ಹೊಸಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರು ವರ್ಗಾವಣೆಗೊಂಡಿದ್ದಾರೆ.
ಬೆಂಗಳೂರು ನಗರದ ಜಯನಗರದಲ್ಲಿರುವ ಬೆಸ್ಕಾಂ ಜಾಗೃತದಳಕ್ಕೆ ವರ್ಗಾವಣೆ ಆಗಿದ್ದಾರೆ.
ರಾವ್ ಗಣೇಶ್ ಜನಾರ್ಧನ್ ಅವರು ಹೊಸಹಳ್ಳಿ ಪೊಲೀಸ್ ಠಾಣೆಗೆ ಇನ್ಸ್ ಪೆಕ್ಟರ್ ಆಗಿ ಬಂದಾಗಿನಿಂದಲೂ ಠಾಣೆಗೆ ಹೊಸ ರೂಪ ಕೊಡಲು ಮುಂದಾಗಿದ್ದರು. ಪೊಲೀಸ್ ಠಾಣೆಯನ್ನು ಮಾದರಿ, ಜನಸ್ನೇಹಿ ಪೊಲೀಸ್ ಠಾಣೆಯನ್ನಾಗಿಸಲು ಇನ್ಸ್ ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರು ಅವಿರತವಾಗಿ ಪ್ರಯತ್ನ ಪಟ್ಟಿದ್ದರು.
ಮೊದಲು ಠಾಣಾ ಆವರಣದಲ್ಲಿ ಗಿಡಗಂಟಿಗಳು ಬೆಳೆದು ಹುಳ-ಹುಪ್ಪಟೆ, ಹಾವುಗಳ ತಾಣವಾಗಿತ್ತು. ಇದೀಗ ಠಾಣಾ ಸುತ್ತಮುತ್ತ ಇರುವ ಗಿಡಗಂಟಿಗಳನ್ನು ತೆರವುಗೊಳಿಸಿ ಹೂ, ಹಣ್ಣು ನೆರಳು ಕೊಡುವ ಸಸಿಗಳನ್ನು ನೆಟ್ಟು, ಸಸಿಗಳಿಗೆ ನಿತ್ಯ ನೀರು ಸರಬರಾಜುಗಾಗಿ ಈಗಾಗಲೇ ಹನಿ ನೀರಾವರಿ ವ್ಯವಸ್ಥೆ ಮಾಡಿದ್ದು, ಜೊತೆಗೆ ಸ್ಪ್ರಿಂಕ್ಲರ್ ಕೂಡ ಅಳವಡಿಸುವ ಮೂಲಕ ಪರಿಸರ ಸ್ನೇಹಿ ಠಾಣೆಯನ್ನಾಗಿಸಿದ್ದರು.
ಒಳಿತು, ನ್ಯಾಯ ಯಾರಿಗೆ ತಾನೆ ಬೇಡ? ಅದು ಎಲ್ಲರಿಗೂ ಬೇಕಷ್ಟೆ. ಅದರಲ್ಲೂ ನಮ್ಮ ಸದ್ಯದ ಕಾಲಕ್ಕಂತೂ ಇದು ತುಂಬ ತುರ್ತಾಗಿ ಬೇಕಾಗಿದೆ. ಒಳಿತು ಎಂದರೆ ಯಾವುದು? ಮಂಗಳಕರವಾದದ್ದೇ ಒಳಿತು. ಎಲ್ಲರ ಹಿತವನ್ನು ಎತ್ತಿಹಿಡಿಯುವಂಥದ್ದೇ ‘ಮಂಗಳ’. ಒಳಿತು, ನ್ಯಾಯ, ಶಾಂತಿ, ಶುಭ್ರತೆ, ಮಂಗಳದ ಸಂಕೇತವೇ ಬುದ್ಧ. ಈ ಬುದ್ಧನ ಪ್ರತಿಮೆಯನ್ನು ಠಾಣಾ ಆವರಣದಲ್ಲಿ ಪ್ರತಿಷ್ಟಾಪಿಸಿ ಠಾಣೆಗೆ ಬಂದವರಿಗೆ ನ್ಯಾಯ, ಶಾಂತಿ, ಒಳಿತನ್ನು ನೀಡಲು ಪ್ರಯತ್ನಿಸಲಾಗುವುದು ಎಂಬುದನ್ನು ಪರೋಕ್ಷವಾಗಿ ಸಂದೇಶ ನೀಡಿದ್ದರು.
