ಬೆಂಗಳೂರು: ಹೋಳಿ ಗಮ್ಮತ್ತಿನಲ್ಲಿ ಕಂಠಪೂರ್ತಿ ಮದ್ಯ ಸೇವಿಸಿ ನಶೆ ತಲೆಗೇರಿಸಿಕೊಂಡಿದ್ದ ಬಿಹಾರ ಮೂಲದ ಆರು ಕಾರ್ಮಿಕರು ಪರಸ್ಪರ ಹೊಡೆದಾಡಿಕೊಂಡ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಸರ್ಜಾಪುರ – ಬಾಗಲೂರು(ತಮಿಳುನಾಡು) ಮುಖ್ಯ ರಸ್ತೆಯ ತಿಂಡ್ಲು ಅಪಾರ್ಟ್ಮೆಂಟ್ವೊಂದರಲ್ಲಿ ಶನಿವಾರ ನಡೆದಿದೆ.
ಮೃತ ದುರ್ದೈವಿಗಳನ್ನು ಬಿಹಾರ ಮೂಲದ ರಾಧೆಶ್ಯಾಮ್, ಕನ್ಸರ್, ದೀಪು ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಸರ್ಜಾಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಹೋಳಿ ಹಬ್ಬದ ರಜೆ ಇದ್ದ ಹಿನ್ನೆಲೆಯಲ್ಲಿ ಕೂಲಿ ಕೆಲಸಕ್ಕೆ ಬೆಂಗಳೂರಿಗೆ ಬಂದಿದ್ದ ಬಿಹಾರದ ಒಂದೇ ಗ್ರಾಮದ ವಾಸಿಗಳು ನಿನ್ನೆ ಎಣ್ಣೆ ಪಾರ್ಟಿ ಮಾಡಿದ್ದರು. ಈ ವೇಳೆ ಮಹಿಳೆ ವಿಚಾರಕ್ಕೆ ಗಲಾಟೆ ನಡೆದಿದೆ. ಕಂಠಪೂರ್ತಿ ಕುಡಿದು ಕೈಗೆ ಸಿಕ್ಕ ದೊಣ್ಣೆ ಮತ್ತು ರಾಡ್‌ನಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹಲ್ಲೆ ವೇಳೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾದ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…
ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…