Categories: ರಾಜ್ಯ

ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯ: ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು- ಸಿಎಂ ಸಿದ್ದರಾಮಯ್ಯ

ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು. ಕರ್ನಾಟಕ ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಎಚ್.ಪಾಟೀಲ್ ಮತ್ತು ಎಲ್ಲಾ ಹೋರಾಟದ ಸಂಗಾತಿಗಳನ್ನು ಇಂದು ನಾನು ಸ್ಮರಿಸುತ್ತೇನೆ. ಅವತ್ತು ಕೆ.ಹೆಚ್.ಪಾಟೀಲ್, ಇಂದು ಹೆಚ್.ಕೆ.ಪಾಟೀಲ್. ಅವತ್ತು ದೇವರಾಜ ಅರಸು ಕುಳಿತಿದ್ದ ಮುಖ್ಯಮಂತ್ರಿ ಕುರ್ಚಿಯಲ್ಲಿ ಇವತ್ತು ನಾನು ಕುಳಿತಿದ್ದೇನೆ. ಇದೇನು ಕಾಕತಾಳೀಯ ಅಲ್ಲ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ.

ಗದಗದಲ್ಲಿ “ಕರ್ನಾಟಕ ಸಂಭ್ರಮ-50” ಅದ್ಧೂರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಅವರು, ಇಂಗ್ಲಿಷ್ ನಲ್ಲಿ ಶೇಕ್ಸ್ ಪಿಯರ್ ಸಾಹಿತ್ಯ ರಚಿಸುವುದಕ್ಕೂ 500 ವರ್ಷಗಳ ಮೊದಲೇ ಕನ್ನಡದಲ್ಲಿ ವಿಶ್ವ ಮಟ್ಟದ ಅತ್ಯುನ್ನತ ಸಾಹಿತ್ಯ ರಚನೆಯಾಗಿತ್ತು. ಪಂಪನಿಂದ ಹಿಡಿದು ವಚನಕಾರರನ್ನೂ ಸೇರಿಸಿ ಹಲವರು ಅತ್ಯುನ್ನತ ಸಾಹಿತ್ಯ ರಚಿಸಿದ್ದರು ಎಂದರು.

ಕನ್ನಡ ಕಲಿಯದೆಯೂ ಕರ್ನಾಟಕದಲ್ಲಿ ವ್ಯವಹರಿಸಬಹುದು ಎನ್ನುವ ವಾತಾವರಣ ಬದಲಾಗಬೇಕು. ಕನ್ನಡದ ಸಂಸ್ಕೃತಿ ಜತೆಗೆ ನಮ್ಮೆಲ್ಲರಲ್ಲಿ ಕನ್ನಡತನ ಬೇರೂರಬೇಕು. ಆಗ ಮಾತ್ರ ಕನ್ನಡದ ವಾತಾವರಣ ಇಡಿ ನಾಡಿನಲ್ಲಿ ಪಸರಿಸುತ್ತದೆ ಎಂದು ಹೇಳಿದರು.

ಕನ್ನಡ ಸಂಸ್ಕೃತಿ ಎಂದಾಗ ಬಸವಾದಿ ಶರಣರ ಕಾಯಕ ಸಂಸ್ಕೃತಿಯೂ ಸೇರಿದೆ. ಬಸವಣ್ಣನವರ ಆಶಯದಂತೆ ವರ್ಗರಹಿತ, ಜಾತಿರಹಿತ ಸಮಾಜದ ನಿರ್ಮಾಣ ಮತ್ತು ಈ ಸಮಾಜದ ಅಭಿವೃದ್ಧಿ ನಮ್ಮ ಗುರಿಯಾಗಿದೆ. ಆ ಕಾರಣಕ್ಕೇ ಸರ್ವ ಜಾತಿ-ಧರ್ಮದವರ ಬದುಕನ್ನು ಎತ್ತರಿಸುವ ಗ್ಯಾರಂಟಿ ಕಾರ್ಯಕ್ರಮಗಳನ್ನು ನಾವು ನೀಡಿದ್ದೇವೆ.

ಹಿಂದೆ ಕೆ.ಹೆಚ್.ಪಾಟೀಲರು ಇಡೀ ಜಿಲ್ಲೆಗೆ ಕುಡಿಯುವ ನೀರು ಕೊಟ್ಟರು. ಅವರ ಪುತ್ರ ಹೆಚ್.ಕೆ.ಪಾಟೀಲರೂ ಇಡೀ ರಾಜ್ಯಕ್ಕೆ ಉತ್ತಮ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಹೀಗಾಗಿ ನಾಮಪತ್ರ ಸಲ್ಲಿಸಿದರೆ ಸಾಕು, ನೀವೆಲ್ಲಾ ಹೆಚ್.ಕೆ.ಪಾಟೀಲರನ್ನು ಗೆಲ್ಲಿಸಬೇಕು. ಇಡೀ ರಾಜ್ಯಕ್ಕೆ ಅಷ್ಟೊಂದು ಕೆಲಸ ಮಾಡಿರುವ ಹೆಚ್.ಕೆ.ಪಾಟೀಲರು ಮತ ಕೇಳಬಾರದು. ನೀವೆಲ್ಲಾ ಅವರನ್ನೂ ಹಾಗೇ ಗೆಲ್ಲಿಸಬೇಕು ಎಂದರು.

ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಲು ಈಗಾಗಲೇ ರೂ.61 ಕೋಟಿ ನೀಡಿದ್ದೇವೆ. ಅಗತ್ಯ ಬಿದ್ದರೆ ಮತ್ತಷ್ಟು ಹಣ ಕೊಡಲು ನಮ್ಮ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

60 minutes ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

3 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

3 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

4 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

6 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

10 hours ago