ಠಾಣೆಯ ಕಾಂಪೌಂಡ್ (ಗೋಡೆ) ಮೇಲೆ ಪೊಲೀಸ್ ವ್ಯವಸ್ಥೆ ಬಗೆಗಿನ ಚಿತ್ರಗಳನ್ನು ಪೇಂಟಿಂಗ್ ಮಾಡಿಸಿದ್ದರು. ನೆರಳಲ್ಲಿ ಜನ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಸೇರಿದಂತೆ ಇನ್ನಿತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಮಾದರಿ ಠಾಣೆಯನ್ನಾಗಿ ಮಾರ್ಪಾಡಿಸಿದ್ದರು.
ಈ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಹಾಗೂ ಪತ್ತೆಹಚ್ಚುವ ಸಲುವಾಗಿ ಕೆಲವು ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಅತ್ಯಾಧುನಿಕ ಸುಮಾರು 23 ಸೋಲಾರ್ ಆಧಾರಿತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದರು.
ಠಾಣಾ ವ್ಯಾಪ್ತಿಯ ವಿವಿಧ ಕೂಡು ರಸ್ತೆ, ಪ್ರಮುಖ ವೃತ್ತಗಳು, ಶಾಲಾ ಆವರಣ, ಕವಲು ರಸ್ತೆ ಮತ್ತು ಅರಣ್ಯ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದರು.
ಹೊಸಹಳ್ಳಿ ಗ್ರಾಮ ಪಂಚಾಯಿತಿ, ಅರೂಢಿ ಗ್ರಾಮ ಪಂಚಾಯಿತಿ, ದಾನಿಗಳು ಮತ್ತು ಸ್ಥಳೀಯ ಮುಖಂಡರುಗಳು ಸಿಸಿಟಿವಿ ಕ್ಯಾಮೆರಾಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
ಠಾಣಾ ವ್ಯಾಪ್ತಿಯ ದೊಡ್ಡಹಳ್ಳ ರಸ್ತೆ, ಇತರೆ ರಸ್ತೆಯ ಇಕ್ಕೆಲಗಳಲ್ಲಿ ಮಳೆಯ ಕಾರಣದಿಂದ ಮಣ್ಣು ಕೊಚ್ಚಿ ಹೋಗಿದ್ದು, ವಾಹನಗಳ ಸುಗಮ ಸಂಚಾರಕ್ಕೆ ತೊಡಕಾಗಿದ್ದರಿಂದ ರಸ್ತೆಯ ಬದಿಯ ಗುಂಡಿಗಳಿಗೆ ಮಣ್ಣು ತುಂಬಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅನುವುಮಾಡಿಕೊಟ್ಟಿದ್ದಾರೆ.
ಹೊಸಹಳ್ಳಿ-ದೊಡ್ಡಬಳ್ಳಾಪುರ ರಸ್ತೆಯ ಘಾಟ್ ಪ್ರದೇಶದಲ್ಲಿ ಇತ್ತೀಚೆಗೆ ಅಪಘಾತಗಳು ಸಂಭವಿಸುತ್ತಿದ್ದು, ಅಂತಹ ಅಪಘಾತಗಳನ್ನು ತಡೆಯುವ ಸಲುವಾಗಿ ರಾತ್ರಿವೇಳೆ ಸಂಚರಿಸುವ ವಾಹನಗಳ ಚಾಲಕರಿಗೆ ಗೋಚರಿಸುವಂತೆ ರಸ್ತೆಯ ತಿರುವುಗಳಲ್ಲಿ ರಿಫ್ಲೆಕ್ಟರ್ ಗಳನ್ನು ಅಳವಡಿಸಿದ್ದಾರೆ.
ಅದೇರೀತಿ ಉತ್ತಮ ಕಾರ್ಯದಕ್ಷತೆ ತೋರಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ (DG&IGP)ರ ಹೆಸರಿನಲ್ಲಿ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ನೀಡಲಾಗುತ್ತಿರುವ ಪ್ರಶಂಸನಾ ಸೇವಾ ಪದಕಕ್ಕೆ 200 ಮಂದಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಆಯ್ಕೆಯಾಗಿದ್ದರು. ಅದರಲ್ಲಿ ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಭಾಜನರಾಗಿದ್ದರು.
ಅದೇರೀತಿ ಇವರಿಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದ್ದಾರೆ.
ಒಟ್ಟಿನಲ್ಲಿ, ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರು ಜನರಿಗೆ ನ್ಯಾಯ ಒದಗಿಸಿಕೊಡುವುದಲ್ಲದೇ ತಾನು ಕೆಲಸ ಮಾಡುವ ಠಾಣೆಯನ್ನೂ ಅಭಿವೃದ್ಧಿಪಡಿಸುವಲ್ಲೂ ಮುಂದೆ ಇದ್ದರು. ಜನ ಸ್ನೇಹಿ, ಪರಿಸರ ಸ್ನೇಹಿ, ಸಿಬ್ಬಂದಿ ಸ್ನೇಹಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…
ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್…
ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…