ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು ಇಲ್ಲಿವೆ ಓದಿ….
• ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು.
• ಹೊಸ ವರ್ಷಾಚರಣೆ ಬಳಿಕ ಜನರು ಸುಲಭವಾಗಿ ಜನರು ತಮ್ಮ ಮನೆಗಳಿಗೆ ಹಿಂತಿರುಗಲು ಅನುಕೂಲವಾಗುವಂತೆ ಮಧ್ಯರಾತ್ರಿ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್‌ಗಳ ವ್ಯವಸ್ಥೆಯನ್ನು ಮಾಡಬೇಕು.
• ಮಹಾತ್ಮ ಗಾಂಧಿ ರಸ್ತೆ, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ, ಇಂದಿರಾನಗರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜನದಟ್ಟಣೆಯಾಗಿ ಯಾವುದೇ ಅನಾಹುತವಾಗದಂತೆ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕು.
• ಭದ್ರತೆಗಾಗಿ 20 ಸಾವಿರ ಪೊಲೀಸರನ್ನು ಬೆಂಗಳೂರು ನಗರದಲ್ಲಿ ನಿಯೋಜಿಸಲಾಗುತ್ತಿದ್ದು, ಬೇರೆ ಜಿಲ್ಲೆಗಳಿಂದ 1,200 ಪೊಲೀಸರನ್ನು ಈ ಬಾರಿ ನಿಯೋಜಿಸುತ್ತಿದ್ದೇವೆ. ಮಹಿಳಾ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಬೇಕು. ಚೆನ್ನಮ್ಮ ಪಡೆಗಳನ್ನು ಸಕ್ರಿಯವಾಗಿ ನಿಯೋಜಿಸಬೇಕು.
• ನಗರದಲ್ಲಿ ಹೊಸ ವರ್ಷಾಚರಣೆ ಸುಗಮವಾಗಿ ನಡೆಯಲು ಸಾಧ್ಯವಾಗುವಂತೆ 4 ಕಂಟ್ರೋಲ್ ರೂಂ, 78 ಕಾವಲು ಗೋಪುರ, 164 ಮಹಿಳಾ ಸಹಾಯ ಡೆಸ್ಕ್, 55 ಆ್ಯಂಬುಲೆನ್ಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಕಳೆದ ಮೂರು ದಿನಗಳಲ್ಲಿ 3,500 ಡ್ರಿಂಕ್ ಆಂಡ್ ಡ್ರೈವ್ ಪ್ರಕರಣಗಳನ್ನು ದಾಖಲಿಸಲಾಗಿದೆ.
• ನಗರದಲ್ಲಿರುವ 50 ಫ್ಲೈ ಓವರ್ಗಳಲ್ಲಿ ಹೊಸ ವರ್ಷಾಚರಣೆ ರಾತ್ರಿ ದ್ವಿಚಕ್ರ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗುವುದು.
• ಕಿಡಿಗೇಡಿಗಳ ಮೇಲೆ ನಿರಂತರ ನಿಗಾ ಇರಿಸಬೇಕು. ವ್ಹೀಲಿಂಗ್ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಮಾದಕ ದ್ರವ್ಯ ಚಟುವಟಿಕೆಗಳ ನಿಯಂತ್ರಣಕ್ಕೆ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಬೇಕು.
• ಹೊಸ ವರ್ಷವನ್ನು ಸಂಭ್ರಮದ ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬರಮಾಡಿಕೊಳ್ಳುವ ವ್ಯವಸ್ಥೆಯನ್ನು ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ.
ಈ ವೇಳೆ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ ರಾವ್ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.
1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…
ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…
ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…
ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…