Categories: ಕೋಲಾರ

ಹೊಸ ಬಡಾವಣೆ ನಿರ್ಮಾಣಕ್ಕೆ ಪ್ರಯತ್ನ- ಮಹಮ್ಮದ್ ಹನೀಫ್

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರವು (ಕುಡಾ) ವಸತಿ ಯೋಜನೆಗಾಗಿ ಬಹಳ ವರ್ಷಗಳ ನಂತರ ಹೊಸ ಬಡಾವಣೆ ನಿರ್ಮಾಣಕ್ಕೆ ಪ್ರಯತ್ನ ಹಾಕುತ್ತಿದ್ದು, ಕಡಿಮೆ ದರದಲ್ಲಿ ನಿವೇಶನ ಹಂಚಿಕೆ ಮಾಡುವ ಸಂಬಂಧ ವಸತಿ ಬಡಾವಣೆ ಯೋಜನೆ ಕೈಗೆತ್ತಿಕೊಳ್ಳಲು ಉದ್ದೇಶಿಸಿದೆ ಎಂದು ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್ ತಿಳಿಸಿದರು.

ಗುರುವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಧಿಕಾರವು ಜಂಟಿ ಯೋಜನೆಗೆ ಮುಂದಾಗಿದೆ. ಭೂಮಾಲೀಕರ ಸಹಭಾಗಿತ್ವದಲ್ಲಿ 50:50 ಅನುಪಾತದ ಒಪ್ಪಂದ ಮಾಡಿಕೊಂಡು ಹೊಸ ಬಡಾವಣೆಗೆ ಅಭಿವೃದ್ಧಿ ಮಾಡಲು ನಿರ್ಧರಿಸಿದೆ ಎಂದರು.

ನಗರ ಹೊರವಲಯದ ಅಮಾನಿಕೆರೆಗೆ ಹೊಂದಿಕೊಂಡಿರುವ ಹಾಗೂ ಗದ್ದೆ ಕಣ್ಣೂರು ಗ್ರಾಮಕ್ಕೆ ಸೇರಿರುವ ನೂರು ಎಕರೆ ಜಮೀನಿನನ್ನು ಅಭಿವೃದ್ಧಿಪಡಿಸಲು ಮುಂದಾಗಿದ್ದೇವೆ. ಎರಡನೇ ಹಂತದಲ್ಲಿ ಅಮಾನಿಕೆರೆ ಗ್ರಾಮದ ಜಮೀನುಗಳಲ್ಲಿ ವಸತಿ ಯೋಜನೆ ರೂಪಿಸಲು ಉದ್ದೇಶಿಸಿದೆ. ಉದ್ದೇಶಿತ ಬಡಾವಣೆಗೆ ಸ್ವ‌ಇಚ್ಛೆಯಿಂದ ಭೂಮಿ ನೀಡಲು ಆಸಕ್ತಿ ಇರುವ ಜಮೀನು ಮಾಲೀಕರು ಪ್ರಾಧಿಕಾರವನ್ನು ಸಂಪರ್ಕಿಸಬಹುದು. ಕೋಲಾರ ಅಭಿವೃದ್ಧಿ ಆಗುವುದರ ಜೊತೆಗೆ ರೈತರಿಗೂ ಅನುಕೂಲವಾಗಲಿದೆ. ನಾವೇ ಬಡಾವಣೆ ಅಭಿವೃದ್ಧಿಪಡಿಸಿ 50:50 ಅನುಪಾತದಲ್ಲಿ ರೈತರಿಗೆ ನಿವೇಶನ ನೀಡುತ್ತೇವೆ ಎಂದು ಹೇಳಿದರು.

ಪ್ರಾಧಿಕಾರದಿಂದ ಕಡೆಯ ಬಡಾವಣೆ ಮಾಡಿ ನಿರ್ಮಿಸಿ 30 ವರ್ಷಗಳಾಗಿದೆ. ನಾನು ಬಂದ ಮೇಲೆ ಟಮಕ ಬಡಾವಣೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದೇನೆ. ರಸ್ತೆ ಅಭಿವೃದ್ಧಿಗಾಗಿ ಪಿಡಬ್ಲ್ಯೂಡಿ ಗೆ ಗುತ್ತಿಗೆ ನೀಡಲಾಗಿದೆ. ಇನ್ನು ಮೂರು ತಿಂಗಳಗಳಲ್ಲಿ ಸಂಪೂರ್ಣ ಅಭಿವೃದ್ಧಿ ಆಗಲಿದೆ ಎಂದು ಹೇಳಿದರು.

ರಿಂಗ್ ರೋಡ್ ಮಾಡಲು ಡಿಪಿಆರ್ ಮಾಡಲಾಗಿದೆ. ಪ್ರಾಧಿಕಾರದ ಬಳಿ ಹಣವಿಲ್ಲದ ಕಾರಣ ರಿಂಗ್ ರೋಡ್ ಮಾಡಲು ಸರ್ಕಾರವೇ ಅನುದಾನ ನೀಡಬೇಕಾಗಿದೆ. ಕೋಲಾರ ನಗರ ಸುತ್ತಮುತ್ತ 12 ಕಿ.ಮೀ ರಂತೆ 193 ಹಳ್ಳಿ ಒಳಗೊಂಡಂತೆ ರಿಂಗ್ ರೋಡ್ ಲಿಮಿಟ್ ನಲ್ಲಿ ಅಭಿವೃದ್ಧಿಪಡಿಸಲು ಮುಂದಾಗಿದ್ದೇವೆ. ಅಭಿವೃದ್ಧಿ ಮಾಡಿದ ತಕ್ಷಣವೇ ಸ್ವಾಗತ ಕಮಾನುಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.

Ramesh Babu

Journalist

Recent Posts

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

9 hours ago

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

1 day ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

1 day ago

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

2 days ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

2 days ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

3 days ago