2025ನೇ ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಹೊಸ ವರ್ಷದ ಶುಭಾಶಯಗಳು ಕೋರುವ ನೆಪದಲ್ಲಿ ಸೈಬರ್ ಕ್ರಿಮಿನಲ್‌ಗಳು ಸಾರ್ವಜನಿಕರ ಮೊಬೈಲ್‌ಗಳಿಗೆ ಹಾನಿಕಾರಕ ಲಿಂಕ್ ಮತ್ತು APK ಫೈಲ್‌ಗಳನ್ನು ಕಳುಹಿಸಿ ಸಾರ್ವಜನಿಕರ ಮೊಬೈಲ್‌ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇರುತ್ತದೆ. ನಂತರ ಹ್ಯಾಕ್ ಮಾಡಿದ ಮೊಬೈಲಿನಿಂದ ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಹಾನಿಕಾರಕ ಲಿಂಕ್ ಮತ್ತು APK ಫೈಲ್‌ಗಳನ್ನು ದೊಡ್ಡಮಟ್ಟದಲ್ಲಿ ಶೇರ್ ಮಾಡುವ ಸಾಧ್ಯತೆ ಇರುತ್ತದೆ.
ಸಾರ್ವಜನಿಕರು ಈ ರೀತಿಯ ಹೊಸ ವರ್ಷದ ಶುಭಾಶಯ ಕೋರುವ ಯಾವುದೇ ಹಾನಿಕಾರಕ ಲಿಂಕ್‌ಗಳು ಮತ್ತು APK ಫೈಲ್‌ಗಳನ್ನು ವಾಟ್ಸಾಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಿಂದ ಸ್ವೀಕರಿಸಿಕೊಂಡಲ್ಲಿ ಅದನ್ನು ತಕ್ಷಣ ಡಿಲೀಟ್ ಮಾಡಿರಿ. ಯಾವುದೇ ಕಾರಣಕ್ಕೂ ಹಾನಿಕರ ಲಿಂಕ್ ಮತ್ತು APK ಫೈಲ್ ಗಳನ್ನು ಯಾರಿಗೂ ಶೇರ್ ಮಾಡದಿರಿ.
ಹಾನಿಕಾರಕ ಲಿಂಕ್ ಮತ್ತು APK ಫೈಲ್‌ಗಳನ್ನು ಯಾವುದಾದರೂ ವಾಟ್ಸಾಪ್ ಗ್ರೂಪ್ ಗಳಿಗೆ ನಿಮ್ಮ ಪರಿಚಿತ ವಾಟ್ಸಾಪ್ ಸಂಖ್ಯೆಯಿಂದಲೇ ಪೋಸ್ಟ್ ಮಾಡಿದಲ್ಲಿ ಗ್ರೂಪಿನ ಅಡ್ಮಿನ್ ಗಳು ಅಂತಹ ಲಿಂಕ್ ಮತ್ತು APK ಫೈಲ್ ಗಳನ್ನು ಪರಿಶೀಲನೆ ಮಾಡಿ ಡಿಲೀಟ್ ಮಾಡುವಂತೆ ಈ ಮೂಲಕ ಸೂಚಿಸಲಾಗಿದೆ.
ಯಾವುದೇ ಸೈಬರ್ ಕ್ರೈಂ ಅಪರಾಧಕ್ಕೆ ಒಳಗಾದಲ್ಲಿ ಕೂಡಲೇ 1930 ಕ್ಕೆ ಕರೆ ಮಾಡಿ ಅಥವಾ www.cybercrime.gov.in ಈ ವೆಬ್ ಸೈಟ್ ನಲ್ಲಿ ದೂರನ್ನು ದಾಖಲಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಸೂಚಿಸಿದೆ…
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…