₹150 ಕೋಟಿ ಬೆಲೆ ಬಾಳುವ ಜಮೀನು ಸರ್ಕಾರದ ವಶಕ್ಕೆ – “ಕೊಟ್ಟೋನು ಕೋಡಂಗಿ ಇಸ್ಕೋಂಡೋನು ಈರಭದ್ರ”

ದೊಡ್ಡಬಳ್ಳಾಪುರ: ತಹಶೀಲ್ದಾರ್ ನೀಡಿದ ವರದಿಯ ಆಧಾರದ ಮೇಲೆ ವಿಚಾರಣೆ ನಡೆಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಾಲ್ಲೂಕಿನ ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ರ ಸರ್ಕಾರಿ ಗೋಮಾಳ ಜಮೀನಿನಲ್ಲಿ ಆಹಾರ ಧಾನ್ಯ ಉತ್ಪಾದನೆ ಸಲುವಾಗಿ ರೈತರಿಗೆ ಜಿಎಂಎಫ್ ಯೋಜನೆಯಡಿ ಹಂಗಾಮಿಯಾಗಿ ಸಾಗುವಳಿ ಚೀಟಿ ನೀಡಲಾಗಿದ್ದ ಸುಮಾರು 38 ಎಕರೆ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯುವಂತೆ ಜೂನ್ 18 ರಂದು ಆದೇಶ ಮಾಡಿದ್ದಾರೆ.

ಜಿಎಂಎಫ್ ಯೋಜನೆಯಲ್ಲಿ ರೈತರಿಗೆ ಸರ್ಕಾರದಿಂದ ಮಂಜೂರಾಗಿರುವ ಜಮೀನುಗಳು ಕಾನೂನಾತ್ಮಕವಾಗಿ ವಹಿವಾಟು ಆಗದೇ ಇರುವುದರಿಂದ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವುದು ಅವಶ್ಯಕವಾಗಿದೆ. ಹಾಗಾಗಿ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ಪಡೆಯಲು ದೊಡ್ಡಬಳ್ಳಾಪುರ ತಹಶೀಲ್ದಾರ್ ಅವರಿಗೆ ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಸರ್ಕಾರದ ವಶಕ್ಕೆ ಪಡೆಯಲಾಗುತ್ತಿರುವ ಈ ಜಮೀನು ಈಗಿನ ಮಾರುಕಟ್ಟೆ ಬೆಲೆಯಲ್ಲಿ ಸುಮಾರು ₹150 ಕೋಟಿ ಬೆಲೆ ಬಾಳಬಹುದು ಎಂದು ಅಂದಾಜಿಸಲಾಗಿದೆ. ಹುಲಿಕುಂಟೆ ಸಮೀಪ ಸರ್ಕಾರ ವಶಕ್ಕೆ ಪಡೆಯುತ್ತಿರುವ ಈ ಜಮೀನಿನ ಸುತ್ತಲು ಈಗಾಗಲೇ ಕೆಎಐಡಿಬಿ ಕ್ವಿನ್ ಸಿಟಿ ಹಾಗೂ ಹೈಟೆಕ್ ಲಾಜಿಸ್ಟಿಕ್ ಪಾರ್ಕ್ ಸ್ಥಾಪನೆಗಾಗಿ ಸುಮಾರು 2 ಸಾವಿರ ಎಕರೆ ಭೂಸ್ವಾಧೀನ ಮಾಡಿಕೊಂಡಿದೆ.

ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ಕ್ಕೆ ಸಂಬಂಧಿಸಿದಂತೆ ನಡೆದಿರಬಹುದಾದ ಅಕ್ರಮ ವಹಿವಾಟಿನ ಕುರಿತು ತನಿಖೆ ನಡೆಸಿ 15 ದಿನಗಳ ಒಳಗೆ ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮೂರು ಜನರ ಸಮಿತಿ ರಚಿಸಿ ಜೂನ್ 13 ರಂದು ಕಂದಾಯ ಇಲಾಖೆಯ(ವಿಶೇಷ ಕೋಶ) ಅಧೀನ ಕಾರ್ಯದರ್ಶಿ ಕೆ.ಎಸ್.ಶೈಲಶ್ರೀ ಅವರು ಸಹ ಆದೇಶ ಹೊರಡಿಸಿದ್ದಾರೆ.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

12 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

13 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

13 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

20 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

21 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

1 day ago