ಹೋಟೆಲ್ ನಲ್ಲಿ ತನ್ನ ಪಾಡಿಗೆ ತಾನು ಊಟ ಮಾಡುತ್ತಿದ್ದ ವ್ಯಕ್ತಿ ಮೇಲೆ ದುಶ್ಕರ್ಮಿಗಳು ಅಟ್ಯಾಕ್ ಮಾಡಿ, ಲಾಂಗ್ ಮಚ್ಚುಗಳಿಂದ ಮನಸ್ಸೋಯಿಚ್ಛೆ ಹಲ್ಲೆ ನಡೆಸಿದ್ದಾರೆ.
ಯಲಹಂಕ ಬಳಿಯ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಘಟನೆ ನಡೆದಿದೆ.
ಕೈ ಕತ್ತರಿಸಿ, ಕಾಲು ದೇಹದ ಮೇಲೆ ದುಷ್ಕರ್ಮಿಗಳು ಲಾಂಗ್ ಬೀಸಿ ಪರಾರಿಯಾಗಿದ್ದಾರೆ.
ಘಟನೆಯಲ್ಲಿ ಮಂಜುನಾಥ್ ಎಂಬ ವ್ಯಕ್ತಿ ಮಾರಣಾಂತಿಕವಾಗಿ ಹಲ್ಲೆಗೆ ತುತ್ತಾಗಿ ಆಸ್ಪತ್ರೆ ಪಾಲಾಗಿದ್ದಾನೆ.
ಶ್ರೀರಾಮ್ ಎಂಬಾತ ತನ್ನ ಹುಡುಗರೊಂದಿಗೆ ಹಲ್ಲೆ ನಡೆಸಿದ್ದಾರೆ. ಆರೋಪಿ ಶ್ರೀರಾಮ್ ಮತ್ತು ಆತನ ಸಂಗಡಿಗರು ದೇವನಹಳ್ಳಿಯ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭೋವಿಪಾಳ್ಯದ ನಿವಾಸಿಗಳಾಗಿದ್ದಾರೆ.
ತಂದೆಯ ಕೊಲೆ ಕೇಸ್ ನಲ್ಲಿ ಮಂಜುನಾಥ್ ಸಹಾಯ ಮಾಡಿಲ್ಲ ಎಂಬ ಕಾರಣಕ್ಕೆ ಹಲ್ಲೆ ಮಾಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಹಲ್ಲೆ ಸ್ಥಳಕ್ಕೆ ಚಿಕ್ಕಜಾಲ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…