ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರವು (ಕುಡಾ) ವಸತಿ ಯೋಜನೆಗಾಗಿ ಬಹಳ ವರ್ಷಗಳ ನಂತರ ಹೊಸ ಬಡಾವಣೆ ನಿರ್ಮಾಣಕ್ಕೆ ಪ್ರಯತ್ನ ಹಾಕುತ್ತಿದ್ದು, ಕಡಿಮೆ ದರದಲ್ಲಿ ನಿವೇಶನ ಹಂಚಿಕೆ ಮಾಡುವ ಸಂಬಂಧ ವಸತಿ ಬಡಾವಣೆ ಯೋಜನೆ ಕೈಗೆತ್ತಿಕೊಳ್ಳಲು ಉದ್ದೇಶಿಸಿದೆ ಎಂದು ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್ ತಿಳಿಸಿದರು.
ಗುರುವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಧಿಕಾರವು ಜಂಟಿ ಯೋಜನೆಗೆ ಮುಂದಾಗಿದೆ. ಭೂಮಾಲೀಕರ ಸಹಭಾಗಿತ್ವದಲ್ಲಿ 50:50 ಅನುಪಾತದ ಒಪ್ಪಂದ ಮಾಡಿಕೊಂಡು ಹೊಸ ಬಡಾವಣೆಗೆ ಅಭಿವೃದ್ಧಿ ಮಾಡಲು ನಿರ್ಧರಿಸಿದೆ ಎಂದರು.
ನಗರ ಹೊರವಲಯದ ಅಮಾನಿಕೆರೆಗೆ ಹೊಂದಿಕೊಂಡಿರುವ ಹಾಗೂ ಗದ್ದೆ ಕಣ್ಣೂರು ಗ್ರಾಮಕ್ಕೆ ಸೇರಿರುವ ನೂರು ಎಕರೆ ಜಮೀನಿನನ್ನು ಅಭಿವೃದ್ಧಿಪಡಿಸಲು ಮುಂದಾಗಿದ್ದೇವೆ. ಎರಡನೇ ಹಂತದಲ್ಲಿ ಅಮಾನಿಕೆರೆ ಗ್ರಾಮದ ಜಮೀನುಗಳಲ್ಲಿ ವಸತಿ ಯೋಜನೆ ರೂಪಿಸಲು ಉದ್ದೇಶಿಸಿದೆ. ಉದ್ದೇಶಿತ ಬಡಾವಣೆಗೆ ಸ್ವಇಚ್ಛೆಯಿಂದ ಭೂಮಿ ನೀಡಲು ಆಸಕ್ತಿ ಇರುವ ಜಮೀನು ಮಾಲೀಕರು ಪ್ರಾಧಿಕಾರವನ್ನು ಸಂಪರ್ಕಿಸಬಹುದು. ಕೋಲಾರ ಅಭಿವೃದ್ಧಿ ಆಗುವುದರ ಜೊತೆಗೆ ರೈತರಿಗೂ ಅನುಕೂಲವಾಗಲಿದೆ. ನಾವೇ ಬಡಾವಣೆ ಅಭಿವೃದ್ಧಿಪಡಿಸಿ 50:50 ಅನುಪಾತದಲ್ಲಿ ರೈತರಿಗೆ ನಿವೇಶನ ನೀಡುತ್ತೇವೆ ಎಂದು ಹೇಳಿದರು.
ಪ್ರಾಧಿಕಾರದಿಂದ ಕಡೆಯ ಬಡಾವಣೆ ಮಾಡಿ ನಿರ್ಮಿಸಿ 30 ವರ್ಷಗಳಾಗಿದೆ. ನಾನು ಬಂದ ಮೇಲೆ ಟಮಕ ಬಡಾವಣೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದೇನೆ. ರಸ್ತೆ ಅಭಿವೃದ್ಧಿಗಾಗಿ ಪಿಡಬ್ಲ್ಯೂಡಿ ಗೆ ಗುತ್ತಿಗೆ ನೀಡಲಾಗಿದೆ. ಇನ್ನು ಮೂರು ತಿಂಗಳಗಳಲ್ಲಿ ಸಂಪೂರ್ಣ ಅಭಿವೃದ್ಧಿ ಆಗಲಿದೆ ಎಂದು ಹೇಳಿದರು.
ರಿಂಗ್ ರೋಡ್ ಮಾಡಲು ಡಿಪಿಆರ್ ಮಾಡಲಾಗಿದೆ. ಪ್ರಾಧಿಕಾರದ ಬಳಿ ಹಣವಿಲ್ಲದ ಕಾರಣ ರಿಂಗ್ ರೋಡ್ ಮಾಡಲು ಸರ್ಕಾರವೇ ಅನುದಾನ ನೀಡಬೇಕಾಗಿದೆ. ಕೋಲಾರ ನಗರ ಸುತ್ತಮುತ್ತ 12 ಕಿ.ಮೀ ರಂತೆ 193 ಹಳ್ಳಿ ಒಳಗೊಂಡಂತೆ ರಿಂಗ್ ರೋಡ್ ಲಿಮಿಟ್ ನಲ್ಲಿ ಅಭಿವೃದ್ಧಿಪಡಿಸಲು ಮುಂದಾಗಿದ್ದೇವೆ. ಅಭಿವೃದ್ಧಿ ಮಾಡಿದ ತಕ್ಷಣವೇ ಸ್ವಾಗತ ಕಮಾನುಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…