರಿಸರ ಸ್ನೇಹಿ ಠಾಣೆಯನ್ನಾಗಿಸಿದ್ದಾರೆ.

ಒಳಿತು,‌ ನ್ಯಾಯ ಯಾರಿಗೆ ತಾನೆ ಬೇಡ? ಅದು ಎಲ್ಲರಿಗೂ ಬೇಕಷ್ಟೆ. ಅದರಲ್ಲೂ ನಮ್ಮ ಸದ್ಯದ ಕಾಲಕ್ಕಂತೂ ಇದು ತುಂಬ ತುರ್ತಾಗಿ ಬೇಕಾಗಿದೆ. ಒಳಿತು ಎಂದರೆ ಯಾವುದು? ಮಂಗಳಕರವಾದದ್ದೇ ಒಳಿತು. ಎಲ್ಲರ ಹಿತವನ್ನು ಎತ್ತಿಹಿಡಿಯುವಂಥದ್ದೇ ‘ಮಂಗಳ’. ಒಳಿತು, ನ್ಯಾಯ, ಶಾಂತಿ, ಶುಭ್ರತೆ, ಮಂಗಳದ ಸಂಕೇತವೇ ಬುದ್ಧ. ಈ‌‌ ಬುದ್ಧನ ಪ್ರತಿಮೆಯನ್ನು ಠಾಣಾ ಆವರಣದಲ್ಲಿ ಪ್ರತಿಷ್ಟಾಪಿಸಿ ಠಾಣೆಗೆ ಬಂದವರಿಗೆ ನ್ಯಾಯ, ಶಾಂತಿ, ಒಳಿತನ್ನು ನೀಡಲು ಪ್ರಯತ್ನಿಸಲಾಗುವುದು ಎಂಬುದನ್ನು ಪರೋಕ್ಷವಾಗಿ ಸಂದೇಶ ನೀಡಲಾಗಿದೆ.

ಠಾಣೆಯ ಕಾಂಪೌಂಡ್ (ಗೋಡೆ) ಮೇಲೆ ಪೊಲೀಸ್ ವ್ಯವಸ್ಥೆ ಬಗೆಗಿನ ಚಿತ್ರಗಳನ್ನು ಪೇಂಟಿಂಗ್ ಮಾಡಿಸಲಾಗಿದೆ. ನೆರಳಲ್ಲಿ ಜನ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಸೇರಿದಂತೆ ಇನ್ನಿತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಮಾದರಿ ಠಾಣೆಯನ್ನಾಗಿ ಮಾರ್ಪಾಡಿಸಿದ್ದಾರೆ.

ಈ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಹಾಗೂ ಪತ್ತೆಹಚ್ಚುವ ಸಲುವಾಗಿ ಕೆಲವು ಸೂಕ್ಷ್ಮ‌, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಅತ್ಯಾಧುನಿಕ ಸುಮಾರು 23 ಸೋಲಾರ್ ಆಧಾರಿತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ.

ಠಾಣಾ ವ್ಯಾಪ್ತಿಯ ವಿವಿಧ ಕೂಡು ರಸ್ತೆ, ಪ್ರಮುಖ ವೃತ್ತಗಳು, ಶಾಲಾ ಆವರಣ, ಕವಲು ರಸ್ತೆ ಮತ್ತು ಅರಣ್ಯ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ.

ಹೊಸಹಳ್ಳಿ ಗ್ರಾಮ ಪಂಚಾಯಿತಿ, ಅರೂಢಿ ಗ್ರಾಮ ಪಂಚಾಯಿತಿ, ದಾನಿಗಳು ಮತ್ತು ಸ್ಥಳೀಯ ಮುಖಂಡರುಗಳು ಸಿಸಿಟಿವಿ ಕ್ಯಾಮೆರಾಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

ಈ ಸೋಲಾರ್ ಸಿಸಿಟಿವಿಗಳು 180 ಡಿಗ್ರಿ ಧ್ವನಿಸಹಿತ ಗ್ರಹಿಸುವ ವ್ಯವಸ್ಥೆ ಹಾಗೂ ಸ್ಪೀಕರ್ ಹೊಂದಿದ್ದು, ಎಲ್ಲಾ ಸಿಸಿ ಕ್ಯಾಮೆರಾಗಳನ್ನು ಠಾಣೆಯ ಮಾನಿಟರ್ ಗೆ ನೇರ ಸಂಪರ್ಕ ಮಾಡಲಾಗಿದ್ದು, 24/7 ಮಾನಿಟರ್ ಮಾಡಲಾಗುತ್ತದೆ. ಇದರ ಜೊತೆಗೆ ಠಾಣಾ ಸಿಬ್ಬಂದಿಯ ಮೊಬೈಲ್ ಗೆ ಲಿಂಕ್ ಮಾಡಲಾಗಿದ್ದು, ತುರ್ತು ಸಂಧರ್ಭಗಳಲ್ಲಿ ಮೊಬೈಲ್ ಮುಖಾಂತರ ಎಚ್ಚರಿಕೆಗಳನ್ನು ನೀಡುವ ವ್ಯವಸ್ಥೆ ಹೊಂದಿವೆ ಎಂದು ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ತಿಳಿಸಿದ್ದಾರೆ.

