0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೀಡಿದ ಪ್ರಮುಖ ನಿರ್ದೇಶನಗಳನ್ನು ಮಾಧ್ಯಮಗೋಷ್ಠಿಯಲ್ಲಿ ಹಂಚಿಕೊಂಡರು:

ಪ್ರಮುಖ ನಿರ್ದೇಶನಗಳ ವಿವರ

• ಟೀಮ್ ಕರ್ನಾಟಕ: ನಾವೆಲ್ಲರೂ ಒಂದೇ ತಂಡ, ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ. ಸಮಸ್ಯೆಯೊಂದಿಗೆ ಬಂದ ಜನರಿಗೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು. ಅಧಿಕಾರಿಗಳ ವರ್ಗದಲ್ಲಿ ನಾವು ಸಾಮಾಜಿಕ ನ್ಯಾಯವನ್ನು ಪಾಲಿಸುತ್ತೇವೆ.

• 0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು. ನಾವು ಭ್ರಷ್ಟಾಚಾರ ಮುಕ್ತ ಕರ್ನಾಟಕ ನಿರ್ಮಿಸೋಣ. ಯಾರಾದರೂ ಕಾನೂನು ವಿರುದ್ಧ ಕೆಲಸ ಮಾಡಲು ಒತ್ತಡ ಹಾಕಲು ಬಂದರೆ ಕೂಡಲೇ ನನಗೆ ಮಾಹಿತಿ ನೀಡಬೇಕು.

• ರೌಡಿಸಂ & ಡ್ರಗ್ಸ್ ಮುಕ್ತ: ಗಾಂಜಾ, ಡ್ರಗ್ಸ್ ಹಾಗೂ ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಪ್ರತಿ ಪೊಲೀಸ್ ಠಾಣೆಯಲ್ಲಿ ಐದು ಪೊಲೀಸರ ತಂಡವನ್ನು ರಚಿಸಿ ರೌಡಿಸಂ ನಿಗ್ರಹಕ್ಕೆ ಸೂಚಿಸಿದ್ದೇನೆ. ನಕಲಿ ಫೈನಾನ್ಸ್‌ಗಳ ಹಾವಳಿಯನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು.

• ಶಿಕ್ಷಣಕ್ಕೆ ಆದ್ಯತೆ: ವಿದ್ಯಾರ್ಥಿಗಳ ಸಮವಸ್ತ್ರ, ಶೂ, ಪಠ್ಯ ಪುಸ್ತಕ ಮುಂದಿನ ಒಂದು ತಿಂಗಳಲ್ಲಿ ವಿತರಣೆಯಾಗಬೇಕು. ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ನೂತನ ಸಿಎಸ್ಆರ್ (CSR) ನೀತಿ ತರುತ್ತಿದ್ದೇವೆ.

• ಮಳೆ ಕೊರತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ: ಬಿತ್ತನೆ ಕಾರ್ಯ ಶುರುವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಲಭ್ಯತೆಗೆ ಕ್ರಮವಹಿಸಬೇಕು. ಎಲ್ ನಿನೋ ಪ್ರಭಾವ ಬೀರುವ ಸಾಧ್ಯತೆ ಇದ್ದು, ಅಲ್ಪಾವಧಿ ಮಳೆ ಮುನ್ಸೂಚನೆ ಇದೆ. 30% ಮಳೆ ಕೊರತೆ ಇದ್ದು, ಮೇವಿನ ಪೂರೈಕೆಗೆ ಕ್ರಮ ಕೈಗೊಳ್ಳಬೇಕು.

• ಗ್ಯಾರಂಟಿ ಪರಿಷ್ಕರಣೆ: ನಾವು ಯೋಜನೆಯನ್ನು ನಿಲ್ಲಿಸುವುದಿಲ್ಲ, ಯಾರನ್ನೂ ತೆಗೆದುಹಾಕುವ ಉದ್ದೇಶವಿಲ್ಲ. ಸರಿಯಾದ ಮಾಹಿತಿ ಇರುವ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಬೇಕು ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಗೆ ಪುನಃ ಅರ್ಜಿ ಪಡೆಯಲಾಗುವುದು.

• ಮತದಾನದ ಹಕ್ಕು ರಕ್ಷಣೆ: ಮತದಾನದ ಹಕ್ಕಿಲ್ಲವಾದರೆ ಸರ್ಕಾರದ ಐದು ಗ್ಯಾರಂಟಿಗಳು, ಪಿಂಚಣಿ ಸಿಗುವುದಿಲ್ಲ. ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಬಿಎಲ್ಒಗಳು ನೀಡುವ ಎನ್ಯುಮರೇಷನ್ ಅರ್ಜಿಯನ್ನು ಸಲ್ಲಿಸಿ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕು. ವಾಸ ಪ್ರಮಾಣ ಪತ್ರ ಇಲ್ಲದವರಿಗೆ ಅದನ್ನು ಶೀಘ್ರವೇ ನೀಡಲು ಸೂಚಿಸಲಾಗಿದೆ.

• ಉದ್ಯೋಗ ವಿನಿಮಯ ಮತ್ತು ಭಾರತ್ ಜೋಡೋ ಯುವಕರ ಸಂಘ: ಸ್ಥಳೀಯ ಯುವಕರಿಗೆ ಉದ್ಯೋಗ ಕಲ್ಪಿಸಲು ಖಾಸಗಿ ಉದ್ಯೋಗ ವಿನಿಮಯದ ಮೂಲಕ ಯುವ ಯುಗ ಆರಂಭಿಸುತ್ತಿದ್ದೇವೆ. ಯುವಕರ ಪ್ರತಿಭೆಗಳ ಅನಾವರಣಕ್ಕೆ ರಾಜಕೀಯೇತರ ‘ಭಾರತ್ ಜೋಡೋ ಯುವಕರ ಸಂಘ’ ರಚಿಸಿ, ವಾರ್ಷಿಕ ₹10 ಲಕ್ಷ ಅನುದಾನ ನೀಡಲಾಗುವುದು. ಇದು ನನ್ನ ಕನಸಿನ ಯೋಜನೆಯಾಗಿದೆ.

• ವರ್ತುಲ ರಸ್ತೆ ಯೋಜನೆ: ಸುಗಮ‌ ಸಂಚಾರಕ್ಕಾಗಿ ಎಲ್ಲಾ ತಾಲ್ಲೂಕುಗಳಲ್ಲಿ ವರ್ತುಲ ರಸ್ತೆ ನಿರ್ಮಿಸಲು, ಗ್ರಿಡ್ ರೂಪಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

13 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago