Categories: ರಾಜ್ಯ

ಹೊಸ ವರ್ಷದ ಸಂಭ್ರಮಾಚರಣೆಯ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವವರಿಗೆ ಮಾಸ್ಕ್ ಕಡ್ಡಾಯ: ಸಚಿವ ಡಾ.ಕೆ.ಸುಧಾಕರ್

ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ.ಸುಧಾಕರ್ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕಂದಾಯ ಇಲಾಖೆಯ ಜಂಟಿ ಸಭೆ ನಡೆಯಿತು.

ಬೆಂಗಳೂರು ಹಾಗೂ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರಲ್ಲಿ 2% ಜನರಿಗೆ ಕೋವಿಡ್ ಪರೀಕ್ಷೆ ಮಾಡುವುದರ ಜೊತೆಗೆ, CT ವ್ಯಾಲ್ಯೂ 25ಕ್ಕಿಂತ ಕಡಿಮೆ ಇರುವ ಪ್ರಕರಣಗಳ ಮಾದರಿಗಳನ್ನು ಜೀನೋಮಿಕ್ ಪರೀಕ್ಷೆಗೆ ಕಳುಹಿಸಿಕೊಡಲಾಗುವುದು.

ರೋಗಲಕ್ಷಣ ಕಂಡುಬರುವ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲು ಬೆಂಗಳೂರಿನ ಬೋರಿಂಗ್ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳನ್ನು ನಿಗದಿತ ಆಸ್ಪತ್ರೆಗಳು ಎಂದು ಗುರುತಿಸಲಾಗಿದೆ.

ಬೂಸ್ಟರ್ ಡೋಸ್ ಲಸಿಕೆಯ ವ್ಯಾಪ್ತಿಯನ್ನು ಆದಷ್ಟು ಶೀಘ್ರದಲ್ಲಿ 50%ಗೆ ಹೆಚ್ಚಿಸಲು ಹಾಗೂ ಸಮರೋಪಾದಿಯಲ್ಲಿ ಪ್ರತಿಯೊಬ್ಬರಿಗೂ ಮೂರನೆ ಡೋಸ್ ತಲುಪಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ರಚಿಸಲಾಗಿದೆ.

ರೆಸ್ಟೋರೆಂಟ್, ಬಾರ್ ಹಾಗೂ ಪಬ್ ಗಳನ್ನು ರಾತ್ರಿ 1 ಗಂಟೆಯ ನಂತರ ನಡೆಸದಂತೆ ನಿಷೇಧಿಸಲಾಗಿದೆ.

ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಕೋವಿಡ್ ವಿರುದ್ಧದ ಈ ಹೋರಾಟದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕಾಗಿ ಸಾರ್ವಜನಿಕರಲ್ಲಿ ಮನವಿ‌‌ ಮಾಡುತ್ತೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

1 hour ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

16 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

21 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

24 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago