ಹೊಸ ವರ್ಷದ ಸ್ವಾಗತಕ್ಕೆ ಇಡೀ ರಾಜ್ಯವೇ ಸಜ್ಜಾಗುತ್ತಿದೆ. ಇತ್ತ ಹೊಸ ವರ್ಷದ ಆಚರಣೆ ನೆಪದಲ್ಲಿ ನಡೆಯುವ ಮೋಜು-ಮಸ್ತಿ, ಅನಾಹುತ ತಪ್ಪಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ದಕ್ಷಿಣ ಭಾರತದ ಬೇಸಿಗೆ ಗಿರಿಧಾಮ, ಬಡವರ ಊಟಿ ಎಂದೇ ಖ್ಯಾತಿ ಪಡೆದ ಚಿಕ್ಕಬಳ್ಳಾಪುರದ ನಂದಿಬೆಟ್ಟಕ್ಕೆ ಈ ಬಾರಿಯೂ ಪ್ರವೇಶ ನಿಷೇಧಿಸಿರುವುದು ಪ್ರವಾಸಿಗರಿಗೆ ನಿರಾಸೆ ಮೂಡಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯು ಹೊಸ ವರ್ಷದ ಹಿಂದಿನ ದಿನ ಅಂದರೆ ಡಿ.31ರಂದು ನಂದಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ನಂದಿ ಬೆಟ್ಟ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೊಸ ವರ್ಷದ ಹಿನ್ನಲೆ ಅಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಂದಿ ಗಿರಿಧಾಮಕ್ಕೆ ಮುಂಗಡವಾಗಿ ಅತಿಥಿ ಕೊಠಡಿಗಳನ್ನು ಕಾಯ್ದಿರಿಸಿರುವ ಪ್ರವಾಸಿಗರನ್ನು ಹೊರತುಪಡಿಸಿ ಡಿಸೆಂಬರ್ 31 ರ ಮಧ್ಯಾಹ್ನ 2 ಗಂಟೆಯಿಂದ 2026ರ ಜನವರಿ 1 ರ ಮಧ್ಯಾಹ್ನ 2 ಗಂಟೆಯರವರೆಗೆ ಸಾರ್ವಜನಿಕರ, ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶ ಹೊರಡಿಸಿದ್ದಾರೆ.
ಡಿ.31 ಮಧ್ಯಾಹ್ನದಿಂದ ಜ.1 ಮಧ್ಯಾಹ್ನ 2ಗಂಟೆಯವರೆಗೆ ಈ ನಿಷೇಧ ಜಾರಿಯಲ್ಲಿದ್ದು, ಪಾನಮತ್ತರಾಗಿ ವಾಹನ ಚಾಲನೆ ಮಾಡುವುದು ಮತ್ತು ಬೆಟ್ಟದ ಕಡಿದಾದ ರಸ್ತೆಗಳಲ್ಲಿ ಸಂಭವಿಸಬಹುದಾದ ಅಪಘಾತಗಳನ್ನು ತಡೆಗಟ್ಟಲು ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಈ ಬಗ್ಗೆ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…
1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…
ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…
ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…
ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…