ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ 14 ಗ್ರಾಮಗಳಲ್ಲಿನ ಬುಡಕಟ್ಟು/ ಆದಿವಾಸಿ ಸಮುದಾಯದವರು ಹೋಂಸ್ಟೇ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಸಾಸಲು ಗ್ರಾಮ ಪಂಚಾಯಿತಿಯ ಗುಮ್ಮನಹಳ್ಳಿ ಗ್ರಾಮ, ಹಣಬೆ ಗ್ರಾಮ ಪಂಚಾಯಿತಿಯ ಬೊಮ್ಮನಹಳ್ಳಿ ಗ್ರಾಮ, ಬಿಜ್ಜವಾರ ಗ್ರಾಮ ಪಂಚಾಯಿತಿಯ ಹೊಲೆರಹಳ್ಳಿ ಗ್ರಾಮ, ಗೊಡ್ಡುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿಯ ವೆಂಕಟೇನಹಳ್ಳಿ ಗ್ರಾಮ, ಮಂಡಿಬೆಲೆ ಗ್ರಾಮ ಪಂಚಾಯಿತಿಯ ಚಿಕ್ಕ ತತ್ತಮಂಗಲ ಗ್ರಾಮ, ಕಾರಹಳ್ಳಿ ಗ್ರಾಮ ಪಂಚಾಯಿತಿಯ ಕೆಂಪತಿಮ್ಮನಹಳ್ಳಿ ಗ್ರಾಮ, ಅಥೇಶ್ವರ ಗ್ರಾಮ ಪಂಚಾಯಿತಿಯ ಯರ್ತಿಗಾನಹಳ್ಳಿ ಮತ್ತು ಭುವನಹಳ್ಳಿ ಗ್ರಾಮ, ಬೆಟ್ಟಕೋಟೆ ಗ್ರಾಮ ಪಂಚಾಯಿತಿಯ ರಾಯಸಂದ್ರ ಗ್ರಾಮ, ಯಲಿಯೂರು ಗ್ರಾಮ ಪಂಚಾಯಿತಿಯ ಮಟ್ಟಬರಳು ಮತ್ತು ಬೊಮ್ಮನಹಳ್ಳಿ ಗ್ರಾಮ, ನಲ್ಲೂರು ಗ್ರಾಮ ಪಂಚಾಯಿತಿಯ ಜೊನ್ನಹಳ್ಳಿ ಗ್ರಾಮ, ಕೋರಮಂಗಲ ಗ್ರಾಮ ಪಂಚಾಯಿತಿಯ ಕೊಂಡೇನಹಳ್ಳಿ ಗ್ರಾಮ ಮತ್ತು ದೊಡ್ಡನಳ್ಳಾಲ ಗ್ರಾಮ ಪಂಚಾಯಿತಿಯ ವಲಗೆರೆಪುರ ಈ ಗ್ರಾಮಗಳನ್ನು ಅಭಿವೃದ್ಧಿಪಡಿಸಿ ಬುಡಕಟ್ಟು ಸಮುದಾಯದ ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪತ್ತನ್ನು ಪ್ರವಾಸಿಗರಿಗೆ ಪರಿಚಯಿಸಲು ಉದ್ದೇಶಿಸಲಾಗಿದೆ.
ಹೋಂ ಸ್ಟೇ ನಿರ್ಮಿಸಲು ರೂ.5.00 ಲಕ್ಷ, ನವೀಕರಿಸಲು ರೂ.3.00 ಲಕ್ಷ ಸಹಾಯಧನ ನೀಡುವ ಯೋಜನೆಯನ್ನು ಪ್ರವಾಸೋದ್ಯಮ ಇಲಾಖೆಯಿಂದ ನೀಡಲಾಗುತ್ತದೆ.
ಅರ್ಹ ಆಸಕ್ತ ವ್ಯಕ್ತಿಗಳು ಆಗಸ್ಟ್ 11 ರೊಳಗೆ ಅರ್ಜಿ ನಮೂನೆಯನ್ನು ಜಿಲ್ಲಾ ಪ್ರವಾಸೋದ್ಯಮ ಕಛೇರಿಯಲ್ಲಿ ಪಡೆದು ಅವಶ್ಯಕ ದಾಖಲೆಗಳಾದ ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ವರ್ಗ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಮನೆಯ ದಾಖಲೆ, ಮನೆಯ ಪೋಟೋ, ಡಿಕ್ಲೇರೇಷನ್ ಫಾರ್ಮ್ , ಗ್ರಾಮ ಪಂಚಾಯಿತಿಯ ಎನ್.ಓ.ಸಿ, ಪೋಲೀಸ್ ಇಲಾಖೆಯ ಎನ್.ಓ.ಸಿ ದಾಖಲೆಗಳ ಜೆರಾಕ್ಸ್ ಪ್ರತಿಗಳೊಂದಿಗೆ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ,ನೆಲಮಹಡಿ 09, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:080-22040633 ಅನ್ನು ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…