ಅಪರಾಧ ತಡೆಯುವ ಮತ್ತು ಪತ್ತೆ ಹಚ್ಚುವಲ್ಲಿ ಅತ್ಯಂತ ಅಗತ್ಯವಿದ್ದ ಸಿಸಿಟಿವಿಗಳ ಅಳವಡಿಕೆಯಿಂದ ಸಾರ್ವಜನಿಕರಿಗೆ ಅನುಕೂಲಕರವಾಗಿರುತ್ತದೆ. ಇದಕ್ಕೆ ಸ್ಪಂದಿಸಿದ ಎಲ್ಲಾ ದಾನಿಗಳಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.

ಠಾಣಾ ವ್ಯಾಪ್ತಿಯ ದೊಡ್ಡಹಳ್ಳ ರಸ್ತೆ, ಇತರೆ‌ ರಸ್ತೆಯ ಇಕ್ಕೆಲಗಳಲ್ಲಿ ಮಳೆಯ ಕಾರಣದಿಂದ ಮಣ್ಣು ಕೊಚ್ಚಿ ಹೋಗಿದ್ದು, ವಾಹನಗಳ ಸುಗಮ ಸಂಚಾರಕ್ಕೆ ತೊಡಕಾಗಿದ್ದರಿಂದ ರಸ್ತೆಯ ಬದಿಯ ಗುಂಡಿಗಳಿಗೆ ಮಣ್ಣು ತುಂಬಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅನುವುಮಾಡಿಕೊಟ್ಟಿದ್ದಾರೆ.

ಹೊಸಹಳ್ಳಿ-ದೊಡ್ಡಬಳ್ಳಾಪುರ ರಸ್ತೆಯ ಘಾಟ್ ಪ್ರದೇಶದಲ್ಲಿ ಇತ್ತೀಚೆಗೆ ಅಪಘಾತಗಳು ಸಂಭವಿಸುತ್ತಿದ್ದು, ಅಂತಹ ಅಪಘಾತಗಳನ್ನು ತಡೆಯುವ ಸಲುವಾಗಿ ರಾತ್ರಿವೇಳೆ  ಸಂಚರಿಸುವ ವಾಹನಗಳ ಚಾಲಕರಿಗೆ ಗೋಚರಿಸುವಂತೆ ರಸ್ತೆಯ ತಿರುವುಗಳಲ್ಲಿ ರಿಫ್ಲೆಕ್ಟರ್ ಗಳನ್ನು ಅಳವಡಿಸಿದ್ದಾರೆ.

ಅದೇರೀತಿ‌ ಉತ್ತಮ ಕಾರ್ಯದಕ್ಷತೆ ತೋರಿದ ಪೊಲೀಸ್‌‍ ಅಧಿಕಾರಿ ಮತ್ತು ಸಿಬ್ಬಂದಿಗೆ ರಾಜ್ಯ ಪೊಲೀಸ್‌‍ ಮಹಾ ನಿರ್ದೇಶಕ (DG&IGP)ರ ಹೆಸರಿನಲ್ಲಿ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ನೀಡಲಾಗುತ್ತಿರುವ ಪ್ರಶಂಸನಾ ಸೇವಾ ಪದಕಕ್ಕೆ 200 ಮಂದಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಆಯ್ಕೆಯಾಗಿದ್ದಾರೆ. ಅದರಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಭಾಜನರಾಗಿದ್ದರು.

ಒಟ್ಟಿನಲ್ಲಿ, ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರು ಜನರಿಗೆ ನ್ಯಾಯ ಒದಗಿಸಿಕೊಡುವುದಲ್ಲದೇ ತಾನು ಕೆಲಸ ಮಾಡುವ ಠಾಣೆಯನ್ನೂ ಅಭಿವೃದ್ಧಿಪಡಿಸುವಲ್ಲೂ ಮುಂದೆ ಇದ್ದಾರೆ. ಜನ ಸ್ನೇಹಿ, ಪರಿಸರ ಸ್ನೇಹಿ, ಸಿಬ್ಬಂದಿ ಸ್ನೇಹಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Ramesh Babu

Journalist

View Comments

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

3 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

10 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

13 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

13 